Breaking News

ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ಮುಂಬಯಿ: ಮುಂಬೈ ಇಂಡಿಯನ್ಸ್‌ ಸತತ ಸೋಲಿನ ಸುಳಿಗೆ ಸಿಲುಕಿರುವಂತೆಯೇ ತಂಡಕ್ಕೆ ಇನ್ನೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಆಗಮನ ಇನ್ನೂ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ. ವಿಶ್ವದ ನಂ.1 ಟಿ20 ಬ್ಯಾಟರ್‌ ಆಗಿರುವ ಸೂರ್ಯಕುಮಾರ್‌ ಯಾದವ್‌ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಸಂಪೂರ್ಣ ಚೇತರಿಕೆ ಕಂಡಿಲ್ಲ. ಹೀಗಾಗಿ ಇವರು ಮುಂಬೈ ತಂಡ ಸೇರಿಕೊಳ್ಳುವುದು ಇನ್ನಷ್ಟು ದಿನ ವಿಳಂಬವಾಗಲಿದೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ. ಸಂಪೂರ್ಣ ಫಿಟ್‌ನೆಸ್‌ಗೆ …

Read More »

ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಬೆಳಗಾವಿ: ಖಾನಾಪೂರ ವಿಧಾನಸಭಾ ಕ್ಷೇತ್ರದ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 7.98 ಲಕ್ಷ ರೂ ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸ್‌ಎಸ್ ಟಿ ತಂಡದ ಅಧಿಕಾರಿಗಳಾದ ಮಲಗೌಡ ಪಾಟೀಲ ಅವರು ಶುಕ್ರವಾರ ಕಣಕುಂಬಿ ಚೆಕ್ ಪೋಸ್ಟ್ ದಲ್ಲಿ ಬೆಳಿಗ್ಗೆ ಕರ್ತವ್ಯದಲ್ಲಿದ್ದಾಗ ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದ ಸಂಜಯ ಬಸವರಾಜ ರೆಡ್ಡಿ, ಅವರು ಪ್ರಯಾಣಿಸುತ್ತಿದ್ದ ವಾಹನ (ಸಂಖ್ಯೆ ಕೆ.ಎ-29 ಎಪ್-1532) ತಪಾಸಣೆ ನಡೆಸಿದಾಗ ಅವರ ಬಳಿ ದಾಖಲೆ ಇಲ್ಲದ 7.98 …

Read More »

ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್‌ ಆಯಪ್‌ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ. ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್‌ ಎನ್ನುವ ಮೊಬೈಲ್‌ ಆಯಪ್‌ ಅನ್ನು …

Read More »

ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ

ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್​.ಎಲ್​.

Read More »

ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್‌ ಪ್ರಕಟವಾದ ಬೆನ್ನಲ್ಲೇ ಆರು ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ “ತಟಸ್ಥ’ರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ. ಸಂವಿಧಾನ ತಿದ್ದುಪಡಿ  ಹೇಳಿಕೆ ಹಾಗೂ ಮುಸ್ಲಿಂ ವಿರೋಧಿ ನಿಲುವು ಅವರಿಗೆ ಈ ಬಾರಿ ಟಿಕೆಟ್‌ ತಪ್ಪಲು ಮೇಲ್ನೋಟಕ್ಕೆ ಕಾರಣ ಎಂದು ಪಕ್ಷದ ಕೆಲವು ಹಿರಿಯರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಲು ಪ್ರಚಾರದಿಂದಲೂ …

Read More »

ಕಾಂಗ್ರೆಸ್‌ಗೆ ಮತ್ತೆ ಶಾಕ್ ನೀಡಿದ ಆದಾಯ ತೆರಿಗೆ ಇಲಾಖೆ, ₹1700 ಕೋಟಿ ತೆರಿಗೆ ಪಾವತಿಸಲು ನೋಟಿಸ್!

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election) ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್‌ಗೆ ದಿನದಿಂದ ದಿನಕ್ಕೆ ಸಂಕಷ್ಟಗಳು ನಿರಂತರವಾಗಿ ಹೆಚ್ಚುತ್ತಿದ್ದು, ಮರುಮೌಲ್ಯಮಾಪನ ಪ್ರಕ್ರಿಯೆಗಳ (Revaluation Proceedings) ವಿರುದ್ಧ ಪಕ್ಷದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಆದಾಯ ತೆರಿಗೆ ಇಲಾಖೆ ಕೂಡ ಕಾಂಗ್ರೆಸ್‌ಗೆ (Congress) ಶಾಕ್ ನೀಡಿದೆ.   ಸುಮಾರು 1,700 ಕೋಟಿ ರೂಪಾಯಿ ಮೊತ್ತದ ತೆರಿಗೆ ಪಾವತಿಸುವಂತೆ ವಿರೋಧ ಪಕ್ಷ ಕಾಂಗ್ರೆಸ್‌ಗೆ ಆದಾಯ ತೆರಿಗೆ …

Read More »

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪುನಗರದ ತಮ್ಮ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್ 20ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು. …

Read More »

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

ಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. ಇಲ್ಲಿನ ಕೆಎಂಎಫ್ ಕಚೇರಿಯ ಪಕ್ಕದಲ್ಲಿ ಕಳೆದ 10 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಪಾಟೀಲ್ ಅವರು ನಗರಸಭೆ ಸದಸ್ಯರಾಗಿದ್ದ ಅವಧಿಯಲ್ಲಿ ಈ ಮಹಿಳಾ ಶೌಚಾಲಯ ನಿರ್ಮಿಸಲಾಗಿತ್ತು.ಇದರ ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ಪೌರ ಕಾರ್ಮಿಕ ಮಹಿಳೆಯೊಬ್ಬರಿಗೆ ವಹಿಸಿಕೊಟ್ಟು, ಪಕ್ಕದಲ್ಲಿಯೇ ವಾಸಿಸಲು ಅವಕಾಶ ಕಲ್ಪಿಸಲಾಗಿದೆ.   ಆದರೆ, ಎರಡು ವರ್ಷಗಳಿಂದ ಶೌಚಾಲಯದಲ್ಲಿ ವಿದ್ಯುತ್‌ (ಅರ್ಥಿಂಗ್) ಸಮಸ್ಯೆ …

Read More »

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

ಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಣಿ-ಪಕ್ಷಿಗಳಿಗೆ ನೀರಿನ ದಾಹ ತಣಿಸಲು ತಾಲ್ಲೂಕಿನ ವಿವಿಧ ಭಾಗಗಳ ದಟ್ಟ ಕಾಡಿನಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾಲ್ಲೂಕಿನ ಕಾಡು ಪ್ರದೇಶದ 6 ಭಾಗಗಳಲ್ಲಿ ಕಾಂಕ್ರೀಟ್ ತೊಟ್ಟಿಗಳನ್ನು ನಿರ್ಮಿಸಲಾಗಿತ್ತು. ವೃತ್ತಾಕಾರದ ಈ ತೊಟ್ಟಿಗಳು ಒಂದು ಬದಿಯಿಂದ ಮತ್ತೊಂದು ತುದಿಗೆ …

Read More »

‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ …

Read More »