Breaking News

ಡಿಜೆ ಬಳಕೆಗೆ ಅನುಮತಿ ನೀಡದ್ದಕ್ಕೆ ಆಕ್ರೋಶ; ಗಣೇಶ ವಿಸರ್ಜನೆ ಅರ್ಧಕ್ಕೆ ನಿಲ್ಲಿಸಿ ಮರುಪ್ರತಿಷ್ಠಾಪನೆ

Spread the love

ಹಾವೇರಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ  ಡಿಜೆ ಬಳಕೆಗೆ ಪೊಲೀಸರು ಅನುಮತಿ ನೀಡದಿದ್ದಕ್ಕೆ ಆಕ್ರೋಶಗೊಂಡ ಯುವಕರು, ವಿಸರ್ಜನಾ ಮೆರವಣಿಗೆಯನ್ನು ಅರ್ಧದಲ್ಲೇ ನಿಲ್ಲಿಸಿ ಗಣೇಶ ಮೂರ್ತಿಯನ್ನು ವಾಪಸ್ ತಂದು ಮರುಪ್ರತಿಷ್ಠಾಪನೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕೇರೂರು ಗ್ರಾಮದ ಬನಶಂಕರಿ ಗಜಾನನ ಯುವಕ ಸಂಘದ ವತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಬಳಿಕ ವಿಸರ್ಜನೆಗಾಗಿ ಮೆರವಣಿಗೆ ಆರಂಭಿಸಲಾಗಿತ್ತು. ಆದರೆ, ನಿಯಮಗಳ ಕಾರಣ ನೀಡಿ ಪೊಲೀಸರು ಡಿಜೆ ಬಳಕೆಗೆ ಅನುಮತಿ ನಿರಾಕರಿಸಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಯುವಕ ಸಂಘದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ವಾಗ್ವಾದವೂ ನಡೆದಿದೆ. ಡಿಜೆ ಬಳಕೆಗೆ ಅನುಮತಿ ನೀಡಲೇಬೇಕು ಎಂದು ಸಮಿತಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

ಪೊಲೀಸರಿಂದ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಸುಮಾರು 600 ಮೀಟರ್ ದೂರ ಸಾಗಿದ್ದ ಗಣೇಶ ಮೆರವಣಿಗೆಯನ್ನು ಅರ್ಧದಲ್ಲೇ ನಿಲ್ಲಿಸಲಾಗಿದೆ. ಬಳಿಕ ಗಣೇಶ ಮೂರ್ತಿಯನ್ನು ವಾಪಸ್ ತೆಗೆದುಕೊಂಡು ಹೋಗಿ ಮರುಪ್ರತಿಷ್ಠಾಪನೆ ಮಾಡಿದ್ದಾರೆ.

ಡಿಜೆ ಬಳಕೆಗೆ ಅನುಮತಿ ನೀಡುವವರೆಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವುದಿಲ್ಲ ಎಂದು ಯುವಕ ಸಂಘದ ಸದಸ್ಯರು ಹೇಳಿದ್ದಾರೆ. ಅಲ್ಲದೆ, ಡಿಜೆ ನಿರ್ಬಂಧ ಮುಂದುವರಿದರೆ ಚಿಕ್ಕೇರೂರು ಪಟ್ಟಣ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಘಟನೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಿಸ್ಥಿತಿ ಕುರಿತು ಪೊಲೀಸರು ನಿಗಾ ವಹಿಸಿದ್ದಾರೆ.


Spread the love

About Laxminews 24x7

Check Also

ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್‌!

Spread the loveಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆರಂಭದ ಹೊಸ್ತಿಲಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ