ಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. …
Read More »ಸಣ್ಣ ಗುತ್ತಿಗೆದಾರರಿಂದ ಕಮಿಷನ್ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು
ಬೆಂಗಳೂರು: ಗುತ್ತಿಗೆದಾರರಿಂದ ಕಮಿಷನ್ ಪಡೆದ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ಜಗನ್ನಾಥ್ ಶೇಗಜಿ ಮತ್ತು ನಿರ್ದೇಶಕ ಚಿಂಚಳಿ ಅವರನ್ನು ಅಮಾನತು ಮಾಡಲಾಗಿದೆ. ಸಣ್ಣ ಗುತ್ತಿಗೆದಾರರಿಂದ 3%ವರೆಗೆ ಕಮಿಷನ್ ಕೇಳುವ ಆಡಿಯೋ ವೈರಲ್ ಆದ ಬೆನ್ನಲ್ಲೇ ಗುತ್ತಿಗೆದಾರರ ಸಂಘ ಸುದ್ದಿಗೋಷ್ಠಿ ನಡೆಸಿ ಈ ಕ್ರಮವನ್ನು ತೆಗೆದುಕೊಂಡಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಇದು ಖಾಸಗಿ ಜಾಗದಲ್ಲಿ ಆಗಿರುವ ವ್ಯವಹಾರ. ಈ ಘಟನೆಗೂ ಗುತ್ತಿಗೆದಾರರ ಸಂಘಕ್ಕೂ ಸಂಬಂಧ ಇಲ್ಲ. ಯಾವ ಕಾರಣಕ್ಕೂ …
Read More »ವಕ್ಫ್, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್
ಮುಂಬೈ: ಅಜಿತ್ ಪವಾರ್ ಅವರ ನಿಧನದ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್ ಅವರಿಗೆ ರಾಜ್ಯ ಅಬಕಾರಿ (ಎಕ್ಸೈಸ್), ಕ್ರೀಡೆ ಮತ್ತು ಯುವ ಕಲ್ಯಾಣ, ಅಲ್ಪಸಂಖ್ಯಾತರ ವ್ಯವಹಾರಗಳು ಮತ್ತು ವಕ್ಫ್ ಇಲಾಖೆಗಳ ಜವಾಬ್ದಾರಿ ನೀಡಲಾಗಿದೆ. ಅಜಿತ್ ಪವಾರ್ ಅವರು ಹಿಂದೆ ಹೊಂದಿದ್ದ ಹಣಕಾಸು ಮತ್ತು ಯೋಜನಾ ಇಲಾಖೆಗಳನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಉಳಿಸಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಬಜೆಟ್ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರೇ ಬಜೆಟ್ …
Read More »ಚೀನಾ, ಪಾಕ್, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ
ನವದೆಹಲಿ: ಯುರೋಪಿಯನ್ ಒಕ್ಕೂಟದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ ಭಾರತದ ಮೇಲೆ ವಿಧಿಸಿದ್ದ ಸುಂಕವನ್ನು ಕಡಿತ ಮಾಡಿದೆ. ಟ್ರಂಪ್ ಅಧಿಕಾರಕ್ಕೆ ಏರಿದ ಬಳಿಕ ಪ್ರತಿ ತೆರಿಗೆ, ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಾಗಿ ಪ್ರತಿಯಾಗಿ 25% ದಂಡ ಸೇರಿದಂತೆ ಭಾರತದ ವಸ್ತುಗಳಿಗೆ ಅಮೆರಿಕ 50% ಸುಂಕವನ್ನು ವಿಧಿಸಿತ್ತು. ಈ ಟ್ರಂಪ್ 18% ಮಾತ್ರ ತೆರಿಗೆ ವಿಧಿಸುವುದಾಗಿ ಹೇಳಿದ್ದಾರೆ. ಟ್ರಂಪ್ ನಿರ್ಧಾರದಿಂದ ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ, …
Read More »ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಪವರ್ ಶೇರ್ ವಿಚಾರ ಚರ್ಚೆಗೆ ಬಂದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿ ವಿಪಕ್ಷಗಳಿಗೆ ಟಕ್ಕರ್ ಕೊಟ್ಟ ಪ್ರಸಂಗ ನಡೆಯಿತು. ನಾನು ಹಾಗೂ ಸಿಎಂ ಪರಸ್ಪರರ ಕಷ್ಟದಲ್ಲಿ ಜೊತೆಯಾಗಿ ನಿಂತವರು. ಮುಂದೆಯೂ ಕಷ್ಟದಲ್ಲಿ ಪರಸ್ಪರ ಜೊತೆಯಾಗ್ತೇವೆ. ಸಿದ್ದರಾಮಯ್ಯ ನನ್ನ ಪರ ಇದ್ದಾರೆ. ನಾವಿಬ್ರೂ ಹೀಗೇ ಜೊತೆಯಾಗಿ ಇರ್ತೀವಿ. ಏನೇ ತೀರ್ಮಾನ ಇದ್ರೂ ಪಕ್ಷ ಮಾಡುತ್ತೆ. 2028ಕ್ಕೆ ಏನಾಗುತ್ತೆ ಅಂತ ನೋಡೋಣ ಎಂದು …
Read More »ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ …
Read More »7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ
ಬೆಂಗಳೂರು: ತೆರಿಗೆ ಬಾಕಿ ಪಾವತಿಸದ ಮಾಲೀಕರ 7 ಸಾವಿರ ಆಸ್ತಿಗಳನ್ನು ಹರಾಜು ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯಿದೆ. ತೆರಿಗೆ ಪಾವತಿಸದ್ದಕ್ಕೆ ಆಸ್ತಿ ಮಾಲೀಕರಿಗೆ ನೋಟಿಸ್ ಜಾರಿ ಜಾರಿ ಮಾಡಲಾಗಿತ್ತು. ನೋಟಿಸ್ ಜಾರಿ ಮಾಡಿಯೂ ತೆರಿಗೆ ಪಾವತಿಸದ್ದಕ್ಕೆ ಜಪ್ತಿ ಮಾಡುವ ಆದೇಶ ಪ್ರಕಟವಾಗಿದೆ. ಜಪ್ತಿ ಆದೇಶಗಳ ಬಳಿಕವೂ ತೆರಿಗೆ ಪಾವತಿಸಿದೇ ಇದ್ದರೆ ಫೆಬ್ರವರಿ …
Read More »ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್ ಒಪ್ಪಂದ ಘೋಷಿಸಿದ ಟ್ರಂಪ್
ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬೃಹತ್ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಜೊತೆಗೆ ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ. ಹೌದು. ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಳಿಕ ತನ್ನ ಸೋಷಿಯಲ್ ಮೀಡಿಯಾ ವೇದಿಕೆ ಟ್ರುತ್ …
Read More »ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ
ವಿಧಾನ ಪರಿಷತ್ (ವಿಧಾನಸೌಧ): ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಶೇಷ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರಾದ ಪಿ.ಎಚ್.ಪೂಜಾರ ಅವರ ಪ್ರಶ್ನೆಗೆ …
Read More »ತರಳಬಾಳು ಹುಣ್ಣಿಮೆ ವೇದಿಕೆ | ದೂಷಣೆ ಬಿಟ್ಟು ಒಂದಾಗಿ: ಶ್ರೀಗಳ ತಾಕೀತು.
ಭದ್ರಾವತಿ (ಶಿವಮೊಗ್ಗ): ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವು ‘ದಾವಣಗೆರೆ ರಾಜಕಾರಣ’ದ ರಾಜಿ ಪಂಚಾಯಿತಿಗೆ ವೇದಿಕೆ ಆಗಿ ಮಾರ್ಪಟ್ಟಿತ್ತು. ದೀರ್ಘ ಕಾಲದಿಂದ ಪರಸ್ಪರ ರಾಜಕೀಯ ಹಗೆತನ ಸಾಧಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.ಪಿ.ಹರೀಶ್ ಅವರಿಗೆ ‘ರಾಜಕೀಯ ಸಭ್ಯತೆ’ಯ ಪಾಠ ಹೇಳಿದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಅವರ ನಡುವಿನ ಜಗಳ ಪರಿಹರಿಸಿ ವೇದಿಕೆಯಲ್ಲಿಯೇ ರಾಜಿ ಮಾಡಿಸಿದರು. ಮಲ್ಲಿಕಾರ್ಜುನ್ ಹಾಗೂ ಸಿದ್ದೇಶ್ವರ …
Read More »
Laxmi News 24×7