Breaking News

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶ ಇಲ್ಲ: ಈಶ್ವರ ಖಂಡ್ರೆ

Spread the love

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ  ಸೂಚನೆ ನೀಡಿದ್ದಾರೆ.

ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದ್ದು, ರಾಜ್ಯದ ಮೂಲೆಮೂಲೆಗಳಿಂದ ಅಷ್ಟೇ ಅಲ್ಲದೆ ದೇಶ ವಿದೇಶಗಳಿಂದಲೂ ಪ್ರವಾಸಿಗರು, ವನ್ಯಜೀವಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ. ಅದೃಷ್ಟವಶಾತ್ ಈವರೆಗೆ ಸಫಾರಿ ಪ್ರದೇಶಗಳಲ್ಲಿ ಆನೆಗಳು, ಹುಲಿಗಳು ಸೇರಿದಂತೆ ಯಾವುದೇ ವನ್ಯಮೃಗಗಳು ಸಫಾರಿ ವಾಹನಗಳ ಮೇಲೆ ದಾಳಿ ಮಾಡಿ ಜೀವಹಾನಿ ಮಾಡಿದ ಘಟನೆಗಳು ಸಂಭವಿಸಿಲ್ಲ. ಆದಾಗ್ಯೂ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.ಸಫಾರಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇನ್ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸಂಪೂರ್ಣ ಸುರಕ್ಷಿತವಾದ ಬಸ್ ಸಫಾರಿಗೆ ಹೆಚ್ಚಿನ ಆದ್ಯತೆ ನೀಡಿ. ಹಾಲಿ ಬಳಕೆಯಲ್ಲಿರುವ ಕ್ಯಾಂಪರ್‌ಗಳಿಗೆ ಕಬ್ಬಿಣದ ಸರಳುಗಳಿಂದ ಕೂಡಿದ ಜಾಲರಿಗಳನ್ನು ಅಥವಾ ಒಡೆಯಲಾಗದ ಗಾಜು ಅಳವಡಿಸಿ ಬಳಸುವ ಬಗ್ಗೆ ಕ್ರಮವಹಿಸಿ. ಯಾವುದೇ ಪ್ರವಾಸಿಗರು ಅರಣ್ಯದೊಳಗೆ ಇಳಿಯಲು ಅವಕಾಶ ನೀಡದಂತೆ ಮತ್ತು ಪ್ರತಿ ಸಫಾರಿ ವಾಹನದಲ್ಲಿ ಪ್ರಥಮ ಚಿಕಿತ್ಸೆಯ ಕಿಟ್ ಹಾಗೂ ಸಫಾರಿ ಕೇಂದ್ರಗಳಿಗೆ ಸಮೀಪದಲ್ಲಿ ಅಂಬುಲನ್ಸ್ ವಾಹನ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ 6 ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು

Spread the loveರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನ ಬಳಿಯ ಜಾಗದ ವಿವಾದ ಹಿನ್ನೆಲೆ ರಾಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ