Breaking News

ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ಜಗದೀಶ್ ಶೆಟ್ಟರ್,ಪ್ರಚಾರಕ್ಕೆ ಹೋಗುತ್ತೇನೆ ಎಂದ ಮಂಗಳಾ ಅಂಗಡಿ

ಬೆಳಗಾವಿ (Belagavi)ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗುವ ವಿಶ್ವಾಸ ಇತ್ತು. ಪಕ್ಷದ ವರಿಷ್ಠರು ನನಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ. ಬೆಳಗಾವಿ ಟಿಕೆಟ್ ಘೋಷಣೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್, ಬೆಳಗಾವಿಯಲ್ಲಿ ಮತ್ತೊಮ್ಮೆ ಬಿಜೆಪಿ …

Read More »

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ವಿಷ ಕುಡಿಯಲು ಹಣವಿಲ್ಲ ಅಂದಿದ್ರು: ಸವದಿ

ಚಿಕ್ಕೋಡಿ, ಮಾರ್ಚ್​​ 25: ಬಿಎಸ್​​ ಯಡಿಯೂರಪ್ಪ(BS Yediyurappa)ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ. ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್​ ಯಡಿಯೂರಪ್ಪ ಮತ್ತು ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಬಲಪಡಿಸಿದರು. ಆದರೆ, K.S.ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ. ಜಗದೀಶ್​​ ಶೆಟ್ಟರ್‌ಗೆ ಮೊದಲು ಬಾಲ ಕಟ್ ಮಾಡಿದರು. …

Read More »

ಮೈಸೂರು ರೆಸಾರ್ಟ್​​ನಲ್ಲಿ ಕುಳಿತು ಸಿಎಂ ಸಿದ್ದರಾಮಯ್ಯ ಆಪರೇಷನ್ ಹಸ್ತ

ಮೈಸೂರು, ಮಾರ್ಚ್​ 26: ಲೋಕಸಭೆ ಚುನಾವಣೆಯಲ್ಲಿ (Lok Sabha Elction) ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ (Siddaramaiah) ಮೂರು ದಿನಗಳ ಮೈಸೂರು (Mysuru) ಪ್ರವಾಸದಲ್ಲಿದ್ದಾರೆ. ಇದೇ ವೇಳೆ, ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡೇ ‘ಆಪರೇಷನ್ ಹಸ್ತ’ಕ್ಕೆ (Operation Hasta) ಮುಂದಾಗಿದ್ದಾರೆ. ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ …

Read More »

`CBSE’ 10,12 ನೇ ತರಗತಿಯ ಪಠ್ಯಕ್ರಮ ಬಿಡುಗಡೆ : ಇಲ್ಲಿದೆ ಡೌನ್ಲೋಡ್ ಮಾಡಿಕೊಳ್ಳುವ ಸುಲಭ ವಿಧಾನ

ನವದೆಹಲಿ : ಏಪ್ರಿಲ್ 1, 2024 ರಿಂದ, ಸಿಬಿಎಸ್‌ಇಯ ಹೊಸ ಶೈಕ್ಷಣಿಕ ವರ್ಷ ಅಂದರೆ 2024-25 ರ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. 2025 ರಲ್ಲಿ ಹೋರ್ಡ್ ಪರೀಕ್ಷೆಯನ್ನು ತೆಗೆದುಕೊಳ್ಳುವ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ನಿಂದ 10 ನೇ ತರಗತಿ ಅಥವಾ 12 ನೇ ತರಗತಿ ಮಂಡಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು …

Read More »

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ : 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಗಳೂರು ರಾಗಿ ಖರೀದಿ ಕೇಂದ್ರಕ್ಕೆ ರಾಗಿಯನ್ನು ನೀಡಿರುವ ಹೊರ ತಾಲ್ಲೂಕು, ಹೊರ ಜಿಲ್ಲೆಯಲ್ಲಿನ ಪಟ್ಟಿಯಲ್ಲಿರುವ ರೈತರು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರಿಂದ ಅರ್ಹ ದಾಖಲೆಗಳನ್ನು ಸಂಗ್ರಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರು ಜಗಳೂರು ತಾಲ್ಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಿ 7 ದಿನಗಳ ಒಳಗಾಗಿ ಸಂಬಂಧಪಟ್ಟ ದಾಖಲೆಗಳ ಜೆರಾಕ್ಸ್ ಪ್ರತಿ, 2022-23 ನೇ ಸಾಲಿನ ಮುಂಗಾರಿನ …

Read More »

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗಾಗಿ 2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ

ಬೆಳಗಾವಿ. ಮಾರ್ಚ್​.21: ಈ ಹಿಂದೆ ಆರೋಗ್ಯ ವಿಮಾ ಯೋಜನೆ ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಮಹಾರಾಷ್ಟ್ರ ಸರ್ಕಾರ ಅಂತಹದ್ದೇ ಮತ್ತೊಂದು ವಿವಾದಕ್ಕೆ ಕೈ ಹಾಕಿದೆ. ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಹಾರಾಷ್ಟ್ರ ಸರ್ಕಾರ (Maharashtra Government) 2 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು …

Read More »

ಶ್ರೀರಾಮ ಸರ್ವರಿಗೂ ಸೇರಿದವನು; ನನ್ನ ಹೆಸರಲ್ಲೇ ರಾಮನಿದ್ದಾನೆ;C.M.

ಚಾಮರಾಜನಗರ: ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ …

Read More »

ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಮತದಾನದಿಂದ ವಂಚಿತ.!

ದೆಹಲಿ: ಲೋಕಸಭಾ ಮತದಾನಕ್ಕೆ ಕೆಲವೇ ದಿನಗಳು ಉಳಿದಿವೆ. ಮತದಾನದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ EC ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ, ಈ ಪ್ರಕ್ರಿಯೆಗೆ ಉಳಿದಿರುವುದು 1 ದಿನ ಮಾತ್ರ. ನಾಳೆಯೊಳಗೆ ನೋಂದಣಿ ಮಾಡಿಕೊಂಡರೆ ಮಾತ್ರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಮತ ಹಾಕಲು ಸಾಧ್ಯ. ಮತದಾರರ ಸಹಾಯವಾಣಿ ಆಪ್ ಡೌನ್‌ಲೋಡ್ ಮಾಡಿ. ಫಾರ್ಮ್ 6ನಲ್ಲಿ 2ನೇ ಆಯ್ಕೆ ಆರಿಸಿ. ಅಗತ್ಯ ಮಾಹಿತಿ …

Read More »

ಮಾಜಿ ಸಿಎಂ H.D.K. ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆ ಸಲುವಾಗಿ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿದ ಮಾಜಿ ಮುಖ್ಯಮಂತ್ರಿಗಳಾದ H.D.ಕುಮಾರಸ್ವಾಮಿ ಅವರು; ತಮಗೆ ಶುಭ ಕೋರಲು ಬಂದ ಮಂಡ್ಯ ಮತ್ತಿತರೆ ಜಿಲ್ಲೆಗಳ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ತಮ್ಮ ನಿವಾಸದಲ್ಲಿ ಮಾತನಾಡಿದರು.   ಹೆಚ್ಚು ಮಾತನಾಡಬಾರದು, ಆಯಾಸ ಮಾಡಿಕೊಳ್ಳಬಾರದು ಎಂದು ವೈದ್ಯರು ನೀಡಿರುವ ಕಟ್ಟುನಿಟ್ಟಿನ ಸೂಚನೆಯಂತೆ …

Read More »

ಯೋ ಬರ್ಕೊಳಯ್ಯ ಶಿವಮೊಗ್ಗ ನಂದು

ಶಿವಮೊಗ್ಗ : ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು.   ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ ವೇಳೆ ಸಭೆ ಒಂದರಲ್ಲಿ …

Read More »