Breaking News

ನನಗೆ ನನ್ನ ಇಬ್ಬರು ಹೆಂಡ್ತೀರು ಬೇಕು; ಮದ್ಯದ ಅಮಲಿನಿಲ್ಲಿ ಮಾನ್ವಿ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ವ್ಯಕ್ತಿ

ರಾಯಚೂರು, : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆರಾಯಚೂರು(Raichur) ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಊಟದ ಹೊತ್ತಲ್ಲಿ ಎಂಟ್ರಿ ಕೊಟ್ಟಿದ್ದ ಆತನ ಕಿರಿಕ್​ಗೆ ಖಾಕಿ ಪಡೆ ಏನ್ ಮಾಡಬೇಕು ಎಂದು ತಿಳಿಯದೇ ತಲೆ ಮೇಲೆ ಕೈ ಹೊತ್ತು ಕೂತಿದ್ದರು. ಮದಿರೆಯ ಮತ್ತಲ್ಲಿ ಹಾವಳಿ ಇಟ್ಟಿದ್ದವನ ಡಿಮ್ಯಾಂಡ್​​ಗೆ …

Read More »

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಅಧಿಕಾರಕ್ಕಾಗಿ ಬಿಜೆಪಿ, ಕಾಂಗ್ರೆಸ್ ನಡುವೆ ಪೈಪೋಟಿ

ವಿಜಯಪುರ, ಜನವರಿ 08: ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ(Corporation Mayor, Deputy Mayor Elections)ಮಹೂರ್ತ ಕೂಡಿ ಬಂದಿದೆ. ನಾಳೆ ಪಾಲಿಕೆಯ ಮೇಯರ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯುವುದು ಫಿಕ್ಸ್ ಆಗಿದೆ. ಪಾಲಿಕೆಗೆ ಚುನಾವಣೆ ನಡೆದು ವರ್ಷದ ಮೇಲೆ ಮೇಯರ್ ಉಪ ಮೇಯರ್ ಚುನಾವಣೆ ನಡೆಯುತ್ತಿರುವುದು ಹರ ಸಾಹಸವೇ ಆಗಿದೆ. ಕೆಲ ವಿಚಾರಗಳು ನ್ಯಾಯಾಲಯದಲ್ಲಿದ್ದ ಕಾರಣ ಚುನಾವಣೆ ನಡೆಸಲು ಆಗಿರಲಿಲ್ಲ. ಇದೀಗ ನಾಳೆ ಮೇಯರ್ …

Read More »

ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿರುವವರ ನಾಟಕ: ಪ್ರಲ್ಹಾದ ಜೋಶಿ

ಬೆಂಗಳೂರು, ಜ.8: ಅಯೋಧ್ಯೆಯ ರಾಮ ಮಂದಿರದ (Ayodhya Ram Mandir) ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ ಡಿಸಿಎಂಡಿಕೆ ಶಿವಕುಮಾರ್(DK Shivakumar) ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi), ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಜೋಶಿ, ‘ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು …

Read More »

ಕರವೇ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ಇಂದೂ ಬಿಡುಗಡೆ ಭಾಗ್ಯವಿಲ್ಲ, ಕಾರಣವೇನು?

ಬೆಂಗಳೂರು, (ಜನವರಿ 08): ಕರ್ನಾಟಕ ರಕ್ಷಣಾ ವೇದಿಕೆ(ಕರವೇ)ಅಧ್ಯಕ್ಷ ಎ.ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ. ಆದ್ರೆ, ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗೆ ಸರಿಯಾದ ಸಮಯಕ್ಕೆ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಇಂದೂ ಸಹ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರಿಗೆ ಬಿಡುಗಡೆ ಭಾಗ್ಯವಿಲ್ಲ. ಜಾಮೀನು ಆದೇಶ ಪ್ರತಿ ತಲುಪಿಸುವುದು ವಿಳಂಬವಾಗಿದ್ದರಿಂದ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ನಾರಾಯಣಗೌಡ ಪರ ವಕೀಲ ಹೇಳಿದ್ದೇನು? ಇನ್ನು ಈ ಬಗ್ಗೆ ನಾರಾಯಣಗೌಡ ಪರ ವಕೀಲ ಕುಮಾರ್ ಎಲ್‌.ಜಿ …

Read More »

ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಜಗದೀಶ್ ಶೆಟ್ಟರ್

ಧಾರವಾಡ, ಜನವರಿ 08: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar)​ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್​​ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ …

Read More »

ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಪ್ರಲ್ಹಾದ್​​ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್‌ ಆಕ್ರೋಶ

ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …

Read More »

ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ

ಗದಗ:ರಾಕಿಂಗ್ ಸ್ಟಾರ್ ಯಶ್ (Yash)ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ …

Read More »

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ

ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್‌ಟೇಬಲ್​ನಿಂದ ವಂಚನೆ ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ. ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ …

Read More »

ಹುಂಡಿ ಹಣ ಆಯಾ ದೇವಾಲಯಕ್ಕೆ ಬಳಕೆಯಾಗಲಿ: ಸಚಿವ ರಾಮಲಿಂಗಾ ರೆಡ್ಡಿ

ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ (Temple) ಬಳಸಬೇಕು ಎಂದು ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga reddy) ಹೇಳಿದರು. ಇಂದು ಧಾರವಾಡದ (Dharwad) ನೂತನ ಸಿಬಿಟಿ ನಿಲ್ದಾಣಕ್ಕೆ (CBT Bus Stop) ಶಂಕುಸ್ಥಾಪನೆ ನೆರವೇರಿಸಿದರು. ಧಾರವಾಡದ ಸಿಬಿಟಿ ಬಸ್​ ನಿಲ್ದಾಣ ನಿರ್ಮಾಣವಾಗಿ 50 ವರ್ಷಗಳಾಗಿವೆ. ಹೀಗಾಗಿ ಹೊಸ ಬಸ್​ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. 13.11 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ …

Read More »

ಕೆಆರ್‌ಎಸ್‌ಗೆ ಧಕ್ಕೆ ಆದರೆ ಆಗುವ ಅನಾಹುತದ ಅರಿವಿದೆಯೇ? ಹೈ ಕೋರ್ಟ್‌ ಪ್ರಶ್ನೆ, ಗಣಿಗಾರಿಕೆ ನಿಷೇಧ!

ಬೆಂಗಳೂರು : ಕೆಆರ್‌ಎಸ್‌ ಆಣೆಕಟ್ಟಿಗೆ(KRS dam) ಹಾನಿಯಾದರೆ ಆಗುವ ಅನಾಹುತದ ಅರಿವಿದೆಯೇ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ(Justice prasanna B Varale) ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿದೆ.   ಕೆಆರ್‌ಎಸ್‌ ಸುತ್ತ ಗಣಿಗಾರಿಕೆ ವಿಚಾರವಾಗಿ ಜಿಲ್ಲಾಧಿಕಾರಿಗಳು ವಿಧಿಸಿದ್ದ ಷರತ್ತು ವಿರೋಧಿಸಿ ಗಣಿ ಮಾಲೀಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠ ಕೆಆರ್‌ಎಸ್‌ ಡ್ಯಾಮ್‌ ಸುತ್ತ …

Read More »