Breaking News

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ) : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು …

Read More »

ಕಿತ್ತೂರು ಅರಮನೆ ಕೋಟೆ ಅಭಿವೃದ್ಧಿ ಅಕ್ಟೋಬರ್‌ನೊಳಗೆ ಮುಗಿಯಬೇಕು

ಬೆಳಗಾವಿ: ಕಿತ್ತೂರು ಅರಮನೆ ಹಾಗೂ ಕೋಟೆ ಅಭಿವೃದ್ಧಿಯನ್ನು ಅಕ್ಟೋಬರ್ 2024ರ ಕಾಲಮಿತಿಯೊಳಗೆ ಮುಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಿತ್ತೂರ ಐತಿಹಾಸಿಕ ವಿಜಯಕ್ಕೆ 200 ವರ್ಷ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಸೇನೆ ಮೊದಲ ಗೆಲುವು ಸಾಧಿಸಿದ್ದ ಐತಿಹಾಸಿಕ ವಿಜಯಕ್ಕೆ ಅಕ್ಟೋಬರ್‌ಗೆ 200 …

Read More »

ಅಂಬೇಡ್ಕರ್​ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಸಾರ್ವಜನಿಕರಿಂದ ಅಂತಿಮ ದರ್ಶನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಶುಕ್ರವಾರ (ನಿನ್ನೆ) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು, ನೆಲಮಂಗಲದ ಅಂಬೇಡ್ಕರ್​ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಅವರು ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 5:30 ರಿಂದ 10:45ರವರೆಗೂ ನೆಲಮಂಗಲದ ಡಾ.ಆರ್.ಅಂಬೇಡ್ಕರ್ ಅವರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿನೋದ್ ರಾಜ್ ಅವರ ಒಪ್ಪಿಗೆ ಮೇರೆಗೆ 11 …

Read More »

ಜಮೀನೊಂದರಲ್ಲಿ ರಾತ್ರಿ ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯ ಭೀಕರ ಹತ್ಯೆ

ಗದಗ: ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ರುಂಡ ತೆಗೆದುಕೊಂಡು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಸಣ್ಣ ಹನಮಪ್ಪ ವಜ್ರದ (65) ಕೊಲೆಗೀಡಾದ ವ್ಯಕ್ತಿ. ಬೆಳಗ್ಗೆ ಜಮೀನು ಮಾಲೀಕರು ಬಂದು ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಗುಡಿಸಲಿನಲ್ಲಿ ದೇಹ ಮಾತ್ರ ಕಂಡು ಬಂದಿದೆ. ತಕ್ಷಣ ಕೊಲೆಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕರು ಪೊಲೀಸ​ರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ …

Read More »

ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ನೆಲಮಂಗಲದ ಅಂಬೇಡ್ಕರ್​ ಮೈದಾನದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂಬೇಡ್ಕರ್​​ ಮೈದಾನದಿಂದ ‌ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ನಟಿಯರಾದ ಸುಧಾರಾಣಿ, ಮಾಳವಿಕಾ ಸೇರಿದಂತೆ ಇನ್ನಿತರರು ಅಂತಿಮ ದರ್ಶನ …

Read More »

ಸಂವಹನ ಕೊರತೆಯಿಂದ ಸದನದಲ್ಲಿ ಗೊಂದಲ ಉಂಟಾಗಿತ್ತು, ಇದನ್ನು ಬಗೆಹರಿಸುತ್ತೇವೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: “ಮೊನ್ನೆ ಸದನದಲ್ಲಿ ಸಂವಹನ ಕೊರತೆಯಿಂದ ಧರಣಿ ಮಾಡಬೇಕೋ ಅಥವಾ ಸಭಾತ್ಯಾಗ ಮಾಡಬೇಕೋ ಎಂಬ ಬಗ್ಗೆ ಗೊಂದಲ ಉಂಟಾಗಿತ್ತು. ಈ ಬಗ್ಗೆ ವಿಪಕ್ಷ ನಾಯಕ ಆರ್​ ಅಶೋಕ್​ ಸ್ಪಷ್ಟನೆ ನೀಡಿದ್ದಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಧರಣಿ, ಸಭಾತ್ಯಾಗ ವಿಚಾರದಲ್ಲಿ ಬಿಜೆಪಿ ನಾಯಕರ ಅಸಮಾಧಾನದ ವಿಚಾರವಾಗಿ ಪ್ರತಿಕ್ರಿಯಿಸಿ, “ನಾವು ಈ ಕುರಿತು ಸಭೆ ಕರೆದು ಯಾರಿಗಾದರೂ ಗೊಂದಲ ಇದ್ದರೆ ಅದನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇವೆ” ಎಂದರು. …

Read More »

ಸುವರ್ಣಸೌಧದಲ್ಲಿ‌ ಸ್ಪೀಕರ್, ಸಭಾಪತಿಗಳು ಹಸಿರೀಕರಣಕ್ಕೆ ಪಣ ತೊಟ್ಟಿದ್ದಾರೆ

ಬೆಳಗಾವಿ: ಸುವರ್ಣಸೌಧದಲ್ಲಿ ಪರಿಸರ ಕಾಳಜಿ ಮೆರೆಯುವ ನಿಟ್ಟಿನಲ್ಲಿ ಸ್ಪೀಕರ್ ಯು ಟಿ ಖಾದರ್ ಚಳಿಗಾಲದ‌ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು ಆರಂಭಿಸಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರಿನಲ್ಲಿ ಗಿಡ ನೆಡುವ ಮೂಲಕ ಶಾಸಕರ ಹೆಸರನ್ನು ಶಾಶ್ವತವಾಗಿ ಹಸಿರಾಗಿಸಲು ಮುಂದಾಗಿದ್ದಾರೆ. ಸುವರ್ಣ ಸೌಧದ ಪ್ರವೇಶ ರಸ್ತೆಯ ಪಕ್ಕದಲ್ಲಿ ಹಣ್ಣು ಹಂಪಲುಗಳು ಹಾಗೂ ಅಪರೂಪದ ಹೂವು ಬಿಡುವ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ಎಲ್ಲಾ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಕಟಾವು ಕಾರ್ಮಿಕರ ಸಮಸ್ಯೆಗಳ ಚರ್ಚೆಗೆ ಒತ್ತಾಯ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬು ಬೆಳೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಬ್ಬು ಕಟಾವು ಮಾಡಿ ಸಾಗಿಸುವ ಕಾರ್ಮಿಕರಿಗೆ ನ್ಯಾಯಯುತ ಸಂಬಳ ಸಿಗದೆ ಇರೋದ್ರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಸಮಸ್ಯೆಗಳ ಕುರಿತಾಗಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಚಿಕ್ಕೋಡಿ ಭಾಗದ ಕಬ್ಬು ಕಟಾವು ಕಾರ್ಮಿಕರು ಒತ್ತಾಯಿಸಿದ್ದಾರೆ. ಮೂರು ವರ್ಷಗಳಿಂದ ಕಾರ್ಮಿಕರಿಗೆ ಪ್ರತಿ ಟನ್ 324 ರೂ ನೀಡುತ್ತಿದ್ದು, ಈ ಕೂಲಿ ದರವನ್ನು ಸಕ್ಕರೆ ಕಾರ್ಖಾನೆಗಳು …

Read More »

ಸಮಾಜದಲ್ಲಿ ಬಿರುಕು ಉಂಟು ಮಾಡುವುದಲ್ಲ, ಒಗ್ಗೂಡಿಸುವುದು ನನ್ನ ಕೆಲಸ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

ಬೆಳಗಾವಿ/ಬೆಂಗಳೂರು: “ನಾನು ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತೇನೆ. ಕಿತ್ತು ಬಿಸಾಡುವುದಲ್ಲ, ಜೋಡಿಸುವುದು ನನ್ನ ಜವಾಬ್ದಾರಿ” ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಸಾವರ್ಕರ್ ಫೋಟೋ ತೆರವು ವಿಚಾರವಾಗಿ ಪರೋಕ್ಷ ಸಂದೇಶ ನೀಡಿದರು. ಸುವರ್ಣಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾವರ್ಕರ್ ಫೋಟೋ ವಿವಾದ ಸಂಬಂಧ ಪ್ರತಿಕ್ರಿಯಿಸಿ, “ಒಂದು ರಥವನ್ನು ಸಾಧ್ಯವಾದರೆ ಮುಂದಕ್ಕೆ ಎಳೆದುಕೊಂಡು ಹೋಗಿ. ಇಲ್ಲವಾದರೆ ಇದ್ದಲ್ಲೇ ಬಿಡಿ. ಆದರೆ ಹಿಂದಕ್ಕೆ ಎಳೆಯುವಂಥ ಕೆಲಸ ಮಾಡಬೇಡಿ ಎಂದು …

Read More »