ಬೆಂಗಳೂರು, ಏ.23- ಪಾದರಾಯನಪುರ ಗಲಾಟೆ ಪ್ರಕರಣ ಮುಕ್ತಾಯವಾಗಿದ್ದು, ಸಹಜ ಸ್ಥಿತಿಗೆ ಮರಳಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಗಲಭೆಗೆ ಸಂಬಂಧಿಸಿದಂತೆ ಇನ್ನೂ 20 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈಗಾಗಲೇ ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಲಾಕ್‍ಡೌನ್ ಸ್ವಲ್ಪ ಸಡಿಲಿಕೆ ಮಾಡಲಾಗಿದ್ದು, ಕಟ್ಟಡ ಕಾರ್ಮಿಕರ ಜವಾಬ್ದಾರಿ ಗುತ್ತಿಗೆದಾರರೇ ನೋಡಿಕೊಳ್ಳಬೇಕು ಎಂದು ಭಾಸ್ಕರ್‍ರಾವ್ ಸೂಚಿಸಿದ್ದಾರೆ.
ಕಟ್ಟಡ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಗುತ್ತಿಗೆದಾರರೇ ಜವಾಬ್ದಾರಿ ವಹಿಸಿಕೊಳ್ಳಬೇಕು, ಅವರಿಗೆ ಪಾಸ್ ವಿಚಾರ ನೋಡಿಕೊಳ್ಳಬೇಕು, ಕಚೇರಿಗೆ ಗುತ್ತಿಗೆದಾರರು ಬಂದರೆ ಪಾಸ್ ವಿತರಣೆ ಮಾಡಲಾಗುವುದು ಎಂದರು.