Breaking News

ಆನ್‌ಲೈನ್ ಬೆಟ್ಟಿಂಗ್ ಹಗರಣ – ವೀರೇಂದ್ರ ಪಪ್ಪಿ & ಇತರರಿಗೆ ಸೇರಿದ 23.35 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Spread the love

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ  ಮತ್ತು ಇತರರಿಗೆ ಸೇರಿದ 23.35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಗುಲ್ಷನ್ ಖಟ್ಟರ್, ನೇಹಾ ಟಂಡನ್‌ಗೆ ಸೇರಿದ ಒಟ್ಟು 23.35 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿ ತಾತ್ಕಾಲಿಕ ಜಪ್ತಿ ಮಾಡಿದ್ದು, 13.76 ಕೋಟಿ ರೂ. ಮೌಲ್ಯದ ಚರಾಸ್ತಿ, 9.58 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ವಶಕ್ಕೆ ಪಡೆಯಲಾಗಿದೆ. ಕಿಂಗ್ 567 ಸೇರಿದಂತೆ ವಿವಿಧ ಅಕ್ರಮ ಬೆಟ್ಟಿಂಗ್ ಆಪ್‌ಗಳ ನಿರ್ವಹಣೆ ಆರೋಪ ಕೇಳಿಬಂದಿದ್ದು, ಆನ್‌ಲೈನ್ ಬೆಟ್ಟಿಂಗ್ ಮೂಲಕ ಆಟಗಾರರಿಗೆ ವಂಚಿಸಿ, ಹಣ ಸಂಗ್ರಹಿಸಲಾಗಿದೆ.

ನಕಲಿ ಕಂಪನಿಗಳು, ಮ್ಯೂಲ್ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದ್ದು, ಹವಾಲಾ ಮತ್ತು ವಿದೇಶಿ ಹಣ ವರ್ಗಾವಣೆ ಮಾರ್ಗಗಳ ಬಳಕೆ ಮಾಡಿರೋದು ಗೊತ್ತಾಗಿದೆ. 2,300 ಕೋಟಿ ರೂ.ಗೂ ಅಧಿಕ ಅಕ್ರಮ ಹಣ ವರ್ಗಾವಣೆ ನಡೆದಿರುವುದಾಗಿ ಇಡಿ ಅಧಿಕಾರಿಗಳಿಗೆ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ.

ಈ ಹಿಂದೆ ದೇಶದ ವಿವಿಧ ರಾಜ್ಯಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ರು. ಪ್ರಮುಖ ಆರೋಪಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್‌ಎ ಕಾಯ್ದೆಯಡಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಈವರೆಗೆ 343 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ