Breaking News

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Spread the love

ಹುಬ್ಬಳ್ಳಿ: ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು ಎಂದು ಯೋಗೇಶ್ ಗೌಡ ಸಹೋದರಿ ಅಕ್ಕಮ್ಮ ಹೇಳಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ  ಅವರು ಯೋಗೇಶ್ ಗೌಡ ಕೊಲೆ ಕೇಸಲ್ಲಿ‌  ಅಪರಾಧಿಯಾಗಿದ್ದಾರೆ. ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಇವತ್ತು ವಿನಯ್ ಕುಲಕರ್ಣಿ ದೋಷಿ ಅಂತ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಗುರುವಾರ ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಲಿದೆ. ಎ15 ವಿನಯ್ ಕುಲಕರ್ಣಿ ಸೇರಿ 19 ಮಂದಿಯನ್ನು ಕೋರ್ಟ್ ಅಪರಾಧಿಗಳು ಎಂದು ಹೇಳಿದೆ.

ಈ ಸಂಬಂಧ ‘ಪಬ್ಲಿಕ್ ಟಿವಿ’ ಜೊತೆ ಯೋಗೇಶ್ ಗೌಡ ಅಕ್ಕ ಅಕ್ಕಮ್ಮ ಹಾಗೂ ತಂಗಿ ಜಗದೀಶ್ವರಿ ಮಾತನಾಡಿದ್ದಾರೆ. ನಿಮ್ಮ ಹಣ, ಅಧಿಕಾರ ಯಾವತ್ತೂ ಶಾಶ್ವತ ಅಲ್ಲಾ. ಇಂದು ನ್ಯಾಯ ಗೆದ್ದಿದೆ. ನಮ್ಮ ತಮ್ಮನ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಯೋಗೇಶ್ ಗೌಡ ಪರ ತೀರ್ಪು ಖುಷಿ ಕೊಟ್ಟಿದೆ. ಇಷ್ಟು ವರ್ಷ ನಾವು ಪಟ್ಟ ಕಷ್ಟಕ್ಕೆ ದೇವರು ಈಗ ನಮ್ಮ ಜೊತೆಗೆ ನಿಂತಿದ್ದಾನೆ ಎಂದು ಯೋಗೇಶ್ ಗೌಡ ನೆನೆದು ಸಹೋದರಿಯರು ಕಣ್ಣೀರಿಟ್ಟಿದ್ದಾರೆ.

2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದೀಗ ಎ15 ವಿನಯ್ ಕುಲಕರ್ಣಿ ಸೇರಿ 19 ಮಂದಿಯನ್ನು ಕೋರ್ಟ್ ಅಪರಾಧಿಗಳು ಅಂತ ಹೇಳಿದೆ. ಉಳಿದ ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣು ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ. 19 ಮಂದಿಯನ್ನು ಕಸ್ಟಡಿಗೆ ಪಡೆಯಲು ಹಾಗೂ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಬಗ್ಗೆ ತನಿಖೆ ನಡೆಸಲೂ ರಿಜಿಸ್ಟ್ರಾರ್‌ಗೆ ಕೋರ್ಟ್ ಸೂಚನೆ ನೀಡಿದೆ. ನಾಳೆ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಲಿದ್ದು, ಜಡ್ಜ್ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದಾರೆ.


Spread the love

About Laxminews 24x7

Check Also

ಧಾರವಾಡದ ಅಣ್ಣಿಗೇರಿ ಬಸಾಪುರದಲ್ಲಿ ಮನೆ ಕಳ್ಳತನ ಪ್ರಕರಣ, ವಾರದಲ್ಲಿ ಇಬ್ಬರು ಆರೋಪಿಗಳ ಬಂಧನ

Spread the loveಧಾರವಾಡ- ಕಳೆದ ಏಪ್ರಿಲ್ 2ರಂದು ಧಾರವಾಡ ಜಿಲ್ಲೆ ಅಣ್ಣಿಗೇರಿ ತಾ. ಬಸಾಪುರ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ