Breaking News

ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ಕೋಲಾರ, ಏಪ್ರಿಲ್.01: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು (Hanging) ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.  

Read More »

ಪ್ರಧಾನಿ ಮೋದಿಯದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು

ಮೈಸೂರು, ಏಪ್ರಿಲ್ 1: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ತಿರುಗೇಟು ನೀಡಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಅವರದ್ದು (ಮೋದಿ) ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ವ್ಯಂಗ್ಯವಾಡಿದರು. ಬಿಜೆಪಿ 400 ಸೀಟ್ ಗೆಲ್ಲಬೇಕು ಎಂಬ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್​ ಗೆಲ್ಲುವುದು …

Read More »

ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ

ಚಾಮರಾನಗರ, (ಏಪ್ರಿಲ್ 01): ಈ ಬಾರಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರವನ್ನು ಗೆಲ್ಲಲು ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಪುತ್ರ ಯತೀಂದ್ರಗೂ (Yathindra Siddaramaiah )ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿಯುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ …

Read More »

ಕರ್ನಾಟಕದ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ‘ಅಸಮಾಧಾನ’ದ ಕಂಟಕ

ಬೆಂಗಳೂರು, ಏ.1: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಯಲ್ಲಾದ ಹೀನಾಯ ಸೋಲಿನ ಕಹಿಯನ್ನು ಮರೆಯಲು ಬಿಜೆಪಿ (BJP) ಮುಂದಾಗಿದೆ. ಅಲ್ಲದೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಇಟ್ಟುಕೊಂಡಿದೆ. ಆದರೆ, ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ಮಾಹಿತಿ ಅರಿತ ಬಿಜೆಪಿ ಚಾಣಕ್ಯ ಎಂದು ಕರೆಯಲ್ಪಡುವ ಕೇಂದ್ರ ಗೃಹ ಸಚಿವಅಮಿತ್ …

Read More »

ಮಗುವನ್ನ ಮಡಿಲಲ್ಲಿ ಮಲಗಿಸಿಕೊಂಡು ಭಿಕ್ಷಾಟನೆ ಮಾಡ್ತಿದ್ದ ತಾಯಿ-ಮಗುವಿನ ರಕ್ಷಣೆ

ಬೆಂಗಳೂರು ಗ್ರಾಮಾಂತರ, ಏ.01: ನಗರದ ಹೊರವಲಯದ ಆನೇಕಲ್(Anekal) ಪಟ್ಟಣದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕಳೆದೊಂದು ವರ್ಷದಿಂದರಾಯಚೂರುಮೂಲದ ಮಹಿಳೆ ಮಗು ಹಿಡಿದುಕೊಂಡು ಭಿಕ್ಷೆ ಬೇಡುತ್ತಿರುವ ಬಗ್ಗೆ ಸ್ಥಳೀಯರು ಡಿಸಿಪಿಓಗೆ ದೂರು ನೀಡಿದ್ದರು. ನಂತರ ನಾಲ್ಕೈದು ಬಾರಿ ಅಧಿಕಾರಿಗಳು ಭಿಕ್ಷೆ ಬೇಡದಂತೆ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಆದರೆ, ಮತ್ತೆ ದೇವಸ್ಥಾನದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ನೇತೃತ್ವದ ತಂಡ ದಾಳಿ ಮಾಡಿ, ಇಬ್ಬರನ್ನು ರಕ್ಷಿಸಿದ್ದಾರೆ. …

Read More »

ಬೋರ್​​ವೆಲ್ ಕೊರೆಸುವಾಗ ಕಾರಂಜಿಯಂತೆ ಚಿಮ್ಮಿದ ನೀರು; ಖುಷಿಯಲ್ಲಿ ಕುಣಿದು ಕುಪ್ಪಳಿಸಿದ ರೈತ

ಈ ಸುಡು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳಿಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗೆ ನೀರಿನ ಸಮಸ್ಯೆಯನ್ನು ಪೂರೈಸಲು ಅದೆಷ್ಟೋ ರೈತರು ಕೊಳವೆ ಬಾವಿಗಳ ಮೊರೆ ಹೋಗಿದ್ದಾರೆ. ಆದರೆ ಇಂದು ಬೋರ್ವೆಲ್ ಕೊರೆದರೂ ಒಂದು ಹನಿ ನೀರು ಸಿಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಇಲ್ಲೊಬ್ರು ರೈತ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದಾಗ ಬಾನೆತ್ತರಕ್ಕೆ ನೀರು ಚಿಮ್ಮಿದ್ದು, ನೀರು ಕಂಡ ಖುಷಿಯಲ್ಲಿ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ಹೃದಯಸ್ಪರ್ಷಿ …

Read More »

ಏಪ್ರಿಲ್ 8ರಂದು ಸೂರ್ಯಗ್ರಹಣ; ಈ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ಘೋಷಣೆ!

ಏಪ್ರಿಲ್ 8ರಂದು ಸೂರ್ಯಗ್ರಹಣ (Solar Eclipse) ಸಂಭವಿಸಲಿದೆ. ಈ ಖಗೋಳ ವಿಸ್ಮಯ ಉತ್ತರ ಅಮೆರಿಕಾದಾದ್ಯಂತ ಗೋಚರಿಸುತ್ತದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋಗುವಾಗ ಸೂರ್ಯಗ್ರಹಣ ಸಂಭವಿಸಲಿದ್ದು, ಭಾಗಶಃ ಸೌರ ಗ್ರಹಣವು ಸುತ್ತಮುತ್ತಲಿನ ಸಾವಿರಾರು ಕಿಲೋ ಮೀಟರ್ ಅಗಲದ ಪ್ರದೇಶದಲ್ಲಿ ಗೋಚರಿಸಲಿದೆ. ಏಪ್ರಿಲ್ 8ರಂದು ಸಂಭವಿಸಲಿರುವ ಸೂರ್ಯಗ್ರಹಣ ವೀಕ್ಷಿಸಲು ಲಕ್ಷಾಂತರ ಜನ ನಯಾಗರಕ್ಕೆ (Niagara) ಬರುವ ಹಿನ್ನೆಲೆ ನಯಾಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆ ಕೆನಡಾ ದೇಶದ …

Read More »

ಡಿಕೆ ಶಿವಕುಮಾರ್ ವಿರುದ್ಧ ‘FIR’ ದಾಖಲು

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಕೆ ನಾಯ್ಡು ವಿರುದ್ಧ ಇದೀಗ FIR ದಾಖಲಾಗಿದೆ. ಬೆಂಗಳೂರಿನ ಹೈ ಗ್ರೌಂಡ್ ಠಾಣೆಯ ಪೊಲೀಸರಿಂದ FIR ದಾಖಳಿಸಿಕೊಳ್ಳಲಾಗಿದೆ.ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರಿಂದ ದೂರು ಸಲ್ಲಿಸಲಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಿಗೆ ಅವರು ಖಾಸಗಿ ದೂರನ್ನು ಸಲ್ಲಿಸಿದ್ದರು. ಬಿಜೆಪಿಯ …

Read More »

30ಕ್ಕೂ ಹೆಚ್ಚು ನಾಯಕರು ನಾಳೆ ಕಾಂಗ್ರೆಸ್ ಸೇರ್ಪಡೆ

ಚಾಮರಾಜನಗರ- ಇಲ್ಲಿನ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಪುತ್ರ ಹಾಗೂ ಸಹೋದರರು ಸೇರಿದಂತೆ 30ಕ್ಕೂ ಹೆಚ್ಚು ಪ್ರಮುಖ ನಾಯಕರು ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದು ಹಠಕ್ಕೆ ಬಿದ್ದಿರುವ ಪಕ್ಷದ ಮುಖಂಡರು ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಅವರ ಆಪ್ತರನ್ನು ಇತ್ತೀಚೆಗೆ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲಾಗಿತ್ತು. ಈಗ ಚಾಮರಾಜನಗರದಲ್ಲೂ ಅದೇ ರೀತಿಯ ಕಾರ್ಯಾಚರಣೆಗಳು ನಡೆದಿದ್ದು, 30ಕ್ಕೂ ಹೆಚ್ಚು …

Read More »

ಶಿವಣ್ಣ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ರಾಜ್ಯದಲ್ಲಿ ಲೋಕಸಭೆ ಚುನಾವಣೆ (Lok Sabha Elections) ಪ್ರಚಾರ ಅಬ್ಬರದಿಂದ ಸಾಗಿದೆ. ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿಯಾಗಿ (Congress Candidate) ಅಖಾಡಕ್ಕೆ ಇಳಿದಿದ್ದಾರೆ. ಈ ಬಾರಿ ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಬಿಸಿಲಿನಲ್ಲಿ ವಿಶ್ರಾಂತಿ ಇಲ್ಲದೆ ನಡೆದಿದ ಹಿನ್ನೆಲೆ ನಟ ಶಿವರಾಜ್​ಕುಮಾರ್ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಶಿವರಾಜ್​ಕುಮಾರ್​ಗೆ ಅನಾರೋಗ್ಯ, …

Read More »