ಬೆಂಗಳೂರು:ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ನಡೆದಿರುವ ದಾಳಿಯ ಹೊಣೆಯನ್ನು ಪ್ರಧಾನಮಂತ್ರಿ, ಗೃಹ ಸಚಿವ ಮತ್ತು ಸ್ಪೀಕರ್ ಅವರು ಹೊರಬೇಕು ಮತ್ತು ಕೂಡಲೆ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸಂಸತ್ ಭವನದ ಮೇಲೆ ದಾಳಿ ನಡೆದು 22 ವರ್ಷ ತುಂಬಿದ ಸಂದರ್ಭದಲ್ಲಿಯೇ ಈ ದಾಳಿ ಆಗಿರುವುದು ಆತಂಕಕಾರಿ ಸಂಗತಿ ಎಂದರು. ಸಂಸತ್ ಪ್ರಜಾಪ್ರಭುತ್ವದ ದೇಗುಲವಿದ್ದಂತೆ. ಅಲ್ಲಿಗೆ ಭದ್ರತೆ ಕೊಡಲಾಗದವರು ಇನ್ನು …
Read More »ಕಣ್ವ ಸೌಹಾರ್ದ ಪತ್ತಿನ ಸಂಘದ ಅವ್ಯವಹಾರ;ಸಿಬಿಐ ತನಿಖೆಗೆ ನೀಡಲು ಸರ್ಕಾರದ ಚಿಂತನೆ
ಬೆಳಗಾವಿಬೆಂಗಳೂರಿನ ಕಣ್ವ ಸೌಹಾರ್ದ ಪತ್ತಿನ ಸಹಕಾರ ಸಂಘದ ವಿರುದ್ಧ ಕೇಳಿಬಂದಿರುವ ಅವ್ಯವಹಾರವನ್ನು ಸಿಬಿಐಗೆ ಒಪ್ಪಿಸುವ ಚಿಂತನೆ ಇದೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಕಣ್ವ ಸೌಹಾರ್ದ ಪತ್ತಿನ ಸಹಕಾರ ಸಂಘದಲ್ಲಿ 800 ಕೋಟಿ ರೂ.ನಷ್ಟು ಅವ್ಯವಹಾರವಾಗಿದೆ. ಇದು ಸೌಹಾರ್ದ ಕಾಯ್ದೆ ಅಡಿಯಲ್ಲಿ ಬರುತ್ತಿದ್ದು, ಸಹಕಾರ ಇಲಾಖೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಠೇವಣಿದಾರರ ಹಿತ ದೃಷ್ಟಿಯಿಂದ ಸದನ ಒಪ್ಪಿಗೆ …
Read More »ರಾಮನಗರ: ಕಾಡಾನೆ ದಾಳಿಯಿಂದ ರೈತ ಸಾವು
ರಾಮನಗರ: ಕಾಡಾನೆ ತುಳಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬುವರೇ ಮೃತ ರೈತರಾಗಿದ್ದು, ರೇಷ್ಮೆ ಕೃಷಿ ಮಾಡುತ್ತಿದ್ದರು. ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ಇಂದು ಮುಂಜಾನೆ ಎದ್ದು ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ನಂತರ ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿದೆ. ಈ ಆನೆ ದಾಳಿಗೆ …
Read More »ಮಾದಕ ದಂಧೆಕೋರರ ಮೇಲೆ ಪೊಲೀಸರ ಹದ್ದಿನ ಕಣ್ಣು
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. 2024 ಅನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನರು ಕಾಯುತ್ತಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಬಹಳ ವಿಶೇಷವಾಗಿದ್ದು, ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಹೌದು,ಹೊಸ ವರ್ಷದ ಸಂಭ್ರಮಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ …
Read More »ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಸ್ನೇಹಿತರಿಬ್ಬರ ಬಂಧನ
ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಲಿಂಗಸುಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದ ಶಿವಪುತ್ರ ಅಲಿಯಾಸ್ ಶಿವು, ಅಭಿಷೇಕ ಅಲಿಯಾಸ್ ಅಭಿ ಎಂಬುವರು ಸ್ನೇಹಿತ ಶರಣಬಸವ (21) ನನ್ನು ಕೊಲೆ ಮಾಡಿದ್ದರು. ಪ್ರಕರಣದ ಹಿನ್ನೆಲೆ : ಶರಣಬಸವ, ಅಭಿಷೇಕ, ಶಿವಪುತ್ರ ಈ ಮೂವರು ಸ್ನೇಹಿತರಾಗಿದ್ದರು. ಇವರು ಆಗಾಗ ಜೂಜಾಟ ಆಡುತ್ತಿದ್ದರು. ಹಣ ಕಳೆದುಕೊಂಡಾಗ ಮತ್ತು ಗೆದ್ದಾಗ ಪರಸ್ಪರ ಜಗಳವಾಡುತ್ತಿದ್ದರು. ಮೊಹರಂ ಹಾಗೂ …
Read More »ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ
ಬೆಳಗಾವಿ: ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ …
Read More »ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ವ್ಯಕ್ತಿಯ ವಿರುದ್ಧ ದೂರು ದಾಖಲು
ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗಿರಿನಗರ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ದೇವರಾಜೇ ಅರಸ್ ನೀಡಿದ ದೂರಿನ ಅನ್ವಯ ಜಗದೀಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ: ಡಿಸೆಂಬರ್ 14ರಂದು ಬೆಳಗ್ಗಿನ ಜಾವ ಆರೋಪಿ ಜಗದೀಶ್, ತನಗೆ ಪರಿಚಿತ ಮಹಿಳೆಯೊಬ್ಬರು ಹಾಗೂ ಅರುಣ್ ಕುಮಾರ್ ಎಂಬಾತನ ಮಧ್ಯೆ ಹಣದ …
Read More »ಹೊಸ ವಂಟಮುರಿ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ. ಪರಿಶಿಷ್ಟ …
Read More »ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ : ನಗರದಲ್ಲಿ ನೂತನವಾಗಿ ಆರಂಭಗೊಂಡ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು. ಈ ಸಚಿವರಾದ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಶಾಸಕರ ಆಪ್ತ ಸಹಾಯಕರಾದ ನಿಂಗಪ್ಪಾ ಕುರಭೇಟ, ಮುಖಂಡರಾದ ವಿವೇಕ ಜತ್ತಿ, ಮುರಳಿ ಬಡಿಗೇರ, ಹೆಸ್ಕಾಂ ಅಧಿಕಾರಿಗಳಾದ …
Read More »ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್
ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. …
Read More »