Breaking News

ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು

ಆನೇಕಲ್, ಫೆ.22: ಮದ್ಯದ ಪಾರ್ಟಿಯಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ, ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಬಳಿಯ ನಾರಾಯಣಪುರದಲ್ಲಿ ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇಚಾಕು ಇರಿದಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ …

Read More »

ತಪ್ಪಿಲ್ಲದೆ ಸಂವಿಧಾನ ಪೀಠಿಕೆ ಬೋಧಿಸಿದ 4 ವರ್ಷದ ಬಾಲಕ, ಎಲ್ಲೆಡೆ ಭಾರೀ ಮೆಚ್ಚುಗೆ

ಕೊಪ್ಪಳ, ಫೆ.22: ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುತ್ತಿದೆ. ಸದ್ಯ ನಾಲ್ಕು ವರ್ಷದ ಭದ್ರೇಶ್ ಎಂಬ ಅಂಗನವಾಡಿ ಬಾಲಕ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ಭದ್ರೇಶ್, ನಿನ್ನೆ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎರಡೂವರೆ ನಿಮಿಷಗಳ ಕಾಲ ಸಂವಿಧಾನ ಪೀಠಿಕೆ ಬೋಧಿಸಿದ್ದಾನೆ. ಬಾಲಕ ತಪ್ಪುಗಳಿಲ್ಲದೆ ಸಂವಿಧಾನ ಪೀಠಿಕೆ …

Read More »

ಬೆಂಗಳೂರು: ಹಪ್ತಾ, ಫ್ರೀ ಐಟಂಗಳಿಗಾಗಿ ವೃದ್ಧನ ಮುಂದೆ ಪುಂಡಾಟ

ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್​ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನಹೈಡ್ರಾಮದವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಶಾಪ್​ನಲ್ಲಿದ್ದ ವೃದ್ಧನ ಮುಂದೆ …

Read More »

ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ …

Read More »

ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ

ಬೆಂಗಳೂರು, ಫೆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ (Kempegowda International Airport Bengaluru) 22.5 ಲಕ್ಷ ಮೌಲ್ಯದ ಚಿನ್ನ (Gold Powder) ಜಪ್ತಿ ಮಾಡಲಾಗಿದೆ. ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನಿಂದ ಚಿನ್ನ ಜಪ್ತಿ ಮಾಡಿದ್ದಾರೆ. ಹಾಗೂ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.   ಶಾರ್ಜಾದಿಂದ ಕೆಐಎಬಿಗೆ ವಿಮಾನದಲ್ಲಿ ಬಂದಿಳಿದಿದ್ದ ಆರೋಪಿ ಕಸ್ಟಮ್ ಅಧಿಕಾರಿಗಳ ಕಣ್ತಪ್ಪಿಸಲು ಡಿಸೈನ್ ಪ್ಯಾಂಟ್ …

Read More »

ಬೆಂಗಳೂರು: ಚಿರತೆಗಾಗಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು. ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ …

Read More »

ಮರಳಿ ‘ಕೈ’ ಹಿಡಿಯುತ್ತಾರಾ ಮಾಜಿ ಸಚಿವ ಡಾ. ಕೆ ಸುಧಾಕರ್:

ಬೆಂಗಳೂರು, ಫೆಬ್ರವರಿ 22: ಮಾಜಿ ಸಚಿವ ಡಾ. ಕೆ ಸುಧಾಕರ್ (K Sudhakar) ಕಾಂಗ್ರೆಸ್‌ಗೆ (Congress) ವಾಪಸಾಗುವ ಬಗ್ಗೆ ‘ಕೈ’ ಪಾಳೆಯದಲ್ಲಿ ಚರ್ಚೆ ಜೋರಾಗಿದೆ. ಈ ವಿಚಾರವಾಗಿ ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರ (Chikkaballapur) ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರಿಸಿಕೊಳ್ಳುವ ಬಗ್ಗೆ ಚಿಕ್ಕಬಳ್ಳಾಪುರ ನಾಯಕರಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ. …

Read More »

ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ

ಬೆಂಗಳೂರು, ಫೆಬ್ರವರಿ 21: ಬೆಂಗಳೂರು, (ಫೆಬ್ರವರಿ 21): ಸಿಗರೇಟ್​​ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು   (ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. …

Read More »

ಕುಮಾರಸ್ವಾಮಿಯಂತೆ ನಂಗೂ ಏಕವಚನದಲ್ಲಿ ಮಾತಾಡಲು ಬರುತ್ತೆ:ಡಿಕೆ ಸುರೇಶ್

ವಕೀಲರ ಪ್ರತಿಭಟನೆ ರಾಜಕೀಯಕ್ಕೆ ಬಳಸಿಕೊಳ್ಳುವ ಕುತಂತ್ರ ಕುಮಾರಸ್ವಾಮಿ ಮತ್ತು ಅಶೋಕ ಮಾಡಿದ್ದಾರೆ, ಕುಮಾರಸ್ವಾಮಿಯಂತೆ ತನಗೂ ಏಕವಚನದಲ್ಲಿ ಮಾತಾಡಲು ಬರುತ್ತದೆ, ಸಮಯ ಬಂದಾಗ ಹಾಗೆ ಮಾತಾಡ್ತೀನಿ ಹೋಗಿ ‘ಅವನಿಗೆ’ ಹೇಳಿ ಅಂತ ಮಾಧ್ಯಮದವರಿಗೆ ಹೇಳುತ್ತಾರೆ.

Read More »

ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ

ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನತಲವಾಯಿಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆಸ್ತಿಗಾಗಿ ತಮ್ಮನನ್ನೇ ಕೊಂದು ಹಾಕಿದ ಅಣ್ಣ ಮನೆ, …

Read More »