Breaking News

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Spread the love

ದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ  ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ  ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಎರಡೂ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಇಂದು ಬಹಿರಂಗ ಪ್ರಚಾರ ಅಂತ್ಯಕ್ಕೂ ಮುನ್ನ ಕೊನೆಯ ದಿನದ ಕಸರತ್ತು ನಡೆಸಿದ್ರು. ನಾಳೆ ಸಂಜೆಯವರೆಗೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ.

ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎರಡೂ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಭರ್ಜರಿ ಮತಯಾಚನೆ ಮಾಡಿದ್ರು. ದಾವಣಗೆರೆ ದಕ್ಷಿಣ ಕ್ಷೇತ್ರದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಡಿಸಿಎಂ ಡಿಕೆಶಿ ರೋಡ್ ಶೋ ನಡೆಸಿದರು. ಈ ಉಪಚುನಾವಣೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

ಕಾಂಗ್ರೆಸ್‌ನವರು ಹಣದ ಹೊಳೆಯನ್ನೇ ಹರಿಸಿದರೂ ಬಿಜೆಪಿಗೆ ಜನರು ಅಶೀರ್ವಾದ ಮಾಡಲಿದ್ದಾರೆ ಅಂತ ಬಿಜೆಪಿ ಅಭ್ಯರ್ಥಿ ಕರಿಯಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಾಹುಕಾರ್ ಮತ್ತು  ಬಡವರ ನಡುವೆ ನಡೆಯುತ್ತಿರೋ ಚುನಾವಣೆ ಎಂದು ಆರ್.ಅಶೋಕ್ ಹೇಳಿದರು.


Spread the love

About Laxminews 24x7

Check Also

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Spread the loveದಾವಣಗೆರೆ: ಪಂಚಮಸಾಲಿ ಮಠದ ವಿವಾದ ಭಾರೀ ಭುಗಿಲೆದ್ದಿದೆ. ಮಠದ ಟ್ರಸ್ಟಿಗಳ ವಿರುದ್ಧ ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ