ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪಕ್ಕೆ ಗುರಿಯಾಗಿರುವ ಎನ್. ಮೋಹನ್ ನಾಯಕ್ ಅಲಿಯಾಸ್ ಸಂಪಾಜೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇವರು ಇಡೀ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೊದಲ ಆರೋಪಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಎನ್ ಮೋಹನ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ …
Read More »ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ್-ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ …
Read More »ಸತತ ಹಾಜರಿ: ಶಾಸಕ ಜನಾರ್ದನ ರೆಡ್ಡಿಗೆ ಉಡುಗೊರೆ
ಗಂಗಾವತಿ: ಕಳೆದ ವಿಧಾನಸಭೆಯ ಅಧಿವೇಶನದ ಕಲಾಪದ ಒಂದು ದಿನವೂ ಗೈರಾಗದೇ ಗಮನ ಸೆಳೆದಿದ್ದ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿಗೆ ಸ್ಪೀಕರ್ ಯು.ಟಿ. ಖಾದರ್ ಉಡುಗೊರೆ ನೀಡುವ ಮೂಲಕ ಅಭಿನಂದಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಬಿಡುವಿನ ಸಂದರ್ಭದಲ್ಲಿ ತಮ್ಮ ಕೊಠಡಿಗೆ ಕರೆಯಿಸಿಕೊಂಡ ಸ್ಪೀಕರ್ ಪುಟ್ಟ ಉಡುಗೊರೆ ನೀಡಿ ಅಭಿನಂದನೆ ಸಲ್ಲಿಸಿದರು. ವಿಧಾನಸೌಧದಲ್ಲಿ ನಡೆದ ಕಳೆದ ಅಧಿವೇಶನದ 14 ದಿನಗಳ ಎಲ್ಲ ಕಾರ್ಯಕಲಾಪದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ ದಿನದ …
Read More »ಬಡ್ಡಿದರಗಳು ಹೆಚ್ಚಾಗುತ್ತವೆಯೋ ಅಥವಾ ಕಡಿಮೆಯಾಗುತ್ತವೆಯೋ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಲಭಿಸಿದೆ.
ನವದೆಹಲಿ: ಬಡ್ಡಿದರಗಳು ಹೆಚ್ಚಾಗುತ್ತವೆಯೋ ಅಥವಾ ಕಡಿಮೆಯಾಗುತ್ತವೆಯೋ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಲಭಿಸಿದೆ. ಮೂರು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ನಿಂದ(ಆರ್‌ಬಿಐ) ನಡೆಯುತ್ತಿರುವ ಸುದೀರ್ಘ ಹಣಕಾಸು ನೀತಿ ಸಮಿತಿ ಸಭೆ ಇಂದು (ಶುಕ್ರವಾರ) ಕೊನೆಗೊಂಡಿದೆ. ಸಭೆಯ ನಂತರ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹಣಕಾಸು ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದಕೊಳ್ಳಲಾಗಿದೆ. ರೆಪೊ ದರ ಶೇ 6.5 ಇದೆ. ಜಿಡಿಪಿ ಬೆಳವಣಿಗೆ ಶೇ 7ರಷ್ಟು ಆಗಲಿದೆ ಅಂದಾಜಿಸಿದ್ದಾರೆ. ಹಣದುಬ್ಬರ ಶೇ 5.4ರಷ್ಟಿದೆ …
Read More »ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ನಕಲಿ ವಾಟ್ಸ್ಆಯಪ್ ಖಾತೆ ಸೃಷ್ಟಿ: ಪ್ರಕರಣ ದಾಖಲು
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಹಾಗೂ ಪೊಲೀಸ್ ಅಧಿಕಾರಿಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಬಳಸಿಕೊಡು ಅವರ ಹೆಸರಿನಲ್ಲಿ ವಾಟ್ಸ್ಆಯಪ್ ಖಾತೆ ತೆರೆದಿರುವ ಆರೋಪಿ ಇಲಾಖೆಯ ಹಲವು ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ. ತುರ್ತು …
Read More »ಯತ್ನಾಳ, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು: ಅಕ್ಕಪಕ್ಕದ ಮನೆಗಳಲ್ಲೇ ವಾಸ
ವಿಜಯಪುರ: ‘ಐಸಿಸ್ ಭಯೋತ್ಪಾದಕರೊಂದಿಗೆ ನಂಟಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಆರೋಪಕ್ಕೆ ಒಳಗಾಗಿರುವ ಜಮಾತ್ ಎ ಅಹಲೆ ಸುನ್ನತ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆದ ಮೌಲ್ವಿ ತನ್ವೀರ್ ಹಾಶ್ಮಿ ಅವರು ಇಲ್ಲಿನ ಗಾಂಧಿಚೌಕದ ಬಳಿಯಿರುವ ‘ಟೂರಿಸ್ಟ್ ಹೋಟೆಲ್’ನ ಪಾಲುದಾರರು. ಅಷ್ಟೇ ಅಲ್ಲ, ನಗರದ ಹೊರವಲಯದ ಮಹಲ್ ಐನಾಪುರ ಗ್ರಾಮದಲ್ಲಿ ಹಾದು ಹೋಗಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಅವರಿಬ್ಬರ ಮನೆಗಳು, ವಾಣಿಜ್ಯ ಮಳಿಗೆಗಳು …
Read More »ಟಾಟಾ ಏಸ್ - ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು, ಒಬ್ಬನಿಗೆ ಗಾಯ
ರಾಯಚೂರು: ಟಾಟಾ ಏಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಇಸ್ಮಾಯಿಲ್ ರಷೀದ್ (25), ರವಿ ರಾಜಪ್ಪ (20), ರಮೇಶ ನಿಂಗಪ್ಪ ಕಣೇಕಲ್ಲೂರು (28), ಅಂಬರೀಶ್ ಸೂಗಪ್ಪ ಕಣೇಕಲ್ಲೂರು (28) ಮೃತದುರ್ದೈವಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ …
Read More »ಆರ್ಎಸ್ಎಸ್ ಮ್ಯೂಸಿಯಂಗೆ ದಲಿತರಿಗೆ ಪ್ರವೇಶವಿಲ್ಲ ಅನ್ನೋದು ಹಸಿ ಸುಳ್ಳು: ಮಾಜಿ ಶಾಸಕ ಎನ್ ಮಹೇಶ್
ಚಾಮರಾಜನಗರ : ಮೌನವಾಗಿ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ಆರ್ಎಸ್ಎಸ್ ಮ್ಯೂಸಿಯಂ ಒಳಗೆ ದಲಿತರಿಗೆ ಪ್ರವೇಶಕ್ಕೆ ಅವಕಾಶವಿಲ್ಲವೆಂಬುದು ಹಸಿ ಸುಳ್ಳು. ಏನಾದರೂ ದಲಿತರಿಗೆ ಅವಕಾಶವಿಲ್ಲ ಎನ್ನುವುದು ನಿಜವಾದರೇ ಅದನ್ನು ಗೂಳಿಹಟ್ಟಿ ಶೇಖರ್ ಸಾಬೀತುಪಡಿಸಲಿ ಎಂದು ಮಾಜಿ ಶಾಸಕ ಎನ್ ಮಹೇಶ್ ಹೇಳಿದ್ದಾರೆ. ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರ ವಾಟ್ಸಪ್ ಆಡಿಯೋದಲ್ಲಿರುವ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ. ಸೈಕಾಲಜಿ ವಿದ್ಯಾರ್ಥಿಯಾದ ನನಗೆ ಅವರು ಹೇಳಿರುವುದು ಸುಳ್ಳು ಅನಿಸುತ್ತದೆ. …
Read More »ಆಸ್ಪತ್ರೆಗೆ ದಾಖಲಾದ ತೆಲಂಗಾಣದ ಮಾಜಿ ಸಿಎಂ
ಹೈದರಾಬಾದ್: ಬಿಆರ್‌ಎಸ್ ನಾಯಕ ಹಾಗೂ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಎರ್ರವೆಲ್ಲಿಯ ತಮ್ಮ ನಿವಾಸದಲ್ಲಿ ಬಿದ್ದು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ವಕುಂಟ್ಲ ಚಂದ್ರಶೇಖರ್ ರಾವ್ ಅವರನ್ನು ಗುರುವಾರ ತಡರಾತ್ರಿ ಸೋಮಾಜಿಗುಡದಲ್ಲಿರುವ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿದ್ದಿದ್ದರಿಂದ ಅವರ ಸೊಂಟದ ಮೂಳೆ ಮುರಿತವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ …
Read More »ಕ್ಯಾ. ಅರ್ಜುನನ ಸಮಾಧಿಗೆ ಕೈ ಮುಗಿದು ನಮಸ್ಕರಿಸಿದ ಮಹಾರಾಜ ಯದುವೀರ್ ಒಡೆಯರ್
ಹಾಸನ: ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆ ಅರ್ಜುನನ ಸಮಾಧಿಗೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ಧರ್ಮಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಆಗಮಿಸಿ ನಮಸ್ಕರಿಸಿದರು. ಹಾಸನದ ಸಕಲೇಶಪುರದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಬಲಿಷ್ಠವಾದ ಒಂಟಿ ಸಲಗದ ದಾಳಿಗೆ ಅರ್ಜುನ ಗಾಯಗೊಂಡು ಸಾವನ್ನಪ್ಪಿದ್ದ. ಮೃತ ಕ್ಯಾಪ್ಟನ್ ಅರ್ಜುನನ್ನು ಹಾಸನದ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ಸಮಾಧಿ ಮಾಡಲಾಗಿತ್ತು. ಇಂದು ಹಾಸನಕ್ಕೆ ಆಗಮಿಸಿ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ …
Read More »