ವಿಜಯಪುರ: ಯಾವುದೇ ಕಾರಣಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎಂದು ಸಾರಿದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಟ್ಟದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಂದು ಹೇಳಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರು ಏನೇ ಮಾತನಾಡಿದರೂ ಭಾರತದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ, ಈ ವಿಷಯದನ್ನು ನಾನಲ್ಲ ಸ್ವಯಂ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. …
Read More »ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್
ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು ಎಂಬುದು ಅವರಿಗೆ ಗೊತ್ತಿದೆ. ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ವಿಶ್ವದ ಆರ್ಥಿಕ ಮುಂಚೂಣಿಯ …
Read More »UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ
UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ ಧಾರವಾಡ: ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಕೋಚಿಂಗ್ ಸೆಂಟರ್‌ಗಳಲ್ಲಿ ಲಕ್ಷಾಂತರ ಹಣ ಸುರಿದು ತರಬೇತಿ ಪಡೆದುಕೊಳ್ಳುವುದು ಇತ್ತಿಚೆಗೆ ಅತೀಯಾಗಿ ನಡೆಯುತ್ತಿದೆ. ಆದರೆ ಹಣ ಖರ್ಚು ಮಾಡಲು ಸಾಧ್ಯವಾಗದ, ಆದರೆ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ಗುರುವಾಗಿ ಸಹಾಯ ಮಾಡಿ ಗುರಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಧಾರವಾಡದ ಕೃಷಿ ವಿವಿಯ ಪ್ರಾಧ್ಯಾಪಕಿ ಡಾ.ಅಶ್ವಿನಿ ಅವರು. …
Read More »HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಬೆಳಗಾವಿ: ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎನ್ನುತ್ತಿರುವ ಕುಮಾರಸ್ವಾಮಿ ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೆಣ್ಣು ಮಕ್ಕಳು ದಡ್ಡರಾ? ಎಲ್ಲ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ ಇದು. ನಿಮ್ಮ ಬದುಕಿನಲ್ಲಿ ನಿಮ್ಮ ಬದಲಾವಣೆಗೆ ಶಕ್ತಿ ಕೊಡಲು ಪಂಚ ಗ್ಯಾರಂಟಿ ನೀಡಿದ್ದೇವೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಎಲ್ಲ ಮಹಿಳೆ ಯರು ಪಕ್ಷಭೇದ ಮರೆತು …
Read More »ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಅಂತ್ಯಕ್ರಿಯೆ
6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್ (Dwarakish) ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ (Heart Attack) ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ (Dwarakish No More) ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್ವುಡ್ (Sandalwood) ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ …
Read More »ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್
ಧಾರವಾಡ: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್‌ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್ ಪಡೆದಿದ್ದಾರೆ. ಸೌಭಾಗ್ಯ ಅವರು ದಾವಣಗೆರೆಯವರು. ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ. ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ‘ಬುದಕಿನಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ನಮ್ಮ …
Read More »ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಹೇಳಿದ್ದಾರೆ. …
Read More »ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು..!
ಬೆಂಗಳೂರು : ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸಂತಾಪ ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ …
Read More »ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ
ವಿಜಯಪುರ : ಕಾಂಗ್ರೆಸ್ ಪಕ್ಷದಲ್ಲಿ ಭಾರತ ಮಾತಾಕಿ ಜೈ ಎನ್ನಲು ಶಾಸಕ ಲಕ್ಷ್ಮಣ ಸವದಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪರವಾನಿಗೆ ಕೇಳುತ್ತಾರೆ. ಪಾಕಿಸ್ಥಾನ ಜಿಂದಾಬಾದ್ ಎನ್ನಲು ಇವರಿಗೆ ಯಾರ ಪರವಾನಿಗೆ ಬೇಕಿಲ್ಲ. ಪಂಚಾಯತ್‍ನಿಂದ ಪಾರ್ಲಿಮೆಂಟ್ ವರೆಗೆ ಅವರು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ ಮಾಜಿ ಸಚಿವ ಸಿ.ಟಿ.ರವಿ ಕುಟುಕಿದ್ದಾರೆ. ಮಂಗಳವಾರ ವಿಜಯಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ ಜಿಗಜಿಣಗಿ ಪರ ಬಹಿರಂಗ ನಗರದ ದರ್ಬಾರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ …
Read More »ತಾಕತ್ತಿದ್ದರೆ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ: BSY
ದಾವಣಗೆರೆ: ಕಾಂಗ್ರೆಸ್ ಗೆ ತಾಕತ್ತಿದ್ದರೆ ರಾಜ್ಯದಲ್ಲಿ ತಮ್ಮ ಪಕ್ಷ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು. ಸೋಮವಾರ ಮಾಯಕೊಂಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತ್ಯಾವಣಗಿಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರ ಬಲದಿಂದ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ …
Read More »
Laxmi News 24×7