ಉಡುಪಿ: ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ ಅವರಿಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ವತಿಯಿಂದ ಅನುಷಾ ರೈ ಅವರನ್ನು ಗೌರವಿಸಲಾಯಿತು.

ಬಳಿಕ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದ ಅವರು, ದೇವಸ್ಥಾನದ ವತಿಯಿಂದ ಆಯೋಜಿಸಲಾಗಿರುವ ವಿಶಿಷ್ಟ ಧಾರ್ಮಿಕ ಅಭಿಯಾನವಾದ ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಭಿಯಾನದ ಅಂಗವಾಗಿ ಭಕ್ತಿಭಾವದಿಂದ ನವದುರ್ಗಾ ಲೇಖನ ಬರೆದ ಅನುಷಾ ರೈ, ಕಾಪು ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು.
ಬಿಗ್‌ಬಾಸ್ ರಿಯಾಲಿಟಿ ಶೋ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ನಟಿ ಅನುಷಾ ರೈ ಅವರು, ದೇವಿಯ ದರ್ಶನದೊಂದಿಗೆ ಧಾರ್ಮಿಕ ಅಭಿಯಾನದಲ್ಲಿಯೂ ಪಾಲ್ಗೊಂಡಿದ್ದು ಭಕ್ತರ ಗಮನ ಸೆಳೆಯಿತು.
Laxmi News 24×7