ಬೆಳಗಾವಿ/ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್ ನಲ್ಲಿ ಧರಣಿ ಮುಂದುವರೆಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು 10 ನಿಮಿಷಗಳ ಕಾಲ ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿಕೆ ಮಾಡಿದರು. ಕುಂದಾನಗರಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೂರನೇ ದಿನದ ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ 7ನೇ ವೇತನ ಆಯೋಗ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ …
Read More »ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಸೂಚನೆ
ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಸಿಎಂ ಸಿದ್ದರಾಮಯ್ಯ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಎರಡೂ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಸಿ ವರ್ಷಗಳು ಕಳೆದರೂ ನ್ಯಾಯಾಲಯಗಳಲ್ಲಿ ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಮೃತರ ಸಂಬಂಧಿಕರು ತಮ್ಮ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಪ್ರಕರಣ ಸಂಬಂಧ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ …
Read More »ಬೆಳೆಹಾನಿಗೆ2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ
ಬೆಳಗಾವಿ/ಬೆಂಗಳೂರು: ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆಯಾಗುತ್ತಿದ್ದಂತೆ ರೈತರಿಗೆ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಭಾಗಶಃ ಪರಿಹಾರದ ಭಾಗವಾಗಿ 2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ಬರ ಜನರಿಗೆ ಬಾಧೆಯಾಗುತ್ತಿದೆ, ಸರ್ಕಾರ ಏನೆಲ್ಲಾ ಮಾಡಬೇಕೋ …
Read More »ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್ ಅವರು ಕಾಳಜಿಯನ್ನು ಹೊಂದಿದ್ದರು. ನಮ್ಮ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ …
Read More »ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ಮನೆ ಇರಲ್ಲ:H.D.K.
ಬೆಳಗಾವಿ/ಬೆಂಗಳೂರು : ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಮುಂದಿನ ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ನೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಅಧಿವೇಶನಕ್ಕೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ನನ್ನ ಆದ್ಯತೆ. ಈ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾತನಾಡುತ್ತೇನೆ. ಈ ಭಾಗದ …
Read More »ಅಬಕಾರಿ ಸಿಎಲ್ 7 ಪರವಾನಗಿ ಅಕ್ರಮ: ಆಡಳಿತ-ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ
ಬೆಳಗಾವಿ/ ಬೆಂಗಳೂರು : ರಾಜ್ಯದ ಹಲವು ಕಡೆ ಅಬಕಾರಿ ಇಲಾಖೆಯಲ್ಲಿನ ಸಿಎಲ್ -7 ಪರವಾನಗಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ತನಿಖೆಯಾಗಬೇಕೆಂಬ ವಿಚಾರ ವಿಧಾನಸಭೆಯಲ್ಲಿ ಇಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ವಾಗ್ವಾದ ನಡೆಯಿತು. ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರು, ಸಿಎಲ್ 7 ಪರವಾನಗಿಯಲ್ಲಿ ಅಕ್ರಮ ನಡೆದಿದೆ. ನಿಯಮಗಳನ್ನು ಗಾಳಿಗೆ ತೂರಿ ಪರವಾನಗಿ ನೀಡಲಾಗಿದೆ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಕೋಲಾರ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ …
Read More »ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು
ಧಾರವಾಡ: ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಅಳ್ನಾವರ ತಾಲೂಕಿನ 3,052 …
Read More »13 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ!
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿರುವ ಗಂಭೀರ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚರ, ಸ್ಥಿರಾಸ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿತರ ವಿರುದ್ಧ ಪ್ರತ್ಯೇಕವಾಗಿ 13 ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 68 ಕಡೆ ಲೋಕಾ …
Read More »ಚಿಕ್ಕಮಗಳೂರು ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಸಿಐಡಿಗೆ ಹಸ್ತಾಂತರ
ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ನೀಡಿದರು. ವಿಚಾರಣೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು …
Read More »ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿ ನೇಮಕ..5500 ಹೊಸ ಬಸ್ ಖರೀದಿ : ಸಚಿವ ರಾಮಲಿಂಗಾರೆಡ್ಡಿ
ಬೆಳಗಾವಿ : ನಾನು ಸಾರಿಗೆ ಮಂತ್ರಿ ಆಗಿದ್ದಾಗ ನೇಮಕಾತಿ ಆಗಿದ್ದೇ ಕೊನೆ. ಕಳೆದ ಏಳು ವರ್ಷಗಳಲ್ಲಿ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಜನರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅನುಮತಿ ಸಿಕ್ಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು …
Read More »