Breaking News

”ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಗೊಳಿಸಲು ಸರ್ಕಾರ ಸೂಚನೆ ನೀಡಿದೆ”

ಬೆಳಗಾವಿ: ”ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ಕಾರ್ಖಾನೆಗಳ ಮಾಲೀಕರಿಗೆ 15 ದಿನಗಳ ಗಡುವು ನೀಡಲಾಗಿದೆ” ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು. ಸುವರ್ಣಸೌಧಲ್ಲಿ ಮಂಗಳವಾರ ಸಚಿವ ಶಿವಾನಂದ ಪಾಟೀಲ್, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ಕಾನೂನು …

Read More »

34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ :ಎಂ.ಬಿ.ಪಾಟೀಲ

ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.   ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ …

Read More »

ಬೆಳಗಾವಿ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲಿಸಲಾಗುವುದು ಎಂದ ಸಿಎಂ

ಬೆಳಗಾವಿ : ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸಬೇಕು ಎನ್ನುವುದೂ ಸೇರಿ ಬಿ.ಎಲ್.ಶಂಕರ್ ಅವರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಸಿಎಂ, ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ …

Read More »

ಬರ, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚಿಸಬೇಕು, ಧರಣಿ ಕೈಬಿಡಿ: ಪ್ರತಿಪಕ್ಷಗಳಿಗೆ ಪರಮೇಶ್ವರ್ ಮನವಿ

ಬೆಂಗಳೂರು / ಬೆಳಗಾವಿ:ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ನಿನ್ನೆಯಿಂದ ನಡೆಸುತ್ತಿದ್ದ ಧರಣಿ ಹಿಂಪಡೆದರು.   ವಿಧಾನಸಭೆಯ ಕಲಾಪದ ಆರಂಭದಲ್ಲೇ ಪ್ರತಿಪಕ್ಷಗಳ ಶಾಸಕರು ಧರಣಿಯನ್ನು ಮುಂದುವರೆಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಿ, ಇಡೀ ದೇಶವೇ ನಮ್ಮನ್ನು ನೋಡುತ್ತಿದೆ. ಇಲ್ಲಿ ಗಂಭೀರ ಚರ್ಚೆಗಳು ನಡೆಯಬೇಕು. ನಿನ್ನೆಯಿಂದಲೂ ಧರಣಿ ನಡೆಸುತ್ತಿದ್ದೀರಿ. ಇದರಿಂದಾಗಿ ಪ್ರಶ್ನೋತ್ತರ ಕಲಾಪ, ಶೂನ್ಯವೇಳೆ ಗಮನ ಸೆಳೆಯುವ …

Read More »

ರೈತರು ದೇವರ ಸಮಾನ,ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ : ಲಕ್ಷ್ಮಣ ಸವದಿ

    ಬೆಳಗಾವಿ : ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ ಅಂತ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಲಿಸಿಸ್‌ ಬರುತ್ತೆ. ರೈತರ ಹಣ ತಿಂದ ಮಾಲಿಕರು ಉದ್ದಾರ ಆಗಲ್ಲ. ಅನ್ನದಾತರಿಗೆ ಮೋಸ ಮಾಡಬೇಡಿ ಎಂದಿದ್ದಾರೆ. ನಿಯಮ 69 ರ ಅಡಿಯಲ್ಲಿ …

Read More »

ಬೆಂಗಳೂರಲ್ಲಿ ಹುಕ್ಕಾ ಬಾರ್‌ ಹಾವಳಿ : ಕ್ರಮಕ್ಕೆ ಬಿಜೆಪಿಗರ ಆಗ್ರಹ

    ಬೆಳಗಾವಿ : ಬೆಂಗಳೂರಿನಲ್ಲಿ ತಲೆಯೆತ್ತುತ್ತಿರುವ ಹುಕ್ಕಾಬಾರ್‌ (Hukka bar) ಗಳ ಬಗ್ಗೆ ಮಂಗಳವಾರ ವಿಧಾನಸಭೆಯಲ್ಲಿ (Belagavi winter session) ಚರ್ಚೆಯಾಯಿತು. ಬಿಜೆಪಿ (BJP) ಶಾಸಕರಾದ ಸಿ.ಕೆ.ರಾಮಮೂರ್ತಿ (C K Ramamurthy) ಮತ್ತು ಎಸ್‌. ಸುರೇಶ್‌ ಕುಮಾರ್‌ (S Sureshkumar) ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗೃಹಸಚಿವ ಪರಮೇಶ್ವರ್‌ (G Parameshwar) ಅವರನ್ನು ಆಗ್ರಹಿಸಿದರು.   ಈ ಕುರಿತು ಮಾತನಾಡಿದ ಸಿ.ಕೆ. ರಾಮಮೂರ್ತಿ ದೆಹಲಿ ಹೊರತುಪಡಿಸಿದರೆ …

Read More »

ಅಧಿವೇಶನದಲ್ಲಿ ಸ್ವಪಕ್ಷವನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಶಾಸಕ ಯತ್ನಾಳ್

    ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯ್ಕರ ಆಯ್ಕೆ ವಿಚಾರ ಆರಂಭವಾದಾಗಿನಿಂದ ಈ ವರೆಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagowda patil yatnal)ಸ್ವಪಕ್ಷದವರನ್ನು ಟೀಕಿಸುವ ಒಂದು ಅವಕಾಶವನ್ನೂ ಬಿಡುತ್ತಿಲ್ಲ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲೂ ಉತ್ತರ ಕರ್ನಾಟಕದ ವಿಚಾರ ಇಟ್ಟುಕೊಂಡು ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ. ಕುಮಾರಸ್ವಾಮಿ ಸರ್ಕಾರ ಇದ್ದಾಗ 105 ಕೋಟಿ ರೂಪಾಯಿ ನೀಡಿದ್ದರು ಆದರೆ ಆ ಅನುದಾನವನ್ನು ಬಿಜೆಪಿ …

Read More »

ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನದ ಬೇಡಿಕೆಗೆ ಆಗ್ರಹಿಸಿದರು.:ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ

ಬೆಳಗಾವಿ : ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ …

Read More »

ಕಬ್ಬು ಬೆಳೆಗಾರರಿಗೆ ಅವಮಾನ ನಿಮ್ಮನ್ನು ಕಬ್ಬಿನಿಂದ ಹೊಡೆದು ಹಾಕುತ್ತಾರೆ: ಸವದಿ

ಬೆಳಗಾವಿ/ಬೆಂಗಳೂರು: ಶಿವಮೊಗ್ಗದವರು ಉತ್ತರ ಕರ್ನಾಟಕದ ವಿರೋಧಿಗಳು, ಬೆಳಗಾವಿಯ ಕಬ್ಬು ಬೆಳೆಗಾರರಿಗೆ ನೀವು ಅವಮಾನ ಮಾಡಿತ್ತಿದ್ದೀರಿ. ನೀವು ಹೊರಗೆ ಹೋದರೆ ನಿಮ್ಮನ್ನು ಕಬ್ಬಿನಿಂದಲೇ ಹೊಡೆದು ಹಾಕುತ್ತಾರೆ ಎಂದು ಬೆಳಗಾವಿ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್​​​ ಶಾಸಕ ಲಕ್ಷ್ಮಣ್‌ ಸವದಿ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಅಧಿವೇಶನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ಆರಂಭಿಸಿದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಬಿಜೆಪಿ ಶಾಸಕರ ಪೈಕಿ ಶಿವಮೊಗ್ಗ ನಗರ ಕ್ಷೇತ್ರದ …

Read More »

ವಂಟಮೂರಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಗೆ ಧೈರ್ಯ ತುಂಬಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಭೇಟಿ ಆರೋಗ್ಯ ವಿಚಾರಿಸಿದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದರು. ಸಂತ್ರಸ್ತ ಮಹಿಳೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಎದುರು ನಡೆದ ಘಟನೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಸಂತ್ರಸ್ತ ಮಹಿಳೆ ಕುಟುಂಬಸ್ಥರು ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ಕ್ರಮ …

Read More »