Breaking News

ಯತ್ನಾಳ್, ವಿ ಸೋಮಣ್ಣ ಅವರ ಪಾಪದ ಕೊಡ ತುಂಬಿದೆ: ರೇಣುಕಾಚಾರ್ಯ

ದಾವಣಗೆರೆ, ಡಿಸೆಂಬರ್​​ 14: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅವರು ನಾಶ ಆಗುತ್ತಾರೆ. ಇದೇ ಕಾರಣಕ್ಕೆ ಇಬ್ಬರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ(MP Renukacharya)ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾತನಾಡಿದ ಅವರು, ಇವರಿಬ್ಬರಿಗೂ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ದ ಮಾತನಾಡುವುದು ಬಿಟ್ಟು ಬೇರೆ ಕೆಲಸವಿಲ್ಲ ಎಂದು …

Read More »

ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ

ಬೆಳಗಾವಿ, ಡಿಸೆಂಬರ್ 15: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ (Belagavi Session) ಚಳಿಗಾಲದ ಅಧಿವೇಶನ (Winter Session) ಇಂದು ಕೊನೆಗೊಳ್ಳಲಿದೆ. ಅಧಿವೇಶನದಲ್ಲಿ ಅನೇಕ ವಿಚಾರಗಳು ಪ್ರಸ್ತಾಪವಾದರೆ, ಮತ್ತೆ ಕೆಲವು ವಿಷಯಗಳು ಕುರಿತ ಚರ್ಚೆಯೇ ಆಗಿಲ್ಲ. ಅಧಿವೇಶನ ಡಿಸೆಂಬರ್ 4 ರಿಂದ ಆರಂಭವಾಗಿದ್ದು ಈವರೆಗೆ ಉಪಯುಕ್ತ ಚರ್ಚೆಗಿಂತ ಗದ್ದಲ ಕೋಲಾಹಲದಲ್ಲೇ ಸದನ ಮುಳುಗಿಹೋಗಿದೆ. ಚರ್ಚೆಯಾಗಬೇಕಾದ ಸಾಕಷ್ಟು ವಿಚಾರಗಳು ಹಾಗೇ ಉಳಿದುಕೊಂಡಿವೆ. ಏನೆಲ್ಲ ಚರ್ಚೆಯಾಗಿಲ್ಲ? ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಸ್ ವಿಚಾರದಲ್ಲಿ ಪ್ರತಿಪಕ್ಷಗಳು ಅಷ್ಟೇನು ಗಂಭೀರ ಚರ್ಚೆ …

Read More »

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಬೆಳಗಾವಿ: ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ ನಲ್ಲಿ ಪ್ರತಿಭಟನೆ ನಡೆಸಿದರು. ಹಾಸ್ಟೆಲ್ ಹೊರ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ‌ ಭಾಗಿಯಾಗಿದ್ದ ನೂರಕ್ಕೂ ಅಧಿಕ ಹೊರ ಗುತ್ತಿಗೆ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ನಮಗೆ ಕನಿಷ್ಠ ವೇತನ ಸಿಗುತ್ತಿಲ್ಲ‌. ಪಿ ಎಫ್ ಕಟ್ಟುತ್ತಿಲ್ಲ, ಸಾಕಷ್ಟು ಮ್ಯಾನ್​​ ಪವರ್ …

Read More »

ತಮ್ಮ ಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬೇಸರ

ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್‌. ಪಾಟೀಲ್‌ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …

Read More »

ಬಾಕಿ ಬಿಲ್ ಕೊಡಿ ಇಲ್ಲ ವಿಷ ಕೊಡಿ:

ಬೆಳಗಾವಿ : ಪೂರ್ಣಗೊಂಡ ಕಾಮಗಾರಿಗಳ ಬಾಕಿ ಬಿಲ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಗುತ್ತಿಗೆದಾರರು‌ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸರ್ಕಾರಿ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಬಾಕಿ ಬಿಲ್ ಕೊಡಿ ಇಲ್ಲವೇ ವಿಷ ಕೊಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

Read More »

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡುವ ನಿರ್ಣಯ ಅಂಗೀಕಾರ

ಬೆಳಗಾವಿ : ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್​ಪೋರ್ಟ್​ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು. ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು.   ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …

Read More »

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ

ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …

Read More »

ರೈತರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು: ಶ್ರೀಮಂತ ಪಾಟೀಲ್

ಚಿಕ್ಕೋಡಿ: ವಿಧಾನಸಭೆ ಸದನದಲ್ಲಿ ಕಬ್ಬು ಬೆಳೆಗಾರರ ಕುರಿತು ಒಳ್ಳೆಯ ಚರ್ಚೆಗಳು ನಡೆಯುತ್ತಿವೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರ್ಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ರೈತರ ಪರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ನುಡಿದಂತೆ ನಡೆದು ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, …

Read More »

ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಅವರ ಮಾತು ಕೇಳಿ ಬಿದ್ದು ಬಿದ್ದ ನಕ್ಕ ಸಂತೋಷ ಲಾಡ್

ಬೆಳಗಾವಿ : ವಿವಿಧ ಸಂಘ ಸಂಸ್ಥೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 9 ದಿನಗಳಿಂದ ಬೆಳಗಾವಿಯ ಸುವರ್ಣ ಗಾರ್ಡನ್​ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿವೆ. ಇಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಕಾರ್ಮಿಕ ಮಂಡಳಿಯ ಅಡಿ ಮಧ್ಯಪಾನ ಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು. ವಾರ್ಷಿಕ ಆದಾಯದಲ್ಲಿ ಶೇ.10ರಷ್ಟು ಕಲ್ಯಾಣ ನಿಧಿಗೆ ವರ್ಗಾಯಿಸಬೇಕು. ಮಧ್ಯಪಾನ …

Read More »

ಅರಣ್ಯಭೂಮಿ ಗಡಿ ಗುರುತಿಸಲು ಕಂದಾಯ ಅರಣ್ಯ ಇಲಾಖೆ ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ(ಬೆಂಗಳೂರು) :ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮೀಕ್ಷೆಯನ್ನು ಕಾಲಮಿತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಇರುವ …

Read More »