Breaking News

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ “ಗೆಲ್ಲಬಲ್ಲ” ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ, ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ …

Read More »

ಸಂಸದ ಭಗವಂತ ಖೂಬಾ ವಿರುದ್ದ ಸಿಡಿದೆದ್ದ ಶಾಸಕರು

ಬೆಂಗಳೂರು : ಸಂಸದ, ಕೇಂದ್ರ ಸಚಿವ ಭಗವಂತ ಖೂಬಾಗೆ (Bhagavant khooba) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lokasabha election 2024) ಟಿಕೆಟ್‌ ನೀಡಬಾರದು ಎಂದು ಬಿಜೆಪಿ (BJP) ಶಾಸಕರೇ ಒತ್ತಾಯಿಸಿರುವ ಘಟನೆ ಬುಧವಾರ ಬಿಜೆಪಿ ಸಭೆಯಲ್ಲಿ ನಡೆದಿದೆ. ಶಾಸಕ ಪ್ರಭು ಚವ್ಹಾಣ್‌ (Prabhu chavhan) ಅವರು, ಭಗವಂತ ಖೂಬಾ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಇದಕ್ಕೆ ಹಲವು ಶಾಸಕರು ಸಹಮತಿ ವ್ಯಕ್ತಪಡಿಸಿದ್ದಾರೆ.   ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ …

Read More »

ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ

ಬೆಂಗಳೂರು, (ಜನವರಿ 10): ಮುಂದಿನ ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್‌ (Congress Karnataka) ಈ ಬಾರಿ ಏನಿಲ್ಲವೆಂದರೂ 28 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳನ್ನು(Guarantee schemes )ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಲಾಗಿದೆ. ರಾಜ್ಯ, ಜಿಲ್ಲಾ, ತಾಲೂಕು …

Read More »

ಹೈಕಮಾಂಡ್​ಗೆ ತಾಪತ್ರಯ; ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ

ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಮೂರು ರೀತಿಯ ಗೊಂದಲ ಸೃಷ್ಟಿಯಾಗಿದೆ. ಸಮರ್ಥ ಅಭ್ಯರ್ಥಿ ಲಭ್ಯರಿಲ್ಲದ ಕಡೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಚಿವರು ಹಿಂದೇಟು ಹಾಕುತ್ತಿರುವುದು, ನಿಗಮ- ಮಂಡಳಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ನೈಜ ಕಾರ್ಯಕರ್ತರ ಕಡೆಗಣನೆ ಹಾಗೂ ಜಾತಿವಾರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಪಟ್ಟುಗಳು ಹೈಕಮಾಂಡ್​ಗೂ ಸವಾಲು ತಂದೊಡ್ಡಿದೆ.   ಡಿಕೆಶಿಯವರನ್ನೇನು ಡಿಸ್ಟರ್ಬ್ ಮಾಡಲ್ಲವಲ್ಲ!: ಇನ್ನಷ್ಟು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಬೇರೆ, …

Read More »

2023 ಇದುವರೆಗೆ ದಾಖಲಾದ ಅತ್ಯಂತ ಬಿಸಿಯಾದ ವರ್ಷವಾಗಿದೆ : ಹವಾಮಾನ ಸಂಸ್ಥೆ ಮಾಹಿತಿ

ನವದೆಹಲಿ : ಹವಾಮಾನ ಬದಲಾವಣೆಯು ಪ್ರಪಂಚದಾದ್ಯಂತ ಅನೇಕ ಪ್ರಮುಖ ಬದಲಾವಣೆಗಳನ್ನು ಕಾಣುತ್ತಿದೆ. ಕಳೆದ ವರ್ಷ ದಾಖಲೆಯ ಅತ್ಯಂತ ಬೆಚ್ಚಗಿನ ವರ್ಷವಾಗಿದ್ದು, ಕೈಗಾರಿಕಾ ಪೂರ್ವ ಮಟ್ಟಕ್ಕೆ ಹೋಲಿಸಿದರೆ ಸರಾಸರಿ ಜಾಗತಿಕ ತಾಪಮಾನ ಏರಿಕೆ 1.5 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಈ ಮಾಹಿತಿಯನ್ನು ಯುರೋಪಿಯನ್ ಕ್ಲೈಮೇಟ್ ಏಜೆನ್ಸಿ ನೀಡಿದೆ. 2024 ರ ಜನವರಿ ಅಥವಾ ಫೆಬ್ರವರಿಯಲ್ಲಿ ಕೊನೆಗೊಳ್ಳುವ 12 ತಿಂಗಳ ಅವಧಿಯಲ್ಲಿ 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನು ದಾಟಬಹುದು ಎಂದು ಕೋಪರ್ನಿಕಸ್ ಹವಾಮಾನ …

Read More »

ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ: ಸಿಎಂ

ಬೆಂಗಳೂರು: ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಲೇಖಕ ಡಾ.ಎಂ.ಎಸ್.ಮುತ್ತುರಾಜ್ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ …

Read More »

ಕೇಂದ್ರಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.     ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ …

Read More »

ಪ್ರಲ್ಹಾದ್​​ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್‌ ಆಕ್ರೋಶ

ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …

Read More »

ಬಿಡುಗಡೆಯಾಗುತ್ತಿದ್ದಂತೆ ಕರವೇ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ !

ಬೆಂಗಳೂರು, ಜನವರಿ 09: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ)ನಾರಾಯಣಗೌಡ(Narayangouda) ಅವರಿಗೆ ಜಾಮೀನು‌ ಮಂಜೂರು ಆದ ಹಿನ್ನೆಲೆಯಲ್ಲಿ ಮಂಗಳವಾರ (ಜ.09) ಬಿಡುಗಡೆಯಾಗಿದ್ದಾರೆ. ನಾರಯಣಗೌಡ ಅವರು ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು (Police) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಇದೀಗ ಮಾರ್ಥಾಸ್ ಆಸ್ಪತ್ರೆಯಲ್ಲಿ ನಾರಾಯಣಗೌಡ ಅವರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಬಳಿಕ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ. 2017ರ ಹಳೇ ಕೇಸ್ ಸಂಬಂಧ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. …

Read More »

ಗಡಿ ವಿವಾದ: ಮರಾಠಿ ಭಾಷಿಕರಿಗೆ ಪರಿಹಾರ ನಿಧಿ ಮಂಜೂರು, ಬೆಳಗಾವಿಯಲ್ಲೇ ಆರೋಗ್ಯ ವಿಮೆ ತೆರೆದ ಮಹಾರಾಷ್ಟ್ರ

ಬೆಳಗಾವಿ, ಜನವರಿ 09: ಇತ್ತೀಚಿಗೆಮಹಾರಾಷ್ಟ್ರಸಂಸದ ಧೈರ್ಯಶೀಲ ಮಾನೆ (Dhairyashil mane) ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಕರ್ನಾಟಕದ ಗಡಿಯಲ್ಲಿ ಇರುವ ಮರಾಠಿ ಭಾಷಿಕರಿಗೆ ಮಹಾರಾಷ್ಟ್ರ (Maharashtra) ಸರ್ಕಾರ ಆರೋಗ್ಯ ವಿಮೆ (Health Insurance) ಜಾರಿ ಮಾಡಲಿದೆ ಎಂದಿದ್ದರು. ಈ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸರ್ಕಾರ ಕರ್ನಾಟಕದ ಗಡಿಯೊಳಗಿನ ಮರಾಠಿ ಭಾಷಿಕರಿಗೆ ಆರೋಗ್ಯ ಪರಿಹಾರ ನಿಧಿ ಮಂಜೂರು ಮಾಡಿದೆ. …

Read More »