Breaking News

ಯತ್ನಾಳ್‌ ಹುಚ್ಚು ನಾಯಿಯಿದ್ದಂತೆ: ರೇಣುಕಾಚಾರ್ಯ

ದಾವಣಗೆರೆ: ಯತ್ನಾಳ್‌ (Basanagouda Patil Yatnal) ಹುಚ್ಚು ನಾಯಿಯಿದ್ದಂತೆ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (Renukacharya) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತದೆ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದ ಅವರು, ಸರ್ವಜ್ಞರ ವಚನ ಹೇಳುವ ಮೂಲಕ …

Read More »

ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪ ಚೇತನ್ ವಿರುದ್ಧ ದೂರು ದಾಖಲ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇರೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಕೀಲ ಆರ್​ಎಲ್​ಎನ್ ಮೂರ್ತಿ ಎಂಬುವವರು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೇತನ್ ಪೋಸ್ಟ್​​ನಲ್ಲೇನಿದೆ? ”ಇಬ್ಬರು ಯೋಧರ ಕಥೆ: ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ …

Read More »

ಲೋಕಸಭೆ ಚುನಾವಣೆ: ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್?

ಹುಬ್ಬಳ್ಳಿ: “ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಜಗದೀಶ್ ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಿದ್ದೀವಿ. ಅವರೂ ಆಕಾಂಕ್ಷಿ ಅಂತ ಅಂದುಕೊಂಡಿದ್ದೀವಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೆಟ್ಟರ್ ನಿವಾಸದಲ್ಲಿಂದು ಮಾತನಾಡಿದ ಅವರು, “ನಮ್ಮ ಶಾಸಕರು, ಕಾರ್ಯಕರ್ತರು ಹಾಗೂ ಈ ಹಿಂದೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಯಾರಿಗೆ ಟಿಕೆಟ್​ ಕೊಡಬೇಕು ಎಂದು ಹೇಳ್ತಾರೋ ಅವರಿಗೆ ಟಿಕೆಟ್ ಕೊಡುತ್ತೇವೆ” ಎಂದರು. ಮುಂದುವರಿದು ಮಾತನಾಡಿದ ಸಿಎಂ, “ಪ್ರತಿ ಜಿಲ್ಲೆಯಲ್ಲೂ ಕೂಡ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದೇವೆ. ಅವರು …

Read More »

ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ.: ಜೋಶಿ

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಕ್ಷೇತ್ರ ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು. ವಸಂತ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಯಾರೇ ಅಭ್ಯರ್ಥಿಯಾದರೂ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್​​ನಿಂದ ಸ್ಪರ್ಧಿಸಿದರೂ ಸಂತೋಷ. ಅವರ ಸ್ಪರ್ಧೆಯಿಂದ ನನಗೇನೂ ಭಯವಿಲ್ಲ. ಅದು ಅವರ ಪಾರ್ಟಿಯ …

Read More »

ಸದ್ದಿಲ್ಲದೆ ನಡೆಯುತ್ತಿದೆ ‌ಬಾಲ್ಯ ವಿವಾಹ; 2023 ರಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಬಾಗಲಕೋಟೆ, ಡಿ.16: ಜಿಲ್ಲೆಯು ಒಂದು ಕಾಲದಲ್ಲಿ ಹೆಚ್​​ಐವಿ(HIV)ಯಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಕಾಲ ಕ್ರಮೇಣ ಆ ನಂಬರ್​ನಿಂದ ಮುಕ್ತವಾಗಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸದ್ದಿಲ್ಲದೆ ‌ಬಾಲ್ಯ ವಿವಾಹ (Child marriage) ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ.ಬಡ ಮಧ್ಯಮವರ್ಗ, ಹಿಂದುಳಿ ವರ್ಗ ಹಾಗೂ ಎಸ್ ಸಿ ಸಮುದಾಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕಂಡು ಬರುತ್ತಿವೆ. ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಇದನ್ನು ತಡೆಯುವುದಕ್ಕೆ‌ ಜಾಗೃತಿ ಜೊತೆಗೆ ಕಠಿಣ ಕಾನೂನು …

Read More »

ಸಂಸತ್ ದಾಳಿ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಲು ಕಾಂಗ್ರೆಸ್ ಆಗ್ರಹ

ಬೆಂಗಳೂರು:ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ನಡೆದಿರುವ ದಾಳಿಯ ಹೊಣೆಯನ್ನು ಪ್ರಧಾನಮಂತ್ರಿ, ಗೃಹ ಸಚಿವ ಮತ್ತು ಸ್ಪೀಕರ್ ಅವರು ಹೊರಬೇಕು ಮತ್ತು ಕೂಡಲೆ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸಂಸತ್ ಭವನದ ಮೇಲೆ ದಾಳಿ ನಡೆದು 22 ವರ್ಷ ತುಂಬಿದ ಸಂದರ್ಭದಲ್ಲಿಯೇ ಈ ದಾಳಿ ಆಗಿರುವುದು ಆತಂಕಕಾರಿ ಸಂಗತಿ ಎಂದರು. ಸಂಸತ್ ಪ್ರಜಾಪ್ರಭುತ್ವದ ದೇಗುಲವಿದ್ದಂತೆ. ಅಲ್ಲಿಗೆ ಭದ್ರತೆ ಕೊಡಲಾಗದವರು ಇನ್ನು …

Read More »

ಕಣ್ವ ಸೌಹಾರ್ದ ಪತ್ತಿನ ಸಂಘದ ಅವ್ಯವಹಾರ;ಸಿಬಿಐ ತನಿಖೆಗೆ ನೀಡಲು ಸರ್ಕಾರದ ಚಿಂತನೆ

ಬೆಳಗಾವಿಬೆಂಗಳೂರಿನ ಕಣ್ವ ಸೌಹಾರ್ದ ಪತ್ತಿನ ಸಹಕಾರ ಸಂಘದ ವಿರುದ್ಧ ಕೇಳಿಬಂದಿರುವ ಅವ್ಯವಹಾರವನ್ನು ಸಿಬಿಐಗೆ ಒಪ್ಪಿಸುವ ಚಿಂತನೆ ಇದೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಕಣ್ವ ಸೌಹಾರ್ದ ಪತ್ತಿನ ಸಹಕಾರ ಸಂಘದಲ್ಲಿ 800 ಕೋಟಿ ರೂ.ನಷ್ಟು ಅವ್ಯವಹಾರವಾಗಿದೆ. ಇದು ಸೌಹಾರ್ದ ಕಾಯ್ದೆ ಅಡಿಯಲ್ಲಿ ಬರುತ್ತಿದ್ದು, ಸಹಕಾರ ಇಲಾಖೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಠೇವಣಿದಾರರ ಹಿತ ದೃಷ್ಟಿಯಿಂದ ಸದನ ಒಪ್ಪಿಗೆ …

Read More »

ರಾಮನಗರ: ಕಾಡಾನೆ ದಾಳಿಯಿಂದ ರೈತ ಸಾವು

ರಾಮನಗರ: ಕಾಡಾನೆ ತುಳಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬುವರೇ ಮೃತ ರೈತರಾಗಿದ್ದು, ರೇಷ್ಮೆ ಕೃಷಿ ಮಾಡುತ್ತಿದ್ದರು. ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ಇಂದು ಮುಂಜಾನೆ ಎದ್ದು ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ನಂತರ ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿದೆ. ಈ ಆನೆ ದಾಳಿಗೆ …

Read More »

ಮಾದಕ ದಂಧೆಕೋರರ ಮೇಲೆ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. 2024 ಅನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನರು ಕಾಯುತ್ತಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಬಹಳ ವಿಶೇಷವಾಗಿದ್ದು, ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಹೌದು,ಹೊಸ ವರ್ಷದ ಸಂಭ್ರಮಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಸ್ನೇಹಿತರಿಬ್ಬರ ಬಂಧನ

ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಲಿಂಗಸುಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದ ಶಿವಪುತ್ರ ಅಲಿಯಾಸ್ ಶಿವು, ಅಭಿಷೇಕ ಅಲಿಯಾಸ್ ಅಭಿ ಎಂಬುವರು ಸ್ನೇಹಿತ ಶರಣಬಸವ (21) ನನ್ನು ಕೊಲೆ ಮಾಡಿದ್ದರು.   ಪ್ರಕರಣದ ಹಿನ್ನೆಲೆ : ಶರಣಬಸವ, ಅಭಿಷೇಕ, ಶಿವಪುತ್ರ ಈ ಮೂವರು ಸ್ನೇಹಿತರಾಗಿದ್ದರು. ಇವರು ಆಗಾಗ ಜೂಜಾಟ ಆಡುತ್ತಿದ್ದರು. ಹಣ ಕಳೆದುಕೊಂಡಾಗ ಮತ್ತು ಗೆದ್ದಾಗ ಪರಸ್ಪರ ಜಗಳವಾಡುತ್ತಿದ್ದರು. ಮೊಹರಂ ಹಾಗೂ …

Read More »