Home / ಜಿಲ್ಲೆ / ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಪುಂಡರು ವಶಕ್ಕೆ

ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಪುಂಡರು ವಶಕ್ಕೆ

Spread the love

ಬೆಂಗಳೂರು, ಏ.21- ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯ ಪಾತ್ರೆ ಪ್ರತಿಷ್ಠಾನ ಹಾಗೂ ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಪರಿಶೀಲಿಸಿದರಲ್ಲದೆ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನ್ಯಾಯಾಲಯದ ಆದೇಶದ ಪ್ರಕಾರ ಬಂಧಿತರೆಲ್ಲರನ್ನೂ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದರು. ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆ್ಯಕ್ಟ್ ಪ್ರಕಾರ ಬಂಧಿಸಲಾಗಿದೆ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಸಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತೇವೆ.ಅಗತ್ಯವಾದರೆ ರಾಷ್ಟ್ರೀಯ ಭದ್ರತಾಕಾಯ್ದೆಯನ್ವಯ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಕೊರೊನಾ ಡೇಂಜರ್ ಝೋನ್‍ನಲ್ಲಿರುವ ಎಲ್ಲ ಜಿಲ್ಲಾ ಮತ್ತು ಬೆಂಗಳೂರಿನ ಬಡಾವಣೆಗಳನ್ನು ಸೀಲ್‍ಡೌನ್ ಮಾಡಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಸ್ತುತ ಪಾದರಾಯನಪುರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.ದುಷ್ಕರ್ಮಿಗಳನ್ನು ಹೆಡೆಮುರಿ ಕಟ್ಟಲು ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ.

ಯಾವುದೇ ರೀತಿಯಲ್ಲಿ ಕಾನೂನು ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಿ ಜಾರಿಗೊಳಿಸಿ ದುಷ್ಕರ್ಮಿಗಳನ್ನು ನಿಯಂತ್ರಿಸಲಾಗುವುದು ಎಂದು ಹೇಳಿದರು. ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ನಿಯಂತ್ರಿಸಲು ಸರ್ಕಾರ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಿದ್ಧವಿದೆ. ಎಲ್ಲರ ಸಹಕಾರ ಅಗತ್ಯವಿದೆ ಎಂದು ಗೃಹ ಸಚಿವರು ಹೇಳಿದರು.

# ಇನ್ನೂ 60 ಮಂದಿ ವಶಕ್ಕೆ :
ನಗರದ ಪಾದರಾಯನಪುರದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 60 ಮಂದಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಗರದ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಮೊನ್ನೆ ಸಂಜೆ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಿನ್ನೆ 59 ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ ನಾಲ್ವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆ ಮಾಡಲಾಗಿದೆ.

ಇವರ ಪಾತ್ರ ಏನು ಎಂಬ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಹೇಳಿದರು. ಇನ್ನುಳಿದ 54 ಆರೋಪಿಗಳನ್ನು ಕಲ್ಯಾಣ ಮಂಟಪದಲ್ಲಿ ಇಡಲಾಗಿದ್ದು, ಇಂದು ವಶಕ್ಕೆ ಪಡೆಯಲಾಗಿರುವ 60 ಮಂದಿಯನ್ನು ವಿಚಾರಣೆಗೆ ಒಳಪಡಿಸಿ ನಂತರ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ