Breaking News

ಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪಿಎಂ ಸೂರ್ಯಘರ್; ಮಫ್ತ್ ಬಿಜ್ಲಿ ಯೋಜನೆ’  ದೇಶಾದ್ಯಂತ ಯಶಸ್ವಿಯಾಗಿ ಜಾರಿಯಾಗುತ್ತಿದ್ದು, ಇದುವರೆಗೆ 48.02 ಲಕ್ಷಕ್ಕೂ ಅಧಿಕ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ತಿಳಿಸಿದ್ದಾರೆ.

2024ರ ಫೆಬ್ರವರಿಯಲ್ಲಿ ಆರಂಭವಾದ ಈ ಯೋಜನೆಯಡಿ ಈಗಾಗಲೇ 39.72 ಲಕ್ಷಕ್ಕೂ ಹೆಚ್ಚು ಸೌರ ಮೇಲ್ಚಾವಣಿ (ರೂಫ್‌ಟಾಪ್ ಸೋಲಾರ್) ವ್ಯವಸ್ಥೆಗಳು ಅಳವಡಿಕೆಯಾಗಿದ್ದು, ಗ್ರಾಮೀಣ ಪ್ರದೇಶಗಳ ಮನೆಗಳಿಗೂ ಯೋಜನೆ ವಿಸ್ತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯೋಜನೆಯ ಮಹತ್ವದ ಸಾಧನೆಯೆಂದರೆ, 18.93 ಲಕ್ಷಕ್ಕೂ ಅಧಿಕ ಫಲಾನುಭವಿಗಳು ವಿದ್ಯುತ್ ಬಳಕೆ ಹಾಗೂ ಸ್ವಯಂ ಉತ್ಪಾದನೆಯ ಆಧಾರದ ಮೇಲೆ ಶೂನ್ಯ ವಿದ್ಯುತ್ ಬಿಲ್ ಪಡೆದಿದ್ದಾರೆ ಎಂದು ಡಿಸ್ಕಾಂಗಳ ವರದಿ ಉಲ್ಲೇಖಿಸಿ ಸಚಿವರು ತಿಳಿಸಿದ್ದಾರೆ.

2025-26ನೇ ಸಾಲಿನಲ್ಲಿ ಮಾತ್ರ 18.71 ಲಕ್ಷ ಸೌರ ಮೇಲ್ಚಾವಣಿ ವ್ಯವಸ್ಥೆಗಳು ಸ್ಥಾಪನೆಯಾಗಿದ್ದು, 6.7 ಗಿಗಾವ್ಯಾಟ್ ಸೌರ ವಿದ್ಯುತ್ ಸಾಮರ್ಥ್ಯ ಸೇರ್ಪಡೆಯಾಗಿದೆ. ಇದರ ಮೂಲಕ 22.71 ಲಕ್ಷ ಮನೆಗಳಿಗೆ ಪ್ರಯೋಜನ ದೊರೆತಿದೆ. ವಸತಿ ಮನೆಗಳ ಜೊತೆಗೆ ಸರ್ಕಾರಿ ಕಚೇರಿಗಳು, ಶೈಕ್ಷಣಿಕ ಹಾಗೂ ಆರೋಗ್ಯ ಸಂಸ್ಥೆಗಳು ಸೇರಿದಂತೆ ವಾಣಿಜ್ಯ ಕಟ್ಟಡಗಳಲ್ಲಿಯೂ ಸೌರ ಮೇಲ್ಚಾವಣಿ ಅಳವಡಿಸಲು ಅವಕಾಶವಿದೆ. ಆದರೆ, ಇವುಗಳಿಗೆ ಕೇಂದ್ರ ಸರ್ಕಾರದ ಹಣಕಾಸು ಸಹಾಯ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಯೋಜನೆಯ ಲಾಭ ಪಡೆಯಲು ಆಸಕ್ತರು ಪಿಎಂ ಸೂರ್ಯಘರ್ ರಾಷ್ಟ್ರೀಯ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜೋಶಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ