Breaking News

PSI ಹಗರಣ ಎಸ್‌ಐಟಿ ತನಿಖೆಗೆ: ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಲೋಕಸಭಾ ಚುನಾ ವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಮತ್ತೂಂದು ತನಿಖಾಸ್ತ್ರ ಬಳಕೆಗೆ ಕಾಂಗ್ರೆಸ್‌ ಮುಂದಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಪಿಎಸ್‌ಐ ನೇಮಕ ಹಗರಣದ ಬಗ್ಗೆ ವಿಶೇಷ ತನಿಖಾ ಸಮಿತಿ (ಎಸ್‌ಐಟಿ) ರಚಿಸಿ ತನಿಖೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಿಎಂ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯವೂ ಸೇರಿ ಒಟ್ಟು 48 ವಿಷಯಗಳಿಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕಂದಾಯ …

Read More »

ಕರ್ನಾಟಕದಲ್ಲಿ ಎನ್‌ಡಿಎ 25; ಬೆಂಗಳೂರು ಭಾಗದಲ್ಲಿ 1 ಕೈಗೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನ್ಯೂಸ್‌18 ನಡೆಸಿರುವ ಸಮೀಕ್ಷೆಯ ಪ್ರಕಾರ, ಕರ್ನಾಟಕದ 28 ಕ್ಷೇತ್ರಗಳಲ್ಲಿ ಎನ್‌ಡಿಎ (ಬಿಜೆಪಿ ಮತ್ತು ಜೆಡಿಎಸ್‌) 25 ಕ್ಷೇತ್ರಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್‌ 3 ಸ್ಥಾನಕ್ಕೆ ತೃಪ್ತಿ ಪಡಲಿದೆ. ಹಾಗೆಯೇ, ಎನ್‌ಡಿಎ ಶೇ.58 ಮತ್ತು ಕಾಂಗ್ರೆಸ್‌ ಶೇ.35 ಮತ ಗಳಿಸಲಿವೆ. ಇನ್ನು ದೇಶಾದ್ಯಂತ ಎನ್‌ಡಿಎ 411, ಇಂಡಿಯಾ ಒಕ್ಕೂಟ 105 ಮತ್ತು ಇತರರು 27 ಸ್ಥಾನಗಳನ್ನು ಜಯಿಸಲಿದ್ದಾರೆ. ಈ ಸಮೀಕ್ಷೆಯ ಪ್ರಕಾರ, 400 ಸೀಟು ಗೆಲ್ಲುವ ತನ್ನ ಗುರಿಯನ್ನು …

Read More »

ಇಂದೂ ನಡೆಯದು ಸಭೆ,ಕಾಂಗ್ರೆಸ್‌ ಪಟ್ಟಿ ವಿಳಂಬ ಸಂಭವನೀಯ ಅಭ್ಯರ್ಥಿಗಳು:

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ 7 ಕ್ಷೇತ್ರಗಳಿಗೆ ಮೊದಲ ಪಟ್ಟಿ ಬಿಡುಗಡೆ ಮಾಡಿ 8 ದಿನಗಳು ಕಳೆದರೂ ಬಾಕಿ ಉಳಿದಿರುವ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಗ್ರಹಣ ಹಿಡಿದಿದೆ. ಈ ಮಧ್ಯೆ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಚುನಾವಣ ಸಮಿತಿ ಸಭೆ ಸೋಮವಾರಕ್ಕೆ ಮುಂದೂಡಿಕೆ ಆಗಿದ್ದು, ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗಲಿದೆ.   ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆಯ ಸಮಾರೋಪ ಸಮಾರಂಭವು ರವಿವಾರ ಮುಂಬಯಿಯಲ್ಲಿ ನಡೆಯಲಿರುವುದರಿಂದ ರಾಜ್ಯದಿಂದ …

Read More »

ಮಾರ್ಚ್ 16ಕ್ಕೆ ಬಹು ನಿರೀಕ್ಷಿತ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ದೇಶದ ಜನರು ಬಹುದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಲೋಕ ಸಭಾ ಚುನಾವಣೆಗೆ ದಿನಾಂಕ ನಿಗದಿಗೊಳಿಸುವ ಸಮಯ ಹತ್ತಿರ ಬಂದಿದೆ. ಹೌದು ಬಹುನಿರೀಕ್ಷಿತ ಲೋಕಸಭಾ ಚುನಾವಣೆಗೆ ನಾಳೆ( ಮಾರ್ಚ್ 16) ಮಧ್ಯಾಹ್ನ ದಿನಾಂಕ ಘೋಷಣೆ ಮಾಡಲಾಗುವುದೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೊಸದಾಗಿ ಚುನಾಯಿತ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ …

Read More »

ಧರೆಗುರುಳಿದ ಮರ. 2 ಕಾರುಗಳು ಜಖಂ, ಬೈಕ್ ಸವಾರನ ಸ್ಥಿತಿ ಗಂಭೀರ

ದಾಂಡೇಲಿ : ನಗರದ ಕುಳಗಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದು ಕಾರುಗಳೆರಡು ಜಖಂಗೊಂಡಿದ್ದಲ್ಲದೇ, ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯವಾದ ಘಟನೆ ಶುಕ್ರವಾರ ನಡೆದಿದೆ. ಕುಳಗಿ ರಸ್ತೆಯ ಬದಿಯಲ್ಲಿದ್ದ ಮರವೊಂದು ಅಲ್ಲೇ ನಿಂತಿದ್ದ ಎರಡು ಕಾರುಗಳ ಮೇಲೆ ಉರುಳಿ ಬಿದ್ದಿದೆ. ಇದೇ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೂ ಮರ ಬಿದ್ದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಅವರ ಹೆಸರು ಬಹುತೇಕ ಅಂತಿಮ?

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಅವರ ಹೆಸರು ಬಹುತೇಕ ಅಂತಿಮವಾಗಿದೆ. ಅವರೂ ಸಹ ಸಮ್ಮತಿಸಿದ್ದಾರೆ. ಇದರಿಂದ ನಮಗೇನು ಬೇಸರ ಆಗಿಲ್ಲ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದಲ್ಲಿ ನನಗೆ ಅಥವಾ ನಮ್ಮ ಮಕ್ಕಳಾದ ಶ್ರದ್ಧಾ ಇಲ್ಲವೇ ಸ್ಪೂರ್ತಿ ಅವರಿಗೆ ಟಿಕೆಟ್ ಸಿಗಬೇಕು ಎಂಬ ಆಸೆಯಿತ್ತು. ಈಗಲೂ ಹೈಕಮಾಂಡ್ ಪಟ್ಟಿಯಲ್ಲಿ ನಮ್ಮ ಹೆಸರುಗಳಿವೆ. ಇದರಿಂದ ಇನ್ನೂ …

Read More »

ಅಂಗನವಾಡಿ ಕೇಂದ್ರದಲ್ಲಿ ‘ಕಳಪೆ’ ಆಹಾರ ಪೂರೈಕೆ : ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು

ಕಲಬುರ್ಗಿ : ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಹಾಗೂ ಕಡಿಮೆ ಗುಣಮಟ್ಟದ ಮೊಟ್ಟೆ ವಿತರಣೆ ಮಾಡುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಲಬುರಗಿಯ ಹನುಮಾನ ನಗರದ ತಾಂಡಾ ಅಂಗನವಾಡಿಯಲ್ಲಿ ಪರೀಶಿಲನೆ‌ ವೇಳೆ ಮೊಟ್ಟೆ ತೂಕದಲ್ಲಿ ಬಾರಿ ವ್ಯತ್ಯಾಸ ಬಂದಿದ್ದು, ನಿಗದಿತ ತೂಕಕ್ಕಿಂತ ಕಡಿಮೆಯಿದೆ. ಕನಿಷ್ಠ 50 ಗ್ರಾಂ ಮೊಟ್ಟೆ ತೂಕ ಇರಬೇಕು‌ ಎಂಬ ನಿಯಮವಿದೆ. ಆದ್ರೆ, ಅಂಗನವಾಡಿಗಳಲ್ಲಿ ಸಿಕ್ಕ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ’ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಅಪೆಕ್ಸ್ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಿದೆ. ಅದೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ. ಇಂದು ಅಪೆಕ್ಸ್ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ಅವರು ರಮೇಶ್ ಜಾರಕಿಹೊಳಿಯವರು ಸಿಐಡಿ ನೋಟಿಸ್ …

Read More »

ಬಿಜೆಪಿ ಪಕ್ಷದ ಬಡವರಿಗೂ ಕೂಡ ‘ಗ್ಯಾರಂಟಿ’ ಯೋಜನೆಗಳನ್ನ ತಲುಪಿಸುತ್ತಿದ್ದೇವೆ:C.M.

ಮೈಸೂರು : ಮೈಸೂರು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪರಿಷತ್ತು ಜಂಟಿಯಾಗಿ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಸಮಾವೇಶದಲ್ಲಿ ಮಾತನಾಡಿ ಬಿಜೆಪಿ ಪಕ್ಷದ ಬಡವರಿಗೂ ಕೂಡ ಗ್ಯಾರಂಟಿ ಯೋಜನೆಗಳನ್ನ ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳು ಎಲ್ಲಾ ಜಾತಿಯ ಬಡವರು, ಎಲ್ಲಾ ಧರ್ಮದ ಬಡವರು ಅವರೆಲ್ಲರಿಗೂ ಕೂಡ ಈ ಯೋಜನೆಗಳು ತಲುಪುವ ಕೆಲಸ ಮಾಡುತ್ತೇವೆ. ಭಾರತೀಯ ಜನತಾ …

Read More »

ಪ್ರಧಾನಿ ಮೋದಿ ರೋಡ್ ಶೋ’ಗೆ ಅನುಮತಿ ನಿರಾಕರಣೆ

ಕೊಯಮತ್ತೂರು : ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ರೋಡ್ ಶೋಗೆ ತಮಿಳುನಾಡಿನ ಕೊಯಮತ್ತೂರು ಆಡಳಿತ ಅನುಮತಿ ನಿರಾಕರಿಸಿದೆ. ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು, ಮಾರ್ಚ್ 18 ರಂದು ಪ್ರಧಾನಿ ಮೋದಿಯವರ 3.6 ಕಿ.ಮೀ ಉದ್ದದ ರೋಡ್ ಶೋ ನಡೆಸಲು ಅನುಮತಿ ಕೋರಿ ಭಾರತೀಯ ಜನತಾ ಪಕ್ಷ ಗುರುವಾರ ಕೊಯಮತ್ತೂರು ನಗರ ಪೊಲೀಸರಿಗೆ ಜ್ಞಾಪಕ ಪತ್ರವನ್ನ ಸಲ್ಲಿಸಿತ್ತು. ಕೊಯಮತ್ತೂರು ಆಡಳಿತವು ವಿವಿಧ ಕಾರಣಗಳನ್ನ ನೀಡಿ ಅನುಮತಿ ನಿರಾಕರಿಸಿದೆ. ಮೂಲಗಳ ಪ್ರಕಾರ, ಅನುಮತಿ …

Read More »