Breaking News

ಬೆಂಗಳೂರಿನಲ್ಲಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಕೊಲೆ – ಪ್ರಿಯಕರನಿಂದಲೇ ದುಷ್ಕೃತ್ಯ

Spread the love

ಬೆಂಗಳೂರು: ನಗರದ ಕಾಟನ್ ಪೇಟೆಯ ಮಸ್ತಾನ್ ದರ್ಗಾ ಬಳಿಯ  ಲಾಡ್ಜ್‌ವೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪ್ರಿಯಕರ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಇಬ್ಬರು ಕೂಡ ಕೇರಳದ ಆಡೂರು ಮೂಲದವರಾಗಿದ್ದು, ಗಂಗಾ ಕೊಲೆಯಾದ ವಿದ್ಯಾರ್ಥಿನಿ. ಪ್ರಿಯಕರನನ್ನು ಗೋಕುಲ್ ಕೃಷ್ಣ ಎಂದು ಗುರುತಿಸಲಾಗಿದೆ.

ಮೃತ ಗಂಗಾ ಹಾಗೂ ಆರೋಪಿ ಗೋಕುಲ್ ಇಬ್ಬರು ಕಳೆದ ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೊಲೆಗೆ ಮುನ್ನ ಆರೋಪಿ ಚಾಕು ಖರೀದಿ ಮಾಡಿದ್ದು, ಇಂದು (ನ.27) ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ಈ ವೇಳೆ ಜಗಳ ತಾರಕಕ್ಕೇರಿದ್ದು, ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸದ್ಯ ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.


Spread the love

About Laxminews 24x7

Check Also

ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ ಮಗು ಸಾವು

Spread the loveದಾವಣಗೆರೆ: ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ 4 ವರ್ಷದ ಮಗು  ಸಾವನ್ನಪ್ಪಿದ ಘಟನೆ ಚನ್ನಗಿರಿ  ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ