ಬೆಂಗಳೂರು: ಕಾಂಗ್ರೆಸ್ ಘೋಷಿತ ‘ಪಂಚ ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆ ಇದೇ ಡಿಸೆಂಬರ್ 26ರಂದು ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ನಿರುದ್ಯೋಗಿ ಪದವೀಧರರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 …
Read More »ಕೋವಿಡ್ ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದ ಸಿಎಂ
ಬೆಂಗಳೂರು: ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲ ವಿಷಯವನ್ನೂ ಸಮಿತಿ ನಿರ್ಧರಿಸಲಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೇ ಉಪಸಮಿತಿ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಆರೋಗ್ಯ, ವೈದ್ಯಕೀಯ, ಗೃಹ, …
Read More »ಪ್ರಮುಖ3 ಆರೋಪಿಗಳನ್ನ ಕಸ್ಟಡಿಗೆ ತೆಗೆದುಕೊಂಡ ಸಿಐಡಿ ತಂಡ
ಬೆಳಗಾವಿ: ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ. ಬೆಳಗಾವಿಯ ನಾಲ್ಕನೇ ಜೆಎಂಎಫ್ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ …
Read More »ಮನೆ ಹಕ್ಕುಪತ್ರ ನೀಡುವಂತೆ ಬೈಲಹೊಂಗಲದ ನಿವಾಸಿಗಳು ಎಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಬೆಳಗಾವಿ: ಮನೆಯ ಹಕ್ಕುಪತ್ರಕ್ಕಾಗಿಬೈಲಹೊಂಗಲ ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳು ಕಳೆದ 17 ದಿನಗಳಿಂದ ಬೈಲಹೊಂಗಲ ಸಹಾಯಕ ಆಯುಕ್ತಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳೆದ 50 ವರ್ಷಗಳಿಂದ ಹರಳಯ್ಯ ಕಾಲೋನಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದು, ಆದರೆ ಈವರೆಗೂ ಜಿಲ್ಲಾಡಳಿತ, ಕೊಳಗೇರಿ ಅಭಿವೃದ್ಧಿ ಮಂಡಳಿ ಹಕ್ಕು ಪತ್ರ ವಿತರಿಸದೇ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಧರಣಿಗೆ ಕುಳಿತ್ತಿದ್ದಾರೆ. ಈ ಕಾಲೋನಿಯಲ್ಲಿ ಮನೆ ಕಟ್ಟಿಕೊಂಡಿರುವ ಸುಮಾರು 66 ಕುಟುಂಬಗಳು ಮನೆಯ ಹಕ್ಕಪತ್ರಕ್ಕಾಗಿ ಅಲೆದಾಡುತ್ತಿದ್ದಾರೆ. …
Read More »ಬೆಳಗಾವಿಯಲ್ಲಿ ಶನಿವಾರ ಭಗವದ್ಗೀತೆ ಮಹಾಸಮರ್ಪಣೆ: ಶ್ರೀಮದ್ ಗಂಗಾಧರೇಂದ್ರ ಸ್ವಾಮೀಜಿ ಮಾಹಿತಿ
ಬೆಳಗಾವಿ: ಕಳೆದ ಒಂದು ತಿಂಗಳಿನಿಂದ ಬೆಳಗಾವಿ ಕೇಂದ್ರಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಶನಿವಾರ ಬೆಳಗಾವಿಯಲ್ಲಿ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾಹಿತಿ ನೀಡಿದರು. ಈ ಕುರಿತು ಬೆಳಗಾವಿಯಲ್ಲಿ ಶ್ರೀಗಳು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಗಾವಿಯ ಕಾಲೇಜು ರಸ್ತೆಯ ಲಿಂಗರಾಜ ಕಾಲೇಜು ಮೈದಾನದಲ್ಲಿ ಅಂದು ಸಂಜೆ 4 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ …
Read More »ರಕ್ತದಾನದ ಮೂಲಕ ಅತಿಥಿ ಉಪನ್ಯಾಸಕರ ವಿನೂತನ ಪ್ರತಿಭಟನೆ
ಚಿಕ್ಕೋಡಿ(ಬೆಳಗಾವಿ): ಸೇವಾ ಖಾಯಮಾತಿಗಾಗಿ ಒತ್ತಾಯಿಸಿ ಕಳೆದ 28 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಸೆಳೆಯಲು ರಕ್ತದಾನ ಮಾಡಿ ವಿನೂತನವಾಗಿ ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿನಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಆಯಾ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ 14 ಸಾವಿರ ಅತಿಥಿ …
Read More »ಅಥರ್ವ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
.ಗೋಕಾಕ : ನಗರದಲ್ಲಿರುವ ಡಾ ಬೀರನಗಡ್ಡಿ ಅವರ ಅಥರ್ವ ಆಸ್ಪತ್ರೆಯ ನೂತನ ಕಟ್ಟಡದ ವಾಸ್ತು ಶಾಂತಿ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಡಾ.ಬೀರನಗಡ್ಡಿ ಅವರ ಅಥರ್ವ ಆರ್ಥೋ ಮತ್ತು ಟ್ರಾಮಾ ಕೇರ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ಡಾ. ಮಲ್ಲಿಕಾರ್ಜುನ ಬಿರಣಗಡ್ಡಿ, ಡಾ.ಕೀರ್ತಿ ಬೀರಣಗಡ್ಡಿ, ವಕೀಲರಾದ ರಮೇಶ್ …
Read More »‘ಟೆಂಡರ್ ಹಂತದ ಕೋಟ್ಯಂತರ ಕಾಮಗಾರಿ ಪ್ರಭಾವ ಬಳಸಿ ಸ್ಥಗಿತ’: ಶೆಟ್ಟರ್ ವಿರುದ್ದ ಟೆಂಗಿನಕಾಯಿ ಆರೋಪ
ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ವಿಧಾನಸಭಾ ಮತ ಕ್ಷೇತ್ರದಲ್ಲಿ ಟೆಂಡರ್ ಹಂತದಲ್ಲಿರುವ ಕೋಟ್ಯಂತರ ರೂಪಾಯಿ ರಸ್ತೆ, ಸೇತುವೆ ಕಾಮಗಾರಿಯನ್ನು ಹಿಂದಿನ ಶಾಸಕರು ತಮ್ಮ ಪ್ರಭಾವ ಬಳಸಿ, ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದು, ಅಭಿವೃದ್ಧಿ ಕಾಮಗಾರಿಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿ.ಪ ಸದಸ್ಯ ಜಗದೀಶ್ ಶೆಟ್ಟರ್ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಆರೋಪ ಮಾಡಿದರು. 30 ಕೋಟಿ ರೂ ವೆಚ್ಚದ ಕಾಮಗಾರಿ ಸ್ಥಗಿತ: ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಹು-ಧಾ ಸೆಂಟ್ರಲ್ ವಿಧಾನಸಭಾ …
Read More »ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸ್ವರೂಪದ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊರೊನಾ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್ 19 ರ ಅಂಕಿಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1) …
Read More »ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ಎಂಎಲ್ಸಿ ಸ್ಥಾನ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಡಾ.ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ಎಲ್.ಹನುಮೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ …
Read More »