Breaking News

ಸರ್ವೀಸ್ ರಸ್ತೆ ಬಂದ್: ಬೆಂ-ಮೈ ಎಕ್ಸ್​ಪ್ರೆಸ್​​ವೇಯಲ್ಲಿ ಟೋಲ್ ತಪ್ಪಿಸಿಕೊಳ್ಳುವವರಿಗೆ ಶಾಕ್

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಟೋಲ್ ತಪ್ಪಿಸಿಕೊಂಡು ಹೋಗುತ್ತಿರುವ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೊಡ್ಡ ಶಾಕ್ ನೀಡಿದೆ. ಟೋಲ್ ತಪ್ಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದೆ. ಈ ಮೂಲಕ ಟೋಲ್ ಕಟ್ಟಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್‌ಗಳಿಂದ ತಪ್ಪಿಸಿಕೊಳ್ಳಲು ಅನ್ಯ ಮಾರ್ಗಗಳನ್ನು ಬಳಸುವುದು, ಬಳಿಕ ಹೆದ್ದಾರಿಗೆ ಎಂಟ್ರಿ ಕೊಡುವ ವಾಹನ ಚಾಲಕರ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹದ್ದಿನ …

Read More »

45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಸ್​​ಆರ್​ಟಿಸಿ ಬಸ್ ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡು, ಬಸ್​ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಚಾಲಕ ಮೂರ್ಛೆ ಬಿದ್ದು ನಿಯಂತ್ರಣ ತಪ್ಪಿದ KSRTC ಬಸ್​ ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಇಂದು ನಡೆಯಿತು. ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್​​ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು …

Read More »

ಸಿಗರೇಟ್ ಪಡೆದು ಅಂಗಡಿ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದ ಆರೋಪಿಯ ಬಂಧನ

ಬೆಂಗಳೂರು: ಅಂಗಡಿಯೊಂದರಲ್ಲಿ ಸಿಗರೇಟ್​ ಪಡೆದು ಹಣ ನೀಡದೇ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರನಗರದ ನಿವಾಸಿ ಗೌತಮ್‌ (25) ಬಂಧಿತ. ಫೆಬ್ರವರಿ 4ರಂದು ಕೋರಮಂಗಲದ ರಾಜೇಂದ್ರ ನಗರದ 80 ಅಡಿ ರಸ್ತೆಯ ಸಭಾನಾ ಸ್ಟೋರ್‌ ಎಂಬ ಅಂಗಡಿಯ ಸಿಬ್ಬಂದಿ ನಿಸಾರ್‌ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 4ರಂದು ರಾತ್ರಿ 10.15ರ ಸುಮಾರಿಗೆ ಅಂಗಡಿಗೆ ತೆರಳಿದ್ದ ಆರೋಪಿ, …

Read More »

ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭ

ಮೈಸೂರು, ಫೆಬ್ರವರಿ 09: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನಲ್ಲಿ 144 ವರ್ಷಗಳ ಬಳಿಕ ಪವಿತ್ರ ಕುಂಭಮೇಳ (Kumbh Mela) ನಡೆಯುತ್ತಿದೆ. ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಇತ್ತ ಕರ್ನಾಟಕದಲ್ಲಿ ಕೂಡ ಕುಂಭಮೇಳ ಆರಂಭವಾಗುತ್ತಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಅಂದರೆ ಫೆ. 10 ರಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಜಿಲ್ಲೆಯ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಡಾ ಹೆಚ್. ಸಿ‌ ಮಹದೇವಪ್ಪ ಕುಂಭಮೇಳಕ್ಕೆ …

Read More »

ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿರುವುದು ವಿವಾದಕ್ಕೆ ಕಾರಣ

ಮೈಸೂರು: ಟಿ ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಆಗಮಿಸಿ ಅದನ್ನು ತೆರವಿಗೊಳಿಸಬೇಕೆಂದು ಪೊಲೀಸರು ಹೇಳಿದಾಗ ಒಕ್ಕಲಿಗ ಸಂಘದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಪರವಾಗಿ ಮಾತಾಡಿದ ಒಕ್ಕಲಿಗ ಮುಖಂಡರೊಬ್ಬರು ಕಳೆದ ಮೂರು ವರ್ಷಗಳಿಂದ ಸ್ಥಳದಲ್ಲಿ ಕೆಂಪೇಗೌಡ ಪ್ರತಿಮೆ ಪ್ರತಿಷ್ಠಾಪಿಸುವುದಕ್ಕೆ ಪ್ರಯತ್ನಗಳು ನಡೆದಿದ್ದವು. ಶಾಸಕರಾದ ಶ್ರೀವತ್ಸ ಮತ್ತು ಹರೀಶ್ ಸಮಯ ತೆಗೆದುಕೊಂಡಿದ್ದರೂ ಪ್ರತಿಮೆ ಪ್ರತಿಷ್ಠಾಪನೆಗೆ ಅನುಮತಿ ಪಡೆದುಕೊಳ್ಳಲಿಲ್ಲ. ಹಾಗಾಗಿ ಸ್ಥಳೀಯರೇ ನಿನ್ನೆ …

Read More »

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್​ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ.

ಬೆಂಗಳೂರು, ಫೆಬ್ರವರಿ 08: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್​ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ. ಆ ಮೂಲಕ ತೊಗರಿ ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರದಿಂದ ಗುಡ್‌ನ್ಯೂಸ್‌ ನೀಡಲಾಗಿದೆ. ಪ್ರೋತ್ಸಾಹಧನ ನೀಡುವುದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ.2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್‌ಗೆ 450 ರೂ ಪ್ರೋತ್ಸಾಹಧನ ನೀಡುವುದಾಗಿ …

Read More »

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯ ವೀಕ್ಷಿಸಿದ ಡಿ.ಕೆ. ಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ, ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಅವರು ಶಿವಕುಮಾರ್ ಅವರಿಗೆ ತಂಡದ ಆಟಗಾರರನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ನಟ ಹಾಗೂ ತಂಡದ ಆಟಗಾರ ಗೋಲ್ಡನ್ ಸ್ಟಾರ್ ಗಣೇಶ್, ತಂಡದ ಮಾಲೀಕರಾದ …

Read More »

ಧಾರವಾಡ ಶಹರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡ್ ಶಾಫ್ ಓನರ್ಸ್ ಮೀಟಿಂಗ್….

ರಾಜ್ಯದಲ್ಲಿ ಇತ್ತೀಚೆಗೆ ನಡೆದ ದರೋಡೆ ಸೇರಿ ಕಳ್ಳತನ ಪ್ರಕರಣಗಳು ಹೆಚ್ಚಳವಾದ ಹಿನ್ನಲೆಯಲ್ಲಿ ಧಾರವಾಡ ಶಹರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡ್ ಶಾಫ್ ಓನರ್ಸ್‌ಗಳ ಸಭೆಯನ್ನು ಪೊಲೀಸ ‌ಇಲಾಖೆ ನಡೆಸಿ ನಡೆಸಲಾಯಿತು. ಈ ವೇಳೆ ಶಾಪ್ ಓನರ್ಸಗಳಿಗೆ ಪೊಲೀಸ ಅಧಿಕಾರಿಗಳು ಹಲವು ಸೂಚನೆಗಳನ್ನು ನೀಡಿ, ಎಚ್ಚರಿಕೆಯಿಂದಿರಲು ತಿಳಿಸಿದರು. ನಗರದ ಗಾಂಧಿಚೌಕ್ ದತ್ತಾತ್ರೇಯ ಮಂದಿರದ ಸಭಾಭವನಲ್ಲಿ ಧಾರವಾಡ ಎಸಿಪಿ ಪ್ರಶಾಂತ. ಸಿದ್ಧನಗೌಡರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಈ ವೇಳೆ ಗೋಲ್ಡ್ ಶಾಫ್ ಓನರ್ಸ್ …

Read More »

ಬೆಳಗಾವಿಯಲ್ಲಿ ಐಸ್ ಕ್ರೀಂ ಉತ್ಸವ…

ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ… ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ… ದಕ್ಷಿಣ ಶಾಸಕ ಅಭಯ ಪಾಟೀಲರಿಂದ ಆಯೋಜನೆ ಸದುಪಯೋಗ ಬೆಳಗಾವಿಯ ವಿದ್ಯಾರ್ಥಿಗಳು 5ನೇ ವರ್ಷದ ಐಸ್ ಕ್ರೀಂ ಉತ್ಸವ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು ಆಯೋಜಿಸಲಾಗಿತ್ತು. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು …

Read More »

ಗಣೇಶೋತ್ಸವ ಮಂಡಳದಿಂದ ಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ

ವಡಗಾಂವ ಯಳ್ಳೂರ ರಸ್ತೆಯ ಗಣೇಶೋತ್ಸವ ಮಂಡಳದಿಂದ ಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ…. ವಡಗಾಂವ ಯಳ್ಳೂರ ರಸ್ತೆಯ ಗಣೇಶೋತ್ಸವ ಮಂಡಳಗಣೇಶನ ಮೂರ್ತಿ ತಯಾರಿಕೆಗೆ ಶುಭಾರಂಭ…. ವಿಶೇಷ ಪೂಜಾ ಕಾರ್ಯದ ಆಯೋಜನೆ ನೂರಾರು ಭಕ್ತರು ಭಾಗಿಬೆಳಗಾವಿಯ ವಡಗಾಂವ ಯಳ್ಳೂರ ರಸ್ತೆಯ ಸಾರ್ವಜನಿಕ ಶ್ರೀ ಅಷ್ಟವಿನಾಯಕ ಗಣಪತಿ ಉತ್ಸವ ಮಂಡಳದ ವತಿಯಿಂದ 2025ನೇ ಸಾಲಿನ ಗಣೇಶ ಮೂರ್ತಿ ನಿರ್ಮಾಣ ಕಾರ್ಯಕ್ಕೆ ಪೂಜೆ ಸಲ್ಲಿಸಿ ಶುಭಾರಂಭಗೊಳಿಸಲಾಯಿತು. ಬೆಳಗಾವಿಯ ವಡಗಾಂವ ಯಳ್ಳೂರ ರಸ್ತೆಯ ಸಾರ್ವಜನಿಕ ಶ್ರೀ ಅಷ್ಟವಿನಾಯಕ …

Read More »