ಬೆಂಗಳೂರು, ಮಾರ್ಚ್ 20: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಇಪ್ಪತ್ತು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಉಳಿದ 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಳೆದು ತೂಗಿ ಅಭ್ಯರ್ಥಿ ಆಯ್ಕೆ ನಡೆಯುತ್ತಿದೆ. ಹೀಗಾಗಿಯೇ ಐದು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಕಾತುರ ಹೆಚ್ಚಾಗಿಯೇ ಇದೆ.ಅಭ್ಯರ್ಥಿ ಘೋಷಣೆ ಬಳಿಕ ರಾಜ್ಯದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಪ್ರಯತ್ನ ತುಸು ಹೆಚ್ಚಾಗಿಯೇ ಇದೆ. ಕುತೂಹಲಗಳ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ …
Read More »ಇನ್ಮುಂದೆ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ: ಆದೇಶ ಹೊರಡಿಸಿದ ADGP ಅಲೋಕ್ ಕುಮಾರ್!
ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ADGP ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
Read More »ಲೋಕಸಭೆ ಚುನಾವಣೆ: ಕಂಡ ಕಂಡಲ್ಲಿ ಪೋಸ್ಟರ್ ಅಂಟಿಸಿದರೆ ಜೈಲು!
ಬೆಂಗಳೂರು, ಮಾರ್ಚ್ 20: ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಚುನಾವಣಾ ಪ್ರಚಾರ ಆರಂಭವಾಗಿದೆ.ಲೋಕಸಭೆ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವುಗಳನ್ನು ಪಾಲನೆ ಮಾಡಬೇಕಿದೆ. ಅದರಲ್ಲೂ ಗೋಡೆ ಮೇಲೆ ಕಂಡ ಕಂಡಲ್ಲಿ ಪೋಸ್ಟರ್‌ಗಳನ್ನು ಅಂಟಿಸುವಂತಿಲ್ಲ. ಸಾರ್ವಜನಿಕ ಆಸ್ತಿಯನ್ನಾಗಲೀ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ಕಾಣುವಂತೆ ಗೋಡೆ ಬರಹ, …
Read More »ಸ್ಥಗಿತಗೊಂಡಿದ್ದ ಮಹಿಷವಾಡಗಿ ಸೇತುವೆ ಕಾಮಗಾರಿ ಪುನರಾರಂಭ: ಜನರಲ್ಲಿ ಮಂದಹಾಸ
ರಬಕವಿ-ಬನಹಟ್ಟಿ: ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ರಬಕವಿ-ಬನಹಟ್ಟಿ ಜಾಕವೆಲ್‌ನ ಸಮೀಪ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಹಿಷವಾಡಗಿ ಸೇತುವೆ ಕಾಮಗಾರಿ ನೀರಿನಿಂದಾಗಿ ತಾತ್ಕಾಲಿಕ ಸ್ಥಗಿತಗೊಂಡಿತ್ತು. ಸದ್ಯ ನೀರು ಇಳಿಮುಖವಾದ ಹಿನ್ನಲೆಯಲ್ಲಿ ಅದು ಪುನರ್ ಪ್ರಾರಂಭವಾಗಿದ್ದು, ರಬಕವಿ-ಬನಹಟ್ಟಿ ಜನತೆಯಲ್ಲಿ ಮಂದಹಾಸ ಮೂಡುವಂತಾಗಿದೆ. 2018 ರಲ್ಲಿ ಅಂದಿನ ಸಚಿವೆ ಉಮಾಶ್ರೀಯವರು 30 ಕೋಟಿ ರೂ.ಗಳಷ್ಟು ಟೆಂಡರ್ ಕಾಮಗಾರಿ ಮೂಲಕ ನಾಗಾರ್ಜುನ ಕನಸ್ಟ್ರಕ್ಷನ್ಸ್ ಕಂಪನಿಗೆ ನೀಡಿತ್ತು. ಕಳೆದ ಐದು ವರ್ಷಗಳಲ್ಲಿ ಕೇವಲ …
Read More »ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್. ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬೆಳಗಾವಿ: ನಗರದ ಹಿಂಡಾಲ್ಕೋ ಫ್ಯಾಕ್ಟರಿಯ ಕಂಪೌಂಡ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಹುಲಿ ಓಡಾಟದ ದೃಶ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಕೆ. ಕಲ್ಲೋಳಿಕರ, ಹುಲಿ ಪ್ರತ್ಯಕ್ಷ ಆಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ. ಸುದ್ದಿಗೆ ಸ್ಪಂದಿಸಿದ ನಮ್ಮ ಸಿಬ್ಬಂದಿಗಳು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ …
Read More »ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಶಂಕೆ
ಸಂಕೇಶ್ವರ: ಪಟ್ಟಣದ ಹೊರ ವಲಯದ ಬೈಪಾಸ್ ರಸ್ತೆ ಬಳಿ ಯುವಕನ ಶವವೊಂದು ಪತ್ತೆಯಾಗಿದ್ದು, ಯುವಕನ ಮುಖದ ತುಂಬೆಲ್ಲಾ ಗಾಯಗಳಾಗಿರುವ ಹಿನ್ನೆಲೆ ಕೊಲೆ ಮಾಡಿ ಬಿಸಾಕಿರುವ ಸಂಶಯ ವ್ಯಕ್ತವಾಗಿದೆ. ಸಂಕೇಶ್ವರ ಪಟ್ಟಣದ ಬೈಪಾಸ್ ರಸ್ತೆಯ ಗಡಹಿಂಗ್ಲಜ್ ರಸ್ತೆಯ ಬಳಿ ಸುಮಾರು 25-30 ವರ್ಷ ವಯಸ್ಸಿನ ಯುವಕನ ಶವ ಬುಧವಾರ ಬೆಳಿಗ್ಗೆ ಕಂಡು ಬಂದಿದೆ. ಯುವಕನ ಟಿ ಶರ್ಟ್ ಮೇಲೆ ಶಿವರಾಜ್ ಕಾಲೇಜ್ ಎಂದು ಬರೆಯಲಾಗಿದ್ದು, ಈತ ಮಹಾರಾಷ್ಟ್ರ ಮೂಲದವನಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. …
Read More »ಮಹದಾಯಿ ಉಳಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಕಾಂಗ್ರೆಸ್ ಆರೋಪ
ಪಣಜಿ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ತಮ್ಮ ತಾಯಿ ಎಂದೇ ಕರೆಯುವ ಮಹದಾಯಿಗೆ ಐದು ವರ್ಷಗಳಲ್ಲಿ ನ್ಯಾಯ ನೀಡುವಲ್ಲಿ ವಿಫಲರಾಗಿದ್ದಾರೆ. ಮಹದಾಯಿ ಉಳಿಸಲು ಸರ್ಕಾರ ಏನು ಮಾಡಿದೆ ಎಂದು ಅವರು ಜನರಿಗೆ ಸ್ಪಷ್ಟವಾಗಿ ಹೇಳಿದ್ದಾರೆಯೇ? ಎಂದು ಗೋವಾ ಕಾಂಗ್ರೆಸ್ ಪ್ರಶ್ನೆ ಎತ್ತಿದೆ. ಕಾಂಗ್ರೆಸ್ ಭವನದಲ್ಲಿ ಕಾಂಗ್ರೇಸ್ ನಾಯಕ ತುಲಿಯೋ ಡಿಸೋಜಾ ಮತ್ತು ಸುನೀಲ್ ಕವಠಣಕರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಮಹದಾಯಿ ಪ್ರಮುಖ ಸಮಸ್ಯೆ ಇತ್ಯರ್ಥವಾಗಬೇಕು, ಆದರೆ …
Read More »ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ
ಧಾರವಾಡ : ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ …
Read More »ವೀಣಾ ಬದಲು ಸಂಯುಕ್ತಾಗೆ ಕೈ ಟಿಕೆಟ್. ರೊಚ್ಚಿಗೆದ್ದ ಕಾಶಪ್ಪನವರ ಬೆಂಬಲಿಗರು
ಬಾಗಲಕೋಟೆ : ಪ್ರಸ್ತುತ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಭೀತಿ ಎದುರಾದ ಬೆನ್ನಲ್ಲೆ, ವೀಣಾ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಬುಧವಾರ ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಲು ಮುಂದಾದರು. ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಾಶಪ್ಪನವರ ಬೆಂಬಲಿಗರನ್ನು ಪೊಲೀಸರು, ತಡೆದರು. ಈ ವೇಳೆ ಪೊಲೀಸರು ಮತ್ತು ಕಾಶಪ್ಪನವರ ಬೆಂಬಲಿಗರ ಮಧ್ಯೆ ವಾಗ್ವಾದವೂ ನಡೆಯಿತು. ಗೋ ಬ್ಯಾಕ್ ಸಂಯುಕ್ತಾ …
Read More »ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು. ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು. ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ …
Read More »
Laxmi News 24×7