Breaking News

ನರೇಗಾ ಬಚಾವ್ ಸಂಗ್ರಾಮ್ ಪ್ರತಿಭಟನೆ; ಕಾಂಗ್ರೆಸ್ ವತಿಯಿಂದ ವಿಜಯಪುರ ನಗರದಲ್ಲಿ ರ್ಯಾಲಿ

Spread the love

ವಿಜಯಪುರ ನಗರ ಮತಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ನರೇಗಾ ಬಚಾವ್ ಸಂಗ್ರಾಮ್’ ಪ್ರತಿಭಟನೆ ನಗರದ ಮಧ್ಯಭಾಗದಲ್ಲಿರುವ ಮಹಾತ್ಮ ಗಾಂಧೀಜಿ ವೃತ್ತದಿಂದ ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಮೀದ ಮುಶ್ರಿಷ್, ಹಲವು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯನ್ನು ಬಿಜೆಪಿ ಸರ್ಕಾರವು ವಿ.ಬಿ.ಜಿ.ರಾಮ ಜಿ ಯೋಜನೆ ಎಂದು ಪರಿವರ್ತಿಸಲು ಮುಂದಾಗಿರುವುದು ಖಂಡನೀಯ ಎಂದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಅಭಿವೃದ್ಧಿಗೆ ಒತ್ತು ನೀಡುವ ಬದಲು ಕೇವಲ ಹೆಸರು ಬದಲಾವಣೆ ಕಾರ್ಯಗಳಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದರು.
ಹಲವಾರು ವರ್ಷಗಳಿಂದ ಸರ್ಕಾರ ನಡೆಸಿಕೊಂಡು ಬಂದಿರುವ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಅವರು ದೂರಿದರು.
ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ