ಚಿಕ್ಕೋಡಿ ನಗರದ ಪರಣ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಮತ್ತಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಇಂದು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು
ಕಾರ್ಯಕ್ರಮದಲ್ಲಿ ಪರೀಕ್ಷಾ ತಯಾರಿ ವಿಧಾನಗಳು, ಸಮಯ ನಿರ್ವಹಣೆ ಕೌಶಲ್ಯ, ಒತ್ತಡ ನಿಯಂತ್ರಣ ಹಾಗೂ ಹೆಚ್ಚಿನ ಅಂಕಗಳನ್ನು ಸಾಧಿಸಲು ಅಗತ್ಯವಾದ ತಂತ್ರಗಳ ಕುರಿತು ತಜ್ಞರು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ಉತ್ತಮ ಸಾಧನೆಗೆ ಪ್ರೇರಣೆ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಸಂದೇಹಗಳಿಗೆ ಸಮರ್ಪಕ ಉತ್ತರಗಳನ್ನು ಪಡೆದುಕೊಂಡರು. ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಫಲಿತಾಂಶ ತರಲು ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಇದರ ಸಕಾರಾತ್ಮಕ ಪರಿಣಾಮ ಕಾಣಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತೇನೆ.
Laxmi News 24×7