Breaking News

ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

ಬೆಳಗಾವಿ: ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ …

Read More »

ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ವ್ಯಕ್ತಿಯ ವಿರುದ್ಧ ದೂರು ದಾಖಲು

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗಿರಿನಗರ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ದೇವರಾಜೇ ಅರಸ್​ ನೀಡಿದ ದೂರಿನ ಅನ್ವಯ ಜಗದೀಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ: ಡಿಸೆಂಬರ್ 14ರಂದು ಬೆಳಗ್ಗಿನ ಜಾವ ಆರೋಪಿ ಜಗದೀಶ್, ತನಗೆ ಪರಿಚಿತ ಮಹಿಳೆಯೊಬ್ಬರು ಹಾಗೂ ಅರುಣ್ ಕುಮಾರ್ ಎಂಬಾತನ ಮಧ್ಯೆ ಹಣದ …

Read More »

ಹೊಸ ವಂಟಮುರಿ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು‌ ಮಾಡಿ ಆದೇಶಿಸಲಾಗಿರುತ್ತದೆ. ಪರಿಶಿಷ್ಟ …

Read More »

ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ : ನಗರದಲ್ಲಿ ನೂತನವಾಗಿ ಆರಂಭಗೊಂಡ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು. ಈ ಸಚಿವರಾದ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಶಾಸಕರ ಆಪ್ತ ಸಹಾಯಕರಾದ ನಿಂಗಪ್ಪಾ ಕುರಭೇಟ, ಮುಖಂಡರಾದ ವಿವೇಕ ಜತ್ತಿ, ಮುರಳಿ ಬಡಿಗೇರ, ಹೆಸ್ಕಾಂ ಅಧಿಕಾರಿಗಳಾದ …

Read More »

ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.   ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. …

Read More »

ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ ಬೆಂಗಳೂರಲ್ಲೂ ನಡೆಯಲಿ: ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲೂ ನಾವು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.   ವಿಧಾನ ಪರಿಷತ್‌ನಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಷಯಗಳ ಮೇಲೆ ನಡೆದ ಚರ್ಚೆಯ ವೇಳೆ ಅವರು ಮಾತನಾಡಿ, ಪ್ರತಿ ವರ್ಷ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವೇಳೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯ ವಿಷಯ ಚರ್ಚೆಯಾಗಬೇಕು ಎನ್ನುವ ಮಾನಸಿಕ ಸ್ಥಿತಿಯಿಂದ …

Read More »

ಸಂತ್ರಸ್ತೆಯನ್ನು ಭೇಟಿಯಾದ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆಗೈದ ಪ್ರಕರಣದ ಸಂತ್ರಸ್ತೆಯನ್ನು ಭೇಟಿ ಮಾಡಿರುವ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ, ಮಹಿಳೆಯ ಆರೋಗ್ಯವನ್ನು ವಿಚಾರಿಸಿದೆ.   ಸಂಸದರಾದ ಅಪ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನೊಳಗೊಂಡ ಐದು ಜನರ ಸಮಿತಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು. ಘಟನೆಯಿಂದ ಧೃತಿಗೆಡಬೇಡಿ …

Read More »

ಇಂದಿನಿಂದ ʻKPSCʼ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಡಿಸೆಂಬರ್ 16 ರ ಇಂದು 17 ರ ನಾಳೆ ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.   ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷೆಗಳು …

Read More »

ಶಬರಿಮಲೆಯಲ್ಲಿ ಭಾರೀ ಜನದಟ್ಟಣೆ: ಅವ್ಯವಸ್ಥೆ ವಿರುದ್ಧ ಸಿಡಿದ ಭಕ್ತರಿಂದ ಪ್ರತಿಭಟನೆ

ತಿರುವನಂತಪುರಂ (ಕೇರಳ) : ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಶಬರಿಮಲೆಗೆ ಭಕ್ತರು ಧಾವಿಸಿದ್ದು, ಅದನ್ನು ನಿಯಂತ್ರಿಸಲು ಕೇರಳ ಸರ್ಕಾರ ವಿಫಲವಾಗಿದೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟರೆ, ಇನ್ನೊಂದು ಅವಘಡದಲ್ಲಿ ಯಾತ್ರಿಕನೊಬ್ಬ ಅಸುನೀಗಿದ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಭಾರೀ ಜನದಟ್ಟಣೆಯಿಂದ ಬೇಸತ್ತ ಭಕ್ತರು ಪ್ರತಿಭಟನೆ ಕೂಡ ನಡೆಸಿದರು. ಈ ಮಧ್ಯೆ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಸರ್ಕಾರ ತಿಳಿಸಿದೆ.     ಸರದಿಯಲ್ಲಿ ನಿಂತಿದ್ದ …

Read More »

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಸಿಎಂ

ಬೆಂಗಳೂರು/ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, “ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲೂ ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ …

Read More »