Breaking News

ಶಾಲೆಯಲ್ಲಿ ಮಾರಕಾಸ್ತ್ರ ಹಿಡಿದ ಮಕ್ಕಳು : ಮುಚ್ಚಿಡುವ ಯತ್ನದಲ್ಲಿ ಶಿಕ್ಷಣ ಇಲಾಖೆ..?

ರಾಯಚೂರಿನಲ್ಲಿ 7 ಮತ್ತು 9 ನೇ ತರಗತಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಶಾಲೆಗೆ ಪೆನ್ ಬದಲು ಗನ್ ತೆಗೆದುಕೊಂಡು ಬಂದಿದ್ದಾನೆ ಶಾಲಾ ವಿದ್ಯಾರ್ಥಿ. ರಾಯಚೂರು ನಗರದ ಶ್ರೀಮಲ್ ರಿಖನ್ ಚಂದ್ ಸುಖಾಣಿ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದೆ. ಗನ್, ಚಾಕು ಹಾಗೂ ಮಾರಾಕಾಸ್ತ್ರಗಳನ್ನು ತಂದಿದ್ದಾನೆ ವಿದ್ಯಾರ್ಥಿ. 7ನೇ ತರಗತಿ ವಿದ್ಯಾರ್ಥಿ ಶಾಲೆಗೆ ಗನ್ ತೆಗೆದುಕೊಂಡು ಬಂದಿದ್ದು, ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ರಾಯಚೂರು ನಗರ ಪಶ್ಚಿಮ ಠಾಣೆ …

Read More »

ರಾಹುಲ್ ಗಾಂಧಿಯಂತೆಯೇ ಕಾಂಗ್ರೆಸ್ ಪಕ್ಷ ಕೂಡ ಗೊಂದಲದಲ್ಲಿದೆ: ಜೋಶಿ

ಅವರು ಬರುತ್ತಾರೋ ಇಲ್ಲವೋ ಎಂದು ಹೇಳಲು ನಾನು ಜ್ಯೋತಿಷಿಯಲ್ಲ. ಆದರೆ ಇದೇ ಜನರು ರಾಮನ ಅಸ್ತಿತ್ವವನ್ನು ಮತ್ತು ದೇವಾಲಯದ ಅಸ್ತಿತ್ವವನ್ನು ಸ್ವಲ್ಪ ಸಮಯದ ಹಿಂದೆ ವಿರೋಧಿಸಿದರು. ಈ ನಾಯಕರು ರಾಮಮಂದಿರ ಶಂಕುಸ್ಥಾಪನೆಯಲ್ಲಿ ಪಾಲ್ಗೊಂಡರೆ, ಅಲ್ಪಸಂಖ್ಯಾತ ಮತದಾರರು ಏನು ಯೋಚಿಸುತ್ತಾರೆ ಎಂಬ ಸಂದಿಗ್ಧತೆಗೆ ಸಿಲುಕಿದ್ದಾರೆ. ಬೆಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲು ನರೇಂದ್ರ ಮೋದಿ ಸರ್ಕಾರವು ಸಜ್ಜಾಗುತ್ತಿದೆ, ಇದೇ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ …

Read More »

ಕನ್ನಡ ಮಾಧ್ಯಮವರಿಗೆ ಶಾಲಾ ಆವರಣದಲ್ಲಿ ಪಾಠ, ಮರಾಠಿ ಮಕ್ಕಳಿಗೆ ಕೊಠಡಿಯೊಳಗೆ ವಿದ್ಯಾಭ್ಯಾಸ

ಬೆಳಗಾವಿ, ಜನವರಿ 01: ಗಡಿನಾಡು ಬೆಳಗಾವಿಯಲ್ಲಿ (Belagavi)ಕನ್ನಡ(Kannada) ಭಾಷೆ ಉಳಿವಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೋರಾಟಗಳು ನಡೆದ ಮೇಲೂ ಕೂಡ ಜಿಲ್ಲೆಯ ಕನ್ನಡ ಶಾಲೆಯ ಮಕ್ಕಳಿಗೆ ಮಲತಾಯಿ ಧೋರಣೆ ಮಾತ್ರ ನಿಂತಿಲ್ಲ. ಹೌದು ಬೆಳಗಾವಿ ತಾಲೂಕಿನ ನಂದಿಹಳ್ಳಿಯ ಗ್ರಾಮದ ಒಂದೇ ಆವರಣದಲ್ಲಿ ಕನ್ನಡ ಮತ್ತು ಮರಾಠಿ (Marathi) ಮಾಧ್ಯಮ ಶಾಲೆಗಳಿವೆ. ಈ ಎರಡು ಶಾಲೆಗಳು ಸರ್ಕಾರಿ ಶಾಲೆಯಾಗಿವೆ. ಇಲ್ಲಿ ಕನ್ನಡ ಮಾಧ್ಯಮದ ಮಕ್ಕಳಿಗೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅಲ್ಲದೇ ಮಕ್ಕಳಿಗೆ ಶಾಲಾ …

Read More »

ಬೆಳಗಾವಿ: ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ ಅರೆಸ್ಟ್

ಬೆಳಗಾವಿ, ಜ.1: ತಾಳಿ ಕಟ್ಟುವ ಸಮಯದಲ್ಲಿ ಮದುವೆ ‌ಮುರಿದು ಬಿದ್ದ ಘಟನೆಬೆಳಗಾವಿ (Belagavi)ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಳೆ ಹುಬ್ಬಳ್ಳಿ ನಿವಾಸಿ ವರ ಸಚಿನ್ ಪಾಟೀಲ್ ಎಂಬವನೊಂದಿಗೆ ಯುವತಿಯೊಬ್ಬಳ ಮದುವೆ ನಿಶ್ಚಯವಾಗಿತ್ತು. ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪ ಕೂಡ ಬುಕ್ ಮಾಡಲಾಗಿತ್ತು. 2023ರ ಡಿಸೆಂಬರ್ 30 ರಂದು ನಡೆದ ಮದುವೆ ನಿಶ್ಚಿತಾರ್ಥ …

Read More »

ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಪುಂಡರು ಅಟ್ಟಹಾಸ

ಬೆಳಗಾವಿ, ಜನವರಿ 02: ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಪುಂಡರು ಅಟ್ಟಹಾಸ ಮೆರೆದಿರುವ ಘಟನೆಬೆಳಗಾವಿ(Belagavi) ತಾಲೂಕಿನ ನಾವಗೆ ಗ್ರಾಮದಲ್ಲಿ ಸೋಮವಾರ (ಜ.01) ರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು (Police) 6 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದೂಕು, ತಲ್ವಾರ್, ರಾಡ್​​​​​​ಗಳ ಸಮೇತ ಬಂದಿದ್ದ 30ಕ್ಕೂ ಹೆಚ್ಚು ಮುಸುಕುಧಾರಿಗಳು ಗ್ರಾಮದ ನಾಲ್ಕು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಮಾಡಿದ್ದಾರೆ. ಇದರಿಂದ ಮನೆಯ ಕಿಟಕಿ ಗಾಜುಗಳು, …

Read More »

ಸಿಎಂ ಬೆನ್ನಲ್ಲೇ ಗೃಹ ಸಚಿವರಿಂದ ರಾಮ ಮಂದಿರ ಪರ ಹೇಳಿಕೆ

ಬೆಂಗಳೂರು, ಜನವರಿ 2: ಭಗವಾನ್ ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗೆ ಸಂಬಂಧಿಸಿದ್ದಲ್ಲ. ಅದು ವಿಶ್ವಕ್ಕೇ ಮಾದರಿ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದ್ದಾರೆ. ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ (Ram Mandir) ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಗೃಹ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ. …

Read More »

ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಬೆಂಗಳೂರು, ಜನವರಿ 2: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟೀಕಿಸಿದ್ದಾರೆ. ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಆಂಜನೇಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ …

Read More »

ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ದಾವಣಗೆರೆ : ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ.   ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. …

Read More »

ಸಿದ್ದರಾಮಯ್ಯನೇ ಶ್ರೀರಾಮ, ಆ ರಾಮನಿಗೇಕೆ ಪೂಜಿಸಬೇಕು? : ಹೆಚ್. ಆಂಜನೇಯ

ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಬ್ಬ ಶ್ರೀರಾಮ. ಮತ್ತೆ ಯಾಕೆ ಅಲ್ಲಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲ. ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು ಎಂದು ಕುಟುಕಿದ್ದಾರೆ. ಸ್ವತಃ ಸಿದ್ಧರಾಮಯ್ಯ ಅವರೇ ಶ್ರೀರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ಶ್ರೀರಾಮನ ದೇವಸ್ಥಾನ ಇದೆ, ಅಲ್ಲಿ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು …

Read More »

ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ

ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ರಾಮನಗರ ತಾಲೂಕಿನ ಅಣ್ಣಹಳ್ಳಿಯ ಗ್ರಾಮಸ್ಥರ ಪ್ರತಿಭಟನೆ ತಾರಕಕ್ಕೇರಿದೆ. ಇಂದು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ಕಿಡಿಕಾರಿದ್ದಾರೆ. ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ …

Read More »