ಚಿಕ್ಕಮಗಳೂರು: ನಗರದ ಹೊರವಲಯದಲ್ಲಿರುವ ಪವಿತ್ರವನದ ನಿರ್ಜನ ಪ್ರದೇಶದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬನಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಈತ ನಗರದ ಹೌಸಿಂಗ್ ಬೋರ್ಡ್ನಲ್ಲಿರುವ ವೃತ್ತಿಪರ ಕಾಲೇಜಿನ ಬಾಲಕರ ನಿಲಯದಲ್ಲಿ ಇದ್ದುಕೊಂಡು ಮೆಡಿಕಲ್ ಕಾಲೇಜಿನಲ್ಲಿ ಸರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ. ನ.7 ರಂದು ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ.
ಚಿಕ್ಕಮಗಳೂರು ನಗರ ಠಾಣೆಯಲ್ಲಿ ಬಾಲಕನ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಇಂದು ಚಿಕ್ಕಮಗಳೂರು ನಗರದ ಹೊರವಲಯ ಜಿಲ್ಲಾ ಪಂಚಾಯಿತಿ ಸಮೀಪದ ಪವಿತ್ರವನದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ರಕ್ಷಿತ್ ಮೃತದೇಹ ಪತ್ತೆಯಾಗಿದೆ. ದೇಹದ ಬಣ್ಣ ಹಾಗೂ ಆಕಾರ ನೋಡಿದರೆ ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರೋದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಸ್ಥಳಕ್ಕೆ ಚಿಕ್ಕಮಗಳೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ಹಾಗೂ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಸಾಬೀತಾಗಲಿದೆ.
Laxmi News 24×7