ತುಮಕೂರು, ಫೆಬ್ರವರಿ 26: ಬೆಕ್ಕು ಕದ್ದು ಹಾಲು ಕುಡಿಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕೋತಿ ಗೃಹ ಸಚಿವರ ಮನೆಯಲ್ಲಿ ಕದ್ದು ಹಾಲು ಕುಡಿದಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parmeshwar) ಅವರು ಇಂದು (ಫೆ.26) ತುಮಕೂರಿನ (Tumakur) ಸಿದ್ದಾರ್ಥ ನಗರದಲ್ಲಿರುವ ಮನೆಯಲ್ಲಿ ಜನರಿಂದ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಮನಗೆ ಬಂದ ಕೋತಿ, ನೆರವಾಗಿ ಒಳಗೆ ನುಗ್ಗಿದೆ. ಬಳಿಕ ಫ್ರೀಡ್ಜ್ ಬಾಗಿಲು ತೆಗೆದು ಹಾಲಿ ಪಾಕೇಟ್ ತೆಗೆದುಕೊಂಡು, ಮೆಟ್ಟಿಲಿನ …
Read More »ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ,
ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು. ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ ಖಾನತೋಟದಲ್ಲಿ… ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು …
Read More »ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್ ಅಂಟಿಸಿದ್ದ ಯುವಕರ ವಿರುದ್ಧ FIR
ಚಿಕ್ಕಮಗಳೂರು, ಫೆ.26: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ (CT Ravi) ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ …
Read More »ಸಿಎಂ, ಡಿಸಿಎಂ ರನ್ನು ಭೇಟಿಯಾದ ಜನಾರ್ಧನ ರೆಡ್ಡಿ – ರಾಜ್ಯಸಭಾ ಚುನಾವಣೆಗೆ ಬೆಂಬಲ!
ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM D K Shivakumar) ಅವರನ್ನು ಶಾಸಕ ಜನಾರ್ಧನ ರೆಡ್ಡಿ (Gali Janardhan reddy) ಭೇಟಿಯಾಗಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha election) ಕಾಂಗ್ರೆಸ್ (Congress) ಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyan rajya pragati party) ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯೆನ್ನಲಾಗಿದೆ. ಫೆ. 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ತಮ್ಮ …
Read More »ನಾಳೆ ರಾಜ್ಯಸಭಾ ಕದನ; ಅಡ್ಡಮತದಾನ ಭೀತಿ, ಕೈಗೆ ಫಜೀತಿ!
ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಕದನ (Rajya Sabha Election) ಕುತೂಹಲ ಕೆರಳಿಸಿದೆ. “ನಂಬರ್ ಗೇಮ್” ಆರಂಭವಾಗಿರುವ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಒಟ್ಟು ನಾಲ್ಕು ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಇರುವುದರಿಂದ ಚುನಾವಣಾ ಕಣ ರೋಚಕವಾಗಿದೆ. ಈ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು (Congress MLAs) ರೆಸಾರ್ಟ್‌ಗೆ (Resort Politics) ಶಿಫ್ಟ್ ಮಾಡಲು ಪ್ಲ್ಯಾನ್ ಮಾಡಿದೆ. ಈ ಸಂಬಂಧ ಈಗಾಗಲೇ ಸೂಚನೆಯನ್ನೂ ನೀಡಿದೆ. ಆಡಳಿತ …
Read More »ಆಸ್ತಿ ಖರೀದಿ, ಬಿಕರಿ ಪೊಲೀಸರಿಗೆ ಪರ್ವಿುಟ್ ಕಡ್ಡಾಯ; ದಾಖಲಾತಿ ಜತೆ ಅರ್ಜಿ ಸಲ್ಲಿಸಲು ಸೂಚನೆ
ಕೀರ್ತಿನಾರಾಯಣ ಸಿ. ಬೆಂಗಳೂರುಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ, ಬಿ ಮತ್ತು ಸಿ ದರ್ಜೆಯ (ಐಪಿಎಸ್ ಅಧಿಕಾರಿಗಳನ್ನು ಹೊರತುಪಡಿಸಿ) ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಿರ-ಚರಾಸ್ತಿಯನ್ನು ಖರೀದಿಸಲು, ಮಾರಾಟ ಮಾಡಲು ಹಾಗೂ ಉಡುಗೊರೆ ರೂಪದಲ್ಲಿ ಪಡೆಯುವ ಮುನ್ನ ಪ್ರಾಧಿಕಾರದಿಂದ ಅನುಮತಿ ಪಡೆಯುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿರುವ ರಾಜ್ಯ ಪೊಲೀಸ್ ಇಲಾಖೆ, ಆಸ್ತಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟ ದಾಖಲಾತಿಗಳನ್ನು ಸಲ್ಲಿಸಲು ಆದೇಶಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು …
Read More »ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿದ ಚಿತ್ರದುರ್ಗದ ಗ್ರಾಮಸ್ಥ
ಚಿತ್ರದುರ್ಗ: ಅಬಕಾರಿ ಇಲಾಖೆಯಿಂದ ಬಾರ್ ಲೈಸೆನ್ಸ್ ಸಿಗೋದು ತುಂಬಾ ಕಷ್ಟ. ಅಂಥದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಕೊಡಿ ಎಂದು ಮನವಿ ಸಲ್ಲಿಸಿದ್ದಾನೆ. ಈ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಕೋಟಿ ಕೋಟಿ ರೂ. ಹಣ ಕೊಟ್ಟರೂ ಮದ್ಯ ಮಾರಾಟದ ಲೈಸೆನ್ಸ್ ಸಿಗುವುದೇ ಕಷ್ಟವಾಗಿದೆ. ಅಂಥದ್ದರಲ್ಲಿ ಇಲ್ಲಿ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪತ್ರ ಬರೆದಿರುವುದನ್ನು ನೋಡಿ ಅಬಕಾರಿ ಇಲಾಖೆ ಅಧಿಕಾರಿಗಳು ನಗಾಡಿದ್ದಾರೆ. ರಾಜ್ಯದಲ್ಲಿ …
Read More »ಸಿದ್ದರಾಮಯ್ಯ ಬಗ್ಗೆ ಅನಂತ್ಕುಮಾರ್ ಹೆಗಡೆ ವ್ಯಂಗ್ಯ; ಸಚಿವ ಎಚ್.ಕೆ. ಪಾಟೀಲ್ ತಿರುಗೇಟು!
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಪಗಾರ ಕೊಡಲು ಹಣವಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಮಾಡಿದ ಟೀಕಾಪ್ರಹಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೇ ಇದ್ದಾರೆ? ಹೇಳಿ ನೋಡೋಣ ಎಂದು ಹೇಳಿದ್ದಾರೆ. ಬಾಗಲಕೋಟೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೆ ಇದ್ದಾರೆ ಹೇಳಿ? ನಾನು ಮಂತ್ರಿ ಇದ್ದೇನೆ, ಇಲ್ಲೇ ಶಾಸಕರು ಸಹ ಇದ್ದಾರೆ. ನಮ್ಮ …
Read More »ಕಳಸಾ-ಬಂಡೂರಿ: ಪರಿಸರ ಇಲಾಖೆ ಅನುಮತಿ ನೀಡಿದರೆ ನಾಳೆಯೇ ಕಾಮಗಾರಿ ಆರಂಭ: ಸಿಎಂ
ನವಲಗುಂದ: ‘ಕಳಸಾ-ಬಂಡೂರಿ (ಮಹಾದಾಯಿ) ಯೋಜನೆಯ ಚಂಡು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಕೇಂದ್ರ ಪರಿಸರ ಇಲಾಖೆಯ ಇವತ್ತು ಅನುಮತಿ ನೀಡಿದರೆ ನಾಳೆಯೇ ಕೆಲಸ ಆರಂಭಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಗ್ಯಾರಂಟಿ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಕಳಸಾ- ಬಂಡೂರಿ ಯೋಜನಗೆ ಟೆಂಡರ್ ಆಹ್ವಾನಿಸಲಾಗಿದೆ. ಆದರೆ, ಯೋಜನೆಗೆ ಪರಿಸರ ಇಲಾಖೆ ಅನುಮೋದನೆ ನೀಡಬೇಕಿದೆ, ಆ …
Read More »ಸಂಕೇಶ್ವರ-ಮೈಸೂರು ಬಸ್ ಆರಂಭ
ಸಂಕೇಶ್ವರ: ವಾಯವ್ಯ ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕದಿಂದ ಮೈಸೂರಿಗೆ ಹೊಸ ಬಸ್ ಸಂಚಾರವನ್ನು ಗುರುವಾರ ಆರಂಭಿಸಲಾಗಿದೆ. ಈ ಬಸ್ ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರದಿಂದ ಹೊರಟು, ಮಧ್ಯಾಹ್ನ 2 ಗಂಟೆಗೆ ಸಂಕೇಶ್ವರ ಬಸ್ ನಿಲ್ದಾಣಕ್ಕೆ ಬರಲಿದೆ. ಸಂಕೇಶ್ವರದಿಂದ 2.10ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಮೈಸೂರು ತಲುಪಲಿದೆ. ರಾತ್ರಿ 8 ಗಂಟೆಗೆ ಮೈಸೂರಿನಿಂದ ಹೊರಡುವ ಬಸ್, ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರ ತಲುಪಲಿದೆ.730 ಕಿ.ಮೀ. ದೂರದ ಪ್ರಯಾಣಕ್ಕೆ ₹700 ದರ ನಿಗದಿಪಡಿಸಲಾಗಿದೆ.
Read More »
Laxmi News 24×7