Breaking News

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಭಾಲ್ಕಿ ತಾಲೂಕಿನ ನೀಲಂನಹಳ್ಳಿ ತಾಂಡಾ ಹತ್ತಿರದ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ನೆರೆಯ ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನ್ನಾಥಪುರದ ರಾಚಪ್ಪ ರಾಮಚಂದ್ರಪ್ಪ ಬಿರಾದಾರ್ (51), ಚಾಲಕ ನವನಾಥ ಶರಣಪ್ಪ (25), ಯಲ್ಲವಾಯಿ ಗ್ರಾಮದ ನಾಗರಾಜು ಇಸ್ಟಯ್ಯಾ (38) ಸ್ಥಳದಲ್ಲಿಯೇ ಮೃತಪಟ್ಟರೆ, ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಜಗನ್ನಾಥಪುರಿಯ ಕಾಶಿನಾಥ ರಾಮಶೆಟ್ಟಿ (62) …

Read More »

ಖಾಸಗಿ ಜಮೀನಿನಲ್ಲಿ ಮಾಲೀಕರ ಅನುಮತಿ ಇಲ್ಲದೆ ಶವ ಸಂಸ್ಕಾರ ಮಾಡಬಹುದೇ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಜಮೀನಿನಲ್ಲಿ ಮಾಲೀಕರ ಪರವಾನಿಗೆಯಿಲ್ಲದೆ ಶವ ಸಂಸ್ಕಾರ ಮಾಡಬಹುದೇ ಎಂಬುದರ ಕುರಿತು ತನ್ನ ನಿಲುವನ್ನು ತಿಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ತಮ್ಮ ಒಪ್ಪಿಗೆಯಿಲ್ಲದೇ ಸೊಸೆಯ ಶವವನ್ನು ಮನೆಯ ಬಳಿ ಹೂಳಲಾಗಿದೆ. ಹಾಗಾಗಿ ಸಮಾಧಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಹೆಚ್‌. ಗೋಪಾಲಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕ ಸದಸ್ಯಪೀಠ ಈ ನಿರ್ದೇಶನ …

Read More »

ಗೃಹಲಕ್ಷ್ಮಿಯರಿಗಾಗಿ ಸೊಸೈಟಿ; ಕಡಿಮೆ ಬಡ್ಡಿದರದಲ್ಲಿ ಸಿಗಲಿದೆ 3 ಲಕ್ಷ ರೂ. ಸಾಲ:

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ …

Read More »

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

ಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಬೆಳಗಾವಿಗೆ ಆಗಮಿಸಿ ಸಂಧಾನ ಮಾತುಕತೆ ನಡೆಸಿದರು. ನಾಳೆಯೇ ಸರ್ಕಾರ ಒಂದು ನಿರ್ಧಾರ ಪ್ರಕಟಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ, ಸಚಿವರು ಏಳನೇ ತಾರೀಖಿನವರೆಗೂ ಕಾಲಾವಕಾಶ ಕೇಳಿದರು. ಇದಕ್ಕೆ ಕಬ್ಬು ಬೆಳೆಗಾರರು ಒಪ್ಪದೇ ಇದ್ದಾಗ ಮಾತುಕತೆ ಮುರಿದು ಬಿತ್ತು. ಇದರಿಂದ ಆಕ್ರೋಶಗೊಂಡ ರೈತರು ಸಚಿವರ ಕಾರಿಗೆ ಮುತ್ತಿಗೆ …

Read More »

ಹುಕ್ಕೇರಿ : ಸತಿ – ಪತಿಯರಲ್ಲಿ ಸಾಮರಸ್ಯ ಕೂಡಿರಲಿ – ಯರನಾಳ ಬ್ರಹ್ಮಾನಂದ ಅಜ್ಜನವರು.

ಹುಕ್ಕೇರಿ : ಸತಿ – ಪತಿಯರಲ್ಲಿ ಸಾಮರಸ್ಯ ಕೂಡಿರಲಿ – ಯರನಾಳ ಬ್ರಹ್ಮಾನಂದ ಅಜ್ಜನವರು. ಸತಿ ಪತಿಯರು ಸಾಮರಸ್ಯದಿಂದ ಬಾಳಿದರೆ ಕುಟುಂಬದಲ್ಲಿ ಸೌಖ್ಯ ಕಾಣಬಹುದು ಎಂದು ಹುಕ್ಕೇರಿ ತಾಲೂಕಿನ ಯರನಾಳ ಕಾಳಿಕಾ ಮಠದ ಬ್ರಹ್ಮಾನಂದ ಅಜ್ಜನವರು ಹೇಳಿದರು. ಹುಕ್ಕೇರಿ ತಾಲೂಕಿನ ಯರನಾಳ ಕಾಳಿಕಾ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಕಾರಿಮಠದ ಗುರುಸಿದ್ದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಶಿವಾನುಭವ ಗೋಷ್ಟಿ ಯಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಬ್ರಹ್ಮಾನಂದ ಅಜ್ಜನವರು ಕುಟುಂಬದಲ್ಲಿ …

Read More »

ಕನ್ನೇರಿ ಶ್ರೀಗಳಿಗೆ ನಿರ್ಬಂಧ; ಉಮೇಶ ವಂದಾಲ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ವಿಜಯಪುರ:ಕನ್ನೇರಿ ಶ್ರೀಗಳಿಗೆ ನಿರ್ಬಂಧ; ಉಮೇಶ ವಂದಾಲ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಆ್ಯಂಕರ್: ವಿಜಯಪುರ ನಗರದಲ್ಲಿ ಹಿಂದೂ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಕನ್ನೆರಿ ಮಠದ ಅದೃಷ್ಟ ಕಾಡಸಿದ್ದೇಶ್ವರ ಶ್ರೀಗಳ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆ ಪ್ರವೇಶ ನಿರ್ಬಂಧಿಸಿ ರುವುದನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿದವು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಸರ್ಕಾರ ಕೂಡಲೇ ಶ್ರೀಗಳ ನಿರ್ಬಂಧವನ್ನು ಹಿಂಪಡೆಯಬೇಕು, ಇಲ್ಲವಾದರೆ ಮುಂಬರುವ ದಿನಗಳಲ್ಲಿ ಇನ್ನೂ ಉಗ್ರವಾದ ಹೋರಾಟ ಮಾಡುವುದಾಗಿ …

Read More »

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿಗೆ ಚಾಲನೆ ನೀಡಿರುವ ಪ್ರಗತಿಪರ ರೈತ ಸಿದ್ರಾಮಪ್ಪ ಬಿರಾದಾರ್ ಅವರು ತಮ್ಮ ಹಸಿರು ವಜ್ರವಾದ ರೆಡ್ ಡೈಮಂಡ್ ಪೇರಲ ತೋಟದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿಯಾಗಿ , ತಾವು ಸಾವಯವ ವಿಧಾನದಲ್ಲಿ ಬೆಳೆದ ರೆಡ್ ಡೈಮಂಡ್ ತಳಿಯ ಪೇರಲ …

Read More »

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್​ ಮಾಡುವ ಬಗ್ಗೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಕಳೆದು ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದ್ದರೂ, ಸರ್ಕಾರದ ಯಾವುದೇ ಪ್ರತಿನಿಧಿಗಳು ಸ್ಥಳಕ್ಕೆ ಬಾರದೇ ಇರುವುದರಿಂದ ರೈತರು ಮತ್ತಷ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. …

Read More »

ಕಬ್ಬು ಬೆಳೆಗಾರರ ಬೆಂಬಲಕ್ಕೆ ಬಂದ ಕರವೇ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕಬ್ಬಿಗೆ 3,500 ರೂ. ದರ ನಿಗದಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ರೈತರು ಕಳೆದ 7 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿದ್ದು, ಬೆಳಗಾವಿ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ಬಹುತೇಕ ಎಲ್ಲ ತಾಲೂಕುಗಳಲ್ಲಿ ದಿನನಿತ್ಯ ಪ್ರತಿಭಟನೆಗಳು ನಡೆಯುತ್ತಿವೆ. ಈಗ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಮುಂದಾಗಿದೆ. …

Read More »

ಹುಬ್ಬಳ್ಳಿಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್​ಗೆ ಗ್ರಹಣ:

ಹುಬ್ಬಳ್ಳಿ: ನಗರದ ಹಳೇ ಕೋರ್ಟ್ ವೃತ್ತದ ಬಳಿಯ ಸಾಯಿ ಮಂದಿರದ ಎದುರು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮಲ್ಟಿ – ಲೆವೆಲ್ ಕಾರು ಪಾರ್ಕಿಂಗ್ ಕಾಮಗಾರಿ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಕಾಮಗಾರಿ ಆರಂಭವಾಗಿ ಏಳು ವರ್ಷ ಕಳೆದರೂ ಕೂಡ ನೆಲಮಟ್ಟ ಬಿಟ್ಟು ಮೇಲೇಳುತ್ತಿಲ್ಲ. ಇದು ಮಹಾನಗರ ಪಾಲಿಕೆಗೆ ತೀವ್ರ ತಲೆನೋವು ತಂದೊಡ್ಡಿದ್ದು, ಗುತ್ತಿಗೆ ರದ್ದು ಮಾಡಲು ಚಿಂತನೆ ನಡೆಸಿದೆ. ಅವಳಿ ನಗರದ ವಾಹನಗಳ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಸುಸಜ್ಜಿತವಾದ ವಾಹನ ನಿಲುಗಡೆಗೆ ಆನುಕೂಲವಾಗುವ …

Read More »