Breaking News

ತಿಹಾರ್‌ನಿಂದಲೇ ಸರ್ಕಾರ ನಡೆಸ್ತಾರಾ ಕೇಜ್ರೀವಾಲ್?

ನವದೆಹಲಿ(ಏ.02): ಅಬಕಾರಿ ನೀತಿಯಲ್ಲಿನ ಅಕ್ರಮಗಳ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿಗೆ ಹೋದ ನಂತರವೂ, ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜೈಲಿನಿಂದಲೇ ಓಡುತ್ತದೆ ಎಂದು ಹೇಳುತ್ತಿದೆ, ಆದರೆ ಪ್ರಸ್ತುತ ನಿಯಮಗಳು ಮತ್ತು ನಿಬಂಧನೆಗಳನ್ನು ಗಮನಿಸಿದರೆ ಅದು ತುಂಬಾ ಕಷ್ಟಕರವೆಂದು ತೋರುತ್ತದೆ. ಎನ್‌ಸಿಟಿ ದೆಹಲಿ ಕಾಯ್ದೆಯ ಪ್ರಕಾರ, ದೆಹಲಿಗೆ ಸಂಬಂಧಿಸಿದ ಎಲ್ಲಾ ಫೈಲ್‌ಗಳು ಕೇಂದ್ರ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್‌ಗೆ ಕಳುಹಿಸಲ್ಪಡುತ್ತವೆ, ಆದರೆ ಇದು …

Read More »

ಈ ವಾರ ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ:

ನವದೆಹಲಿ: ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಪ್ರತ್ಯೇಕವಾಗಿ ಚದುರಿದ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ. ಐಎಂಡಿಯ ಬೆಳಿಗ್ಗೆ ಬುಲೆಟಿನ್ ಪ್ರಕಾರ, ಏಪ್ರಿಲ್ 3-5 ರಂದು ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶ, ಏಪ್ರಿಲ್ 3 ಮತ್ತು 5 ರಂದು ಉತ್ತರಾಖಂಡ ಮತ್ತು ಏಪ್ರಿಲ್ 4 ಮತ್ತು 5 ರಂದು ಪಶ್ಚಿಮ ಉತ್ತರ ಪ್ರದೇಶದ ಮೇಲೆ …

Read More »

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ರೋಗಿ ಬಲಿ; ಕುಟುಂಬದವರಿಂದ ಪ್ರತಿಭಟನೆ

ಯಾದಗಿರಿ: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ನರಳಿ, ನರಳಿ ಪ್ರಾಣ ಬಿಟ್ಟಿರುವ ಘಟನೆ ಯಾದಗಿರಿ ಜಿಲ್ಲೆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ವ್ಯಕ್ತಿಯ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ವಾಂತಿ ಹಾಗೂ ಉಸಿರಾಟದ ಸಮಸೆಯಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿ 2 ಗಂಟೆ ಕಳೆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಕುಟುಂಬದವರು ಚಿಕಿತ್ಸೆ ನೀಡುವಂತೆ ಅಂಗಲಾಚಿದರೂ …

Read More »

ಬೆಳಗಾವಿ | ‘ಸ್ವೀಪ್‌’ ರಾಯಭಾರಿಗಳಿಂದ ‘ಮತ’ ಜಾಗೃತಿ

ಬೆಳಗಾವಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿಯು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಮೂವರನ್ನು ರಾಯಭಾರಿಗಳನ್ನಾಗಿ ನೇಮಿಸಿದೆ. ಇಲ್ಲಿನ ಅಂತರರಾಷ್ಟ್ರೀಯ ಅಂಗವಿಕಲ ಈಜುಪಟು ರಾಘವೇಂದ್ರ ಅಣ್ವೇಕರ್‌, ಲಿಂಗತ್ವ ಅಲ್ಪಸಂಖ್ಯಾತರಾದ ಚಿನ್ನು ತಳವಾರ ಮತ್ತು ರಾಷ್ಟ್ರೀಯ ಜುಡೋಪಟು ಸಹನಾ ಎಸ್‌.ಆರ್‌. ರಾಯಭಾರಿಗಳಾಗಿ ನೇಮಕ ಗೊಂಡವರು. ನಾಲ್ಕನೇ ಬಾರಿ ರಾಯಭಾರಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ …

Read More »

ಸಂಚಾರ ದಟ್ಟಣೆಯಿಂದ ಹೈರಾಣದ ಜನ

ಅಥಣಿ: ಪಟ್ಟಣದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಕಾರಣ ಜನ ಬೇಸತ್ತು ಹೋಗಿದ್ದಾರೆ. ಕೆಲಸ ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ಜನರೂ ಹೈರಾಣಾಗಿದ್ದಾರೆ. ಸಂಚಾರ ಪೊಲೀಸರು ಇದ್ದೂ ಇಲ್ಲದಂತಾಗಿದೆ. ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದು, ಒನ್‌ ವೇಗಳಲ್ಲಿ ಓಡಿಸುವುದು, ಬೇಕಾಬಿಟ್ಟಿ ಪಾರ್ಕಿಂಗ್‌ ಮಾಡುವುದು ನಡೆದೇ ಇದೆ.   ಭಾರಿ ವಾಹನಗಳ ಪ್ರವೇಶ, ಪಟ್ಟಣದಲ್ಲಿ ಪಾರ್ಕಿಂಗ್ ಸಮಸ್ಯೆ, ಸಂಚಾರಿ ಪೊಲೀಸ್ ಸಿಬ್ಬಂದಿಯ ಕೊರತೆ, ಎಲ್ಲೆಂದರಲ್ಲಿ ಖಾಸಗಿ ವಾಹನಗಳ ನಿಲುಗಡೆ ಪಟ್ಟಣದ ಸಂಚಾರ ಶಿಸ್ತನ್ನು ಹಾಳು …

Read More »

ಟೀಕೆ-ಟಿಪ್ಪಣಿಗೆ ಪ್ರತಿಕ್ರಿಯೆ ಕೊಡುವುದಿಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಇದು ರಾಷ್ಟ್ರೀಯ ವಿಚಾರಧಾರೆಗಳ ಆಧಾರದಲ್ಲಿ ನಡೆಯುವ ಚುನಾವಣೆ. ಇಲ್ಲಿ ರಾಷ್ಟ್ರೀಯ ವಿಚಾರಗಳೇ ಚರ್ಚೆಯಾಗಬೇಕು. ಆದರೆ, ಕಾಂಗ್ರೆಸ್‌ನವರಿಂದ ಸಣ್ಣ-ಪುಟ್ಟ ‌ವಿಷಯ ಚರ್ಚಿಸಲಾಗುತ್ತಿದೆ. ಇದಕ್ಕೆ ನಾವು ಉತ್ತರ ನೀಡುವುದಿಲ್ಲ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನನ್ನ ಕರ್ಮಭೂಮಿ. ಆದರೆ, ಕಾಂಗ್ರೆಸ್‌ನವರು ನಾನು ಹೊರಗಿನವನು ಎನ್ನುತ್ತಿದ್ದಾರೆ. ಅವರಿಗೆ ಚರ್ಚಿಸಲು ಯಾವುದೇ ವಿಷಯವೇ ಇಲ್ಲ. ಟೀಕೆ-ಟಿಪ್ಪಣಿಗೆ ಯಾವುದೇ ಪ್ರತಿಕ್ರಿಯೆ …

Read More »

ಮೂಲಸೌಲಭ್ಯದಿಂದ ವಂಚಿತ: ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

ಸವದತ್ತಿ (ಬೆಳಗಾವಿ ಜಿಲ್ಲೆ): ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಯರಗಟ್ಟಿ ತಾಲ್ಲೂಕಿನ ಹಿರೇಬೂದನೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳಗಲಿ ಗ್ರಾಮಸ್ಥರು, ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಿರೇಬೂದನೂರ ಗ್ರಾಮ ಪಂಚಾಯ್ತಿ ಕಚೇರಿಗೆ ಸೋಮವಾರ ತೆರಳಿದ ಗ್ರಾಮಸ್ಥರು, ‘ಚುನಾಯಿತ ಪ್ರತಿನಿಧಿಗಳು ನಮಗೆ ಮೂಲಸೌಕರ್ಯ ಒದಗಿಸುವ ಗೋಜಿಗೆ ಹೋಗಿಲ್ಲ. ಇಲ್ಲಿ ಪ್ರತಿಯೊಂದಕ್ಕೂ ಪರದಾಡುವ ಸ್ಥಿತಿ ಇದ್ದು, ಮೂಲಸೌಕರ್ಯ ಒದಗಿಸಿಕೊಡಬೇಕು. ಇಲ್ಲದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ’ ಎಂದು ಪಿಡಿಒ ಗುರುಪಾದ ಗಿರೆಣ್ಣವರ ಅವರಿಗೆ ಮನವಿ ಸಲ್ಲಿಸಿದರು. …

Read More »

ಕಾಗವಾಡ | ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ

ಕಾಗವಾಡ: ತಾಲ್ಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಚಿಕ್ಕೋಡಿ ಉಪವಿಭಾಗಾಧಿಕಾರಿ ಮೆಹಬೂಬಿ ಭೇಟಿ ನೀಡಿ, ಮಹಾರಾಷ್ಟ್ರದಿಂದ ಬರುವ ಖಾಸಗಿ ವಾಹನ ಮತ್ತು ಸರ್ಕಾರಿ ಬಸ್‌ಗಳನ್ನು ತಡೆದು, ಪರಿಶೀಲನೆ ನಡೆಸಿದರು.   ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 20 ಲಕ್ಷಕ್ಕಿಂತ ಹೆಚ್ಚು ನಗದು ಜಪ್ತಿಯಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವೆಬ್‌ಕಾಸ್ಟ್ ಕ್ಯಾಮೆರಾ, ಕುಡಿಯುವ ನೀರಿನ ವ್ಯವಸ್ಥೆ, ದೀಪದ ವ್ಯವಸ್ಥೆ …

Read More »

ಜಗದೀಶ ಶೆಟ್ಟರ್‌ ಹೊರಗಿನವರಲ್ಲ; ರಮೇಶ ಜಾರಕಿಹೊಳಿ

ರಾಮದುರ್ಗ: ಜಗದೀಶ ಶೆಟ್ಟರ್‌ ಹೊರಗಿನವರಲ್ಲ. ಅವರು ಮುಖ್ಯಮಂತ್ರಿಯಾದವರು, ನಮ್ಮ ಏಳ್ಗೆಗಾಗಿ ಶ್ರಮಿಸಿದವರು. ಅವರನ್ನು ನಾವು ಎಂದಿಗೂ ಬೇರೆಯವರು ಎಂದು ಬಿಂಬಿಸಬಾರದು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಕಟಕೋಳ ಗ್ರಾಮ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ, ಚುನಾವಣೆ ವೇಳೆಯಲ್ಲಿ ಕೆಲವರು ಜಾತಿ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದರು. ನರೇಂದ್ರ ಮೋದಿ ಪ್ರಧಾನಿಯಾದರೆ ಬೆಳಗಾವಿಯಿಂದ ಗೆಲ್ಲುವ ಜಗದೀಶ ಶೆಟ್ಟರ್‌ ಅವರು ಕೇಂದ್ರ ಮಂತ್ರಿಯಾಗುತ್ತಾರೆ. ಅವರಿಂದ ಈ ಭಾಗದ ನೀರಾವರಿ …

Read More »

ಶೆಟ್ಟರ್‌ರನ್ನು ಕೀಳಾಗಿ ಕಾಣಬೇಡಿ: ಬಾಲಚಂದ್ರ

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರನ್ನು ಯಾರೂ ಕೀಳಾಗಿ ಕಾಣಬಾರದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೆಟ್ಟರ್ ಅವರು ಅರಭಾವಿ ಮತ್ತು ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ, ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ಮಠಾಧೀಶರ ಆಶೀರ್ವಾದ ಪಡೆದಿದ್ದಾರೆ. ನಾನು, ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ನಮ್ಮನ್ನು …

Read More »