ಮುಧೋಳ: ನಗರದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಡೆದ ಪ್ರತಿಭಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸೆ.24ರ ಮಂಗಳವಾರ ಪ್ರತಿಭಟನೆ ನಡೆಸಿ ಡಿವೈಎಸ್ಪಿ ಶಾಂತವೀರ ಅವರಿಗೆ ಮನವಿ ಸಲ್ಲಿಸಿದರು. ಜಡಗಣ್ಣ ಬಾಲಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಶಿವಾಜಿ ವೃತ್ತಕ್ಕೆ ಬಂದು ಸಭೆಯಾಗಿ ಮಾರ್ಪಟ್ಟಿತು. ಈ ವೇಳೆ ಮಾತನಾಡಿದ ಹಿಂದೂ ಸಂಘಟನೆ ಮುಖಂಡ ಹನಮಂತ ಮಳಲಿ, …
Read More »ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್ ವಶ, ಇಬ್ಬರ ಬಂಧನ
ಹುಣಸೂರು: ಅಕ್ರಮವಾಗಿ ಒಂದೇ ಕಂಟೈನರ್ನಲ್ಲಿ 42 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಿಳಿಕೆರೆ ಠಾಣಾ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಸೆ.24ರ ಮಂಗಳವಾರ ನಡೆದಿದೆ. ಹುಣಸೂರು ತಾಲೂಕಿನ ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ಬಂಧಿಸಿ, ವಾಹನ ವಶಕ್ಕೆ ಪಡೆಯಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯಿಂದ ಕೆ.ಆರ್.ನಗರ, ಗೊಮ್ಮಟಗಿರಿ ಮಾರ್ಗವಾಗಿ ಮೈಸೂರು ಕಡೆಗೆ ಕಂಟೈನರ್ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಗ್ಗೆ ಬೆನ್ನಟ್ಟಿ ಮನುಗನಹಳ್ಳಿ ಬಳಿಯಲ್ಲಿ …
Read More »ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ
ರಬಕವಿ-ಬನಹಟ್ಟಿ: ಶ್ರೀ ಕಾಡಸಿದ್ಧೇಶ್ವರ ರಥೋತ್ಸವಕ್ಕೆ ಅದ್ಧೂರಿ ಮಂಗಳವಾರ ರಾತ್ರಿ 8.00ಕ್ಕೆ ಚಾಲನೆ ದೊರೆಯಿತು. ಅದಕ್ಕೂ ಮುಂಚೆ ವಿದ್ಯುತ್ದೀಪ ಹಾಗೂ ಅಪಾರ ಪ್ರಮಾಣದ ಹೂವುಗಳಿಂದ ಅಲಂಕೃತವಾದ ರಥಕ್ಕೆ (ತೇರಿಗೆ) ನಗರದ ಸಮಸ್ತ ಹಿರಿಯರು ಸಂಜೆ 6 ಗಂಟೆಗೆ ಪೂಜೆ ಸಲ್ಲಿಸಿ ಕಾಯಿ ಒಡೆಯುವುದರ ಮೂಲಕ ಜಾತ್ರೆಗೆ ಚಾಲನೆ ನೀಡಿದರು. ಶ್ರೀ ಕಾಡಸಿದ್ಧೇಶ್ವರ ಮಹಾರಾಜ ಕಿ ಜೈ’ ಎಂಬ ಜಯಘೋಷಗಳ ಮಧ್ಯೆ ಜಾತ್ರೆಯ ಪ್ರಥಮ ದಿನ ಬಾನಂಗಳದಲ್ಲಿ ಹಾರಾಡಿದ ಪಟಾಕಿಗಳ ಸಂಭ್ರಮ, ಸಡಗರದ ನಡುವೆ …
Read More »ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್ ರಬಕವಿ-ಬನಹಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳಷ್ಟು ನುರಿತ, ಅನುಭವಿ ರಾಜಕಾರಣಿಯಾಗಿದ್ದು, ಹಿಂದಿನ ಪರಂಪರೆ ಅವಲೋಕಿಸಿದಾಗ ಇಂತಹ ತೀರ್ಮಾನ ಬಂದ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಅವಕಾಶ ನೀಡಬೇಕು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್ ಹೇಳಿದರು. ಮಂಗಳವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂದು ಹೇಳಿದ್ದು ಸರಿಯಲ್ಲ. ಅವರ ಆಡಳಿತದಲ್ಲಿ ಹಲವು …
Read More »MUDA: ಸಿದ್ದರಾಮಯ್ಯ ಬೆನ್ನಿಗೆ ನಿಂತ ರಾಜ್ಯ ಕಾಂಗ್ರೆಸ್ ಪಡೆ, ವರದಿ ಕೇಳಿದ ಹೈಕಮಾಂಡ್!
ಬೆಂಗಳೂರು: ಹೈಕೋರ್ಟ್ ತೀರ್ಪು ಹೊರಬಿದ್ದದ್ದೇ ತಡ. ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಮಾತ್ರ ಸಿಎಂ ಬೆನ್ನಿಗೆ ಇದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಕೇಳುವ ನೈತಿಕತೆಯೂ ಪ್ರತಿಪಕ್ಷಗಳಿ ಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಸಿಎಂ ನಿವಾಸದತ್ತ ದೌಡಾಯಿಸಿದ ಶಾಸಕ, ಸಚಿವರು ಸಿದ್ದರಾಮಯ್ಯ ಪರವಾಗಿ ತಾವೆಲ್ಲ ಇದ್ದೇವೆ ಎಂಬ ಸಂದೇಶ ನೀಡುವ ಪ್ರಯತ್ನ …
Read More »ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ
ಬೆಂಗಳೂರು: ಮುಖ್ಯ ಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ “ಸಿಎಂ ಬದಲಾವಣೆ’ ಕೂಗಿಗೆ ಈಗ ರೆಕ್ಕೆಪುಕ್ಕಗಳು ಬಂದಿದ್ದು, ಆಕಾಂಕ್ಷಿಗಳು ಈ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆಗಳು ಹೆಣೆಯಲು ಆರಂಭಿಸಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಹೊಸ್ತಿಲಲ್ಲಿದೆ. ಅಷ್ಟೇ ಅಲ್ಲ, ಚನ್ನಪಟ್ಟಣ ಸೇರಿ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷ ಕೂಡ ಬಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆ …
Read More »14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ
ವಿಜಯಪುರ: ರಾಜ್ಯ ಸರಕಾರ ಕಳೆದ 6 ತಿಂಗಳುಗಳ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ನೀಡುತ್ತಿದ್ದ ಸಿಟಿ ಮತ್ತು ಎಂಆರ್ಐ ಸ್ಕ್ಯಾನ್ ಸೇವೆಯನ್ನು ಕೃಷ್ಣ ಡಯಾಗ್ನೊಸ್ಟಿಕ್ಸ್ ಲಿಮಿಟೆಡ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಹಾರಾಷ್ಟ್ರದ ಪುಣೆ ಮೂಲದ ಈ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜತೆ 2017ರಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆಯ …
Read More »8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್
ಮುಂಬಯಿ: ಕೆಲ ಕಾಲದಿಂದ ಸಿನಿ ರಂಗದಿಂದ ದೂರವಾಗಿರುವ ಬಾಲಿವುಡ್ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್(Urmila Matondkar )ಮದುವೆಯಾದ 8 ವರ್ಷಗಳ ಬಳಿಕ ಪತಿ ಮೊಹ್ಸಿನ್ ಅಖ್ತರ್ ಮಿರ್ ಅವರಿಂದ ವಿಚ್ಛೇದನಕ್ಕೆ(Divorce) ಅರ್ಜಿ ಸಲ್ಲಿಸುವ ಸುದ್ದಿ ಹೊರ ಬಿದ್ದಿದೆ. ಅಂತರ್ ಧರ್ಮೀಯ ವಿವಾಹವಾಗಿದ್ದ ನಟಿಯ ವೈಯಕ್ತಿಕ ಜೀವನದ ಸುದ್ದಿ ಮುಖ್ಯಾಂಶವಾಗಿ ಬಾಲಿವುಡ್ ವಲಯದಲ್ಲಿ ಹರಿದಾಡುತ್ತಿದೆ. ರಂಗೀಲಾ, ಜುದಾಯಿ ಮತ್ತು ದೀವಾನೆ ಮುಂತಾದ ಹಿಟ್ ಚಿತ್ರಗಳ ಮೂಲಕ ಜನ ಮನ ಗೆದ್ದಿದ್ದ 50 ರ …
Read More »ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ
ಧಾರವಾಡ: ಕಬ್ಬಿನ ರಸ ಕಾಮಾಲೆ ರೋಗಕ್ಕೆ ರಾಮಬಾಣ. ಆದರೆ ವರ್ಷವಿಡೀ ಕಬ್ಬಿನ ಹಾಲು ಸಿಗುವುದು ಕಷ್ಟ. ಆದರೆ ಇದೀಗ ರೈತರೊಬ್ಬರು ತಮ್ಮ ಸಂಬಂಧಿಗೆ ಕಾಮಾಲೆ ರೋಗಕ್ಕೆ ಕಬ್ಬಿನ ಹಾಲು ಸಿಗದೇ ನಿಧನರಾಗಿದ್ದನ್ನೇ ಸವಾಲಾಗಿ ಸ್ವೀಕರಿಸಿ ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರಜ್ಞಾನ ಶೋಧಿಸಿ ಸೈ ಎನಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕೆರವಾಡ ಗ್ರಾಮದ ಆರ್.ಐ. ಪಾಟೀಲ ಎಂಬ ರೈತರು ವರ್ಷಪೂರ್ತಿ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿ, …
Read More »ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ
ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ವಿಷಯವನ್ನು ನಿಯಮ ಬಾಹಿರವಾಗಿ ಕಡಿಮೆ ಮಾಡಿರುವ ವಿಷಯಕ್ಕೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ. ಮೊದಲಿನಿಂದಲೂ ವಾಣಿಜ್ಯಶಾಸ್ತ್ರದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಅಧ್ಯಯನ ವಿಷಯವಾಗಿ ಹೇಳಲಾಗಿದೆ. ಅರ್ಥಶಾಸ್ತ್ರ ವಿಷಯವು ವಾಣಿಜ್ಯ ವಿಭಾಗದ ತಾಯಿಬೇರು ಇದ್ದಂತೆ ಆದರೆ ವಾಣಿಜ್ಯಶಾಸ್ತ್ರ ವಿಭಾಗದ ಕೆಲವರ ಕುತಂತ್ರದಿಂದ ಅಕ್ರಮವಾಗಿ ಅರ್ಥಶಾಸ್ತ್ರ ಶೀರ್ಷಿಕೆ ಬದಲಾವಣೆ ಮಾಡಲಾಗಿದೆ. ಅರ್ಥಶಾಸ್ತ್ರ ಅನುದಾನಿತ ಹಾಗೂ ಅತಿಥಿ ಉಪನ್ಯಾಸಕರಿಗೆ …
Read More »