ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಹಾಗೂ ಪೊಲೀಸ್ ಅಧಿಕಾರಿಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಬಳಸಿಕೊಡು ಅವರ ಹೆಸರಿನಲ್ಲಿ ವಾಟ್ಸ್ಆಯಪ್ ಖಾತೆ ತೆರೆದಿರುವ ಆರೋಪಿ ಇಲಾಖೆಯ ಹಲವು ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ. ತುರ್ತು …
Read More »ಯತ್ನಾಳ, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು: ಅಕ್ಕಪಕ್ಕದ ಮನೆಗಳಲ್ಲೇ ವಾಸ
ವಿಜಯಪುರ: ‘ಐಸಿಸ್ ಭಯೋತ್ಪಾದಕರೊಂದಿಗೆ ನಂಟಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಆರೋಪಕ್ಕೆ ಒಳಗಾಗಿರುವ ಜಮಾತ್ ಎ ಅಹಲೆ ಸುನ್ನತ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆದ ಮೌಲ್ವಿ ತನ್ವೀರ್ ಹಾಶ್ಮಿ ಅವರು ಇಲ್ಲಿನ ಗಾಂಧಿಚೌಕದ ಬಳಿಯಿರುವ ‘ಟೂರಿಸ್ಟ್ ಹೋಟೆಲ್’ನ ಪಾಲುದಾರರು. ಅಷ್ಟೇ ಅಲ್ಲ, ನಗರದ ಹೊರವಲಯದ ಮಹಲ್ ಐನಾಪುರ ಗ್ರಾಮದಲ್ಲಿ ಹಾದು ಹೋಗಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಅವರಿಬ್ಬರ ಮನೆಗಳು, ವಾಣಿಜ್ಯ ಮಳಿಗೆಗಳು …
Read More »ಟಾಟಾ ಏಸ್ - ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು, ಒಬ್ಬನಿಗೆ ಗಾಯ
ರಾಯಚೂರು: ಟಾಟಾ ಏಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಇಸ್ಮಾಯಿಲ್ ರಷೀದ್ (25), ರವಿ ರಾಜಪ್ಪ (20), ರಮೇಶ ನಿಂಗಪ್ಪ ಕಣೇಕಲ್ಲೂರು (28), ಅಂಬರೀಶ್ ಸೂಗಪ್ಪ ಕಣೇಕಲ್ಲೂರು (28) ಮೃತದುರ್ದೈವಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ …
Read More »ಆರ್ಎಸ್ಎಸ್ ಮ್ಯೂಸಿಯಂಗೆ ದಲಿತರಿಗೆ ಪ್ರವೇಶವಿಲ್ಲ ಅನ್ನೋದು ಹಸಿ ಸುಳ್ಳು: ಮಾಜಿ ಶಾಸಕ ಎನ್ ಮಹೇಶ್
ಚಾಮರಾಜನಗರ : ಮೌನವಾಗಿ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ಆರ್ಎಸ್ಎಸ್ ಮ್ಯೂಸಿಯಂ ಒಳಗೆ ದಲಿತರಿಗೆ ಪ್ರವೇಶಕ್ಕೆ ಅವಕಾಶವಿಲ್ಲವೆಂಬುದು ಹಸಿ ಸುಳ್ಳು. ಏನಾದರೂ ದಲಿತರಿಗೆ ಅವಕಾಶವಿಲ್ಲ ಎನ್ನುವುದು ನಿಜವಾದರೇ ಅದನ್ನು ಗೂಳಿಹಟ್ಟಿ ಶೇಖರ್ ಸಾಬೀತುಪಡಿಸಲಿ ಎಂದು ಮಾಜಿ ಶಾಸಕ ಎನ್ ಮಹೇಶ್ ಹೇಳಿದ್ದಾರೆ. ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರ ವಾಟ್ಸಪ್ ಆಡಿಯೋದಲ್ಲಿರುವ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ. ಸೈಕಾಲಜಿ ವಿದ್ಯಾರ್ಥಿಯಾದ ನನಗೆ ಅವರು ಹೇಳಿರುವುದು ಸುಳ್ಳು ಅನಿಸುತ್ತದೆ. …
Read More »ಆಸ್ಪತ್ರೆಗೆ ದಾಖಲಾದ ತೆಲಂಗಾಣದ ಮಾಜಿ ಸಿಎಂ
ಹೈದರಾಬಾದ್: ಬಿಆರ್ಎಸ್ ನಾಯಕ ಹಾಗೂ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಎರ್ರವೆಲ್ಲಿಯ ತಮ್ಮ ನಿವಾಸದಲ್ಲಿ ಬಿದ್ದು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ವಕುಂಟ್ಲ ಚಂದ್ರಶೇಖರ್ ರಾವ್ ಅವರನ್ನು ಗುರುವಾರ ತಡರಾತ್ರಿ ಸೋಮಾಜಿಗುಡದಲ್ಲಿರುವ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿದ್ದಿದ್ದರಿಂದ ಅವರ ಸೊಂಟದ ಮೂಳೆ ಮುರಿತವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ …
Read More »ಕ್ಯಾ. ಅರ್ಜುನನ ಸಮಾಧಿಗೆ ಕೈ ಮುಗಿದು ನಮಸ್ಕರಿಸಿದ ಮಹಾರಾಜ ಯದುವೀರ್ ಒಡೆಯರ್
ಹಾಸನ: ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆ ಅರ್ಜುನನ ಸಮಾಧಿಗೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ಧರ್ಮಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಆಗಮಿಸಿ ನಮಸ್ಕರಿಸಿದರು. ಹಾಸನದ ಸಕಲೇಶಪುರದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಬಲಿಷ್ಠವಾದ ಒಂಟಿ ಸಲಗದ ದಾಳಿಗೆ ಅರ್ಜುನ ಗಾಯಗೊಂಡು ಸಾವನ್ನಪ್ಪಿದ್ದ. ಮೃತ ಕ್ಯಾಪ್ಟನ್ ಅರ್ಜುನನ್ನು ಹಾಸನದ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ಸಮಾಧಿ ಮಾಡಲಾಗಿತ್ತು. ಇಂದು ಹಾಸನಕ್ಕೆ ಆಗಮಿಸಿ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ …
Read More »ಇಡೀ ದೇಶವೇ ದುಃಖಕ್ಕೆ ಜಾರುವಂತೆ ಮಾಡಿತ್ತುಡಿಸೆಂಬರ್ 8, 2021..
ಸಿಡಿಎಸ್ ಬಿಪಿನ್ ರಾವತ್ ವೀರಮರಣವನ್ನಪ್ಪಿ ಇಂದಿಗೆ 2 ವರ್ಷ. ಅಂದು ನಡೆದ ದುರಂತದಲ್ಲಿ ನಂಜಪ್ಪ ಛತ್ರಂ ಗ್ರಾಮದ ಜನರು ಮೆರೆದ ಮಾನವೀಯತೆ ಗಮನ ಸೆಳೆದಿದೆ. ಈ ಗ್ರಾಮದಲೀಗ ಸಿಡಿಎಸ್ ರಾವತ್ ಸೇರಿ ಮಡಿದವರ ಸ್ಮಾರಕ ಎದ್ದು ನಿಂತಿದೆ. ಈ ಕುರಿತ ಮಾಹಿತಿ ಇಲ್ಲಿದೆ. ಕೊಯಮತ್ತೂರು (ತಮಿಳುನಾಡು): ಡಿಸೆಂಬರ್ 8, 2021.. ದೇಶಕ್ಕೆ ದೇಶವೇ ಮೌನಕ್ಕೆ ಜಾರಿದ ದಿನ. ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 14 ಜನರು …
Read More »ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ”ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ. ಅವರು ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಯತ್ನಾಳ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿದರು. ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯತ್ನಾಳ್ …
Read More »ಕಾರವಾರದ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ
ಬೆಳಗಾವಿ/ ಬೆಂಗಳೂರು : ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆ ಸಾಮರ್ಥ್ಯವುಳ್ಳ ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಬೇಡಿಕೆ ಸರ್ಕಾರದಿಂದ ಸ್ವೀಕೃತವಾಗಿದ್ದು, ಇದೀಗ ಪರಿಶೀಲನೆಯಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ್ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಇಂದು ಶಾಸಕ ಸತೀಶ್ ಕೃಷ್ಣ ಸೈಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ …
Read More »ವಿಶೇಷಚೇತನರು, ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಸಮಸ್ಯೆ ಆಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿಆರ್ಡಬ್ಬ್ಯೂ, ಯುಆರ್ಡಬ್ಬ್ಯೂ, ಎಂಆರ್ಡಬ್ಲ್ಯೂಗಳ ಸೇವೆಯನ್ನು ಖಾಯಂಗೊಳಿಸುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಇಂದು ಕರ್ನಾಟಕ ರಾಜ್ಯ ವಿಶೇಷಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವಾ ಭದ್ರತೆ ಕಲ್ಪಿಸಬೇಕು. …
Read More »