ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ರಸ್ತೆ ಅಭಿವೃದ್ಧಿಗೊಂಡಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ಜನರು, ವಾಹನಗಳು ಓಡಾಡುತ್ತಿರುತ್ತವೆ. ಆದರೆ ಇದೀಗ ಈ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಸ್ಮಾರ್ಟ್ ಪಾರ್ಕಿಂಗ್ ಮಾಡಿ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗಡಿಗಳನ್ನು ಖಾಸಗಿ ಸಂಸ್ಥೆಯೊಂದು ಟೆಂಡರ್ ಮೂಲಕ ಪಡೆದುಕೊಂಡಿದೆ. ಇದೇ ಸಂಸ್ಥೆ ಕದ್ರಿ ಪಾರ್ಕ್ನ ಅಂಗಡಿ, ರಸ್ತೆ, ಫುಟ್ಪಾತ್, ಪಾರ್ಕಿಂಗ್ …
Read More »‘ರಾಹುಲ್ ಗಾಂಧಿ, ಆತನ ಖಾಂದಾನ್ ಚೋರ್’: ಹರಿಯಾಣದಲ್ಲಿ ಮತಗಳ್ಳತನ ಆರೋಪಕ್ಕೆ ಛಲವಾದಿ ಟೀಕೆ
ಚಾಮರಾಜನಗರ: “ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಕಾಂಗ್ರೆಸ್ನವರು ಮಾತೆತ್ತಿದ್ರೆ ಗ್ಯಾರಂಟಿ ಎಂದು ದಿನ ದೂಡುತ್ತಿದ್ದಾರೆ” ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಕೆರೆ ಆವರಣದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಜನಸಾಮಾನ್ಯರ ಪರಿಸ್ಥಿತಿ ಅಧೋಗತಿಗೆ ಇಳಿದಿದೆ. ಎಸ್ಇಪಿ ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡರೂ, ದಲಿತ ಸಚಿವರು ಯಾರೂ ಮಾತನಾಡುತ್ತಿಲ್ಲ” ಎಂದು ಕಿಡಿಕಾರಿದರು. ಈ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ದಲಿತ ಸಚಿವರು …
Read More »2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿ
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 2026ರ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ 1ರ ಪರೀಕ್ಷೆಗಳು ನಡೆಯಲಿವೆ. ಪಿಯುಸಿ ಪರೀಕ್ಷೆ 1ರ ಪರೀಕ್ಷೆ 2026ರ ಮಾರ್ಚ್ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿದೆ. ಪರೀಕ್ಷೆ 2ರ ಪರೀಕ್ಷೆ …
Read More »ಕೇತಗಾನಗಳ್ಳಿ ಸರ್ಕಾರಿ ಜಮೀನು ಒತ್ತುವರಿ; 10 ದಿನಗಳಲ್ಲಿ ಒತ್ತುವರಿ ಕುರಿತು ವರದಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್
ಬೆಂಗಳೂರು : ರಾಮನಗರದ ಕೇತಗಾನಹಳ್ಳಿಯ ವಿವಿಧ ಸರ್ವೇ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು ತೆರವಿಗೆ ಸಂಬಂಧಿಸಿದಂತೆ ಮುಂದಿನ 10 ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರಿಂದ ಒತ್ತುವರಿಯಾಗಿರುವ ಜಮೀನು ತೆರವು ಮಾಡುವಂತೆ ಲೋಕಾಯುಕ್ತ ಆದೇಶವನ್ನು ಜಾರಿ ಮಾಡದ ಕ್ರಮವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ …
Read More »4.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೊಸ ಕೆಂಚನಟ್ಟಿ ಮತ್ತು ಹೊಸೂರ ಹೆಗ್ಗೇರಿ ಗ್ರಾಮಗಳಲ್ಲಿ ತಲಾ ರೂ. 14.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ ಕಾಮಗಾರಿಗಳಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು. #rahuljarkiholi #Yamakanamaradi
Read More »ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ, ಸಂಚಲನ ಮೂಡಿಸಿದ ಮತ್ತೊಂದು ಪತ್ರ
ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (dharmasthala mass burial Case) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದ್ದು, ಈ ಪ್ರಕರಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗ ಮಧ್ಯೆ ಪ್ರವೇಶ ಮಾಡಿದೆ. ಹೌದು..ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು …
Read More »ಆರ್.ಎಫ್.ಓ ಹುದ್ದೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿಗೆ ಸೂಚನೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಖಾಲಿ ಇರುವ ವಲಯ ಅರಣ್ಯಾಧಿಕಾರಿ (ಆರ್.ಎಫ್.ಓ) ಹುದ್ದೆಗಳ ಪೈಕಿ ಶೇ.50ರಷ್ಟು ಹುದ್ದೆಯನ್ನು ಬಡ್ತಿಯ ಮೂಲಕ ಹಾಗೂ ಉಳಿದ ಶೇ.50ರಷ್ಟನ್ನು ನೇರ ನೇಮಕಾತಿ ಮೂಲಕ ತುಂಬಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ …
Read More »ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ನ.15ರಂದು ದೆಹಲಿಗೆ ತೆರಳುವುದಾಗಿಯೂ ಅವರು ತಿಳಿಸಿದ್ದಾರೆ. ಅಲ್ಲಿಗೆ ಸಂಪುಟ ಪುನಾರಚನೆಯತ್ತ ಚಿತ್ತ ಹರಿಸಿರುವ ಹಲವು ಕೈ ಶಾಸಕರ ಕನಸು ಚಿಗುರೊಡೆದಿದೆ. ಇದೀಗ ಮಂತ್ರಿಗಿರಿಯ ಕನಸು ನನಸಾಗುವ ನಿರೀಕ್ಷೆಯಲ್ಲಿ ಹಲವು ಶಾಸಕರಿದ್ದಾರೆ. ಬಿಹಾರ ಫಲಿತಾಂಶದ ಬಳಿಕ ಸಂಪುಟ ಪುನಾರಚನೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕಾಂಗ್ರೆಸ್ ನಾಯಕರೇ ತಿಳಿಸಿದ್ದಾರೆ. ಹಿರಿಯರಿಗೆ ಕೊಕ್ ಬಗ್ಗೆ ಚರ್ಚೆ: ಸಂಪುಟ …
Read More »ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ
ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇದಕ್ಕೆ ಸಂಬಂಧಿಸಿದ ಮಸೂದೆ ಮಂಡಿಸುವ ನಿರೀಕ್ಷೆ ಇದೆ. ಕಾರ್ಮಿಕ ಇಲಾಖೆಯು ಈಗಾಗಲೇ ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯ ಕರಡನ್ನು ಪ್ರಕಟಿಸಿದ್ದು, 30 ದಿನಗಳೊಳಗೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳನ್ನು ಕೋರಿದೆ. ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್, …
Read More »ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂಗೆ ಪವಿತ್ರಾಗೌಡ ಅರ್ಜಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ, ರದ್ದುಗೊಂಡಿರುವ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆಗಸ್ಟ್ 14 ರಂದು ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಅಂದಿನಿಂದ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ಧಾರೆ. ಸೋಮವಾರ 17 ಮಂದಿ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಮುಕ್ತಾಯಗೊಂಡಿತ್ತು. ಈ ಮಧ್ಯೆ ಜಾಮೀನು ಅರ್ಜಿ …
Read More »
Laxmi News 24×7