Breaking News

ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.   ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. …

Read More »

ಕೇಂದ್ರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರಬೇಕು: ಕಂಗನಾ ರನೌತ್

ನವದೆಹಲಿ: ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರುವಂತೆ ಒತ್ತಾಯಿಸುವ ಮೂಲಕ ಬಾಲಿವುಡ್‌ ನಟಿ, ಲೋಕಸಭೆ ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಮತ್ತೊಂದು ಸುತ್ತಿನ ವಿವಾದಕ್ಕೆ ಅಡಿಯಿಟ್ಟಂತೆ ಕಾಣುತ್ತಿದೆ. ಕೇಂದ್ರದ ಕೃಷಿ ಕಾನೂನುಗಳ ಕುರಿತು ಕಂಗನಾ ರನೌತ್ ಮಾತನಾಡಿರುವ ವಿಡಿಯೊವೊಂದು ‘ಎಕ್ಸ್‌’ನಲ್ಲಿ ಹರಿದಾಡುತ್ತಿದೆ. ಆದರೆ, ಇದು ಯಾವಾಗ ಮಾತನಾಡಿರುವ ವಿಡಿಯೊ ಎಂಬುದು ಸ್ಪಷ್ಟವಾಗಿಲ್ಲ. ‘ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮರಳಿ ಜಾರಿಗೆ ತರಬೇಕು. ನನ್ನ ಹೇಳಿಕೆ …

Read More »

ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ?

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಸಾರಿಗೆ ನಿಗಮಗಳು ರಾಜ್ಯಾದ್ಯಂತ ಜನರಿಗೆ ಪ್ರಯಾಣ ಸೇವೆ ಕಲ್ಪಿಸುತ್ತಿವೆ. ಒಂದು ದಿನ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾದರೂ ಪ್ರಯಾಣಿಕರ ಪರದಾಟ ನೋಡಲಾಗುವುದಿಲ್ಲ. ಆದರೆ, ಸಾರಿಗೆ ನೌಕಕರು ಇನ್ನೇನು ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ಎಂದು ವರದಿಯಾಗಿದೆ.   ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ವಿವಿಧ ಸಾರಿಗೆ ನೌಕರರ …

Read More »

ಜಮ್ಮು-ಕಾಶ್ಮೀರದಲ್ಲಿ ಎರಡನೇ ಹಂತದ ಮತದಾನ ಆರಂಭ

ಶ್ರೀನಗರ: 114 ಸಂಖ್ಯಾಬಲದ ಜಮ್ಮು-ಕಾಶ್ಮೀರ ವಿಧಾನಸಭೆಗೆ ಇಂದು (ಅಕ್ಟೋಬರ್​ 25) ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಜಿಲ್ಲೆಗಳ ಒಟ್ಟು 26 ವಿಧಾನಸಭೆ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ನಾಯಕ ಒಮರ್ ಅಬ್ದುಲ್ಲಾ, ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ …

Read More »

ರಾಹುಲ್ ಗಾಂಧಿ ಪಾಸ್ಪೋರ್ಟ್ ರದ್ದುಗೊಳಿಸಲು ಬಿಜೆಪಿ ಆಗ್ರಹ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಅವರು ನೀಡಿದ ಹೇಳಿಕೆಗಳು ರಾಜಕೀಯವಲ್ಲ ಆದರೆ ರಾಷ್ಟ್ರ ವಿರೋಧಿ ಚಟುವಟಿಕೆಗಳಾಗಿವೆ ಎಂದು ಆರೋಪಿಸಿ ಬಿಜೆಪಿ ಸಂಸದ ಸಿಪಿ ಜೋಶಿ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.   ಲೋಕಸಭಾ ಸ್ಪೀಕರ್ಗೆ ಬರೆದ ಪತ್ರದಲ್ಲಿ, ಚಿತ್ತೋರ್ಗಢ ಸಂಸದ ರಾಹುಲ್ ಗಾಂಧಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ರಾಹುಲ್ ಗಾಂಧಿ ವಿರೋಧ …

Read More »

318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಿಟಿಜನ್ ಪೋರ್ಟಲ್ ಮೂಲಕ ಸಲ್ಲಿಕೆಯಾದ ಬೇಡಿಕೆಗಳ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ. 4.85 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, 3.60 ಲಕ್ಷ ಶೌಚಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಅನುದಾನವನ್ನು ನಿಗದಿತ …

Read More »

ನಾಲ್ಕು ಶತಮಾನ ಕಂಡ ಮೈಸೂರು ದಸರಾ: ಇತಿಹಾಸ ಹೇಳುವುದೇನು?

ಮೈಸೂರು, ಸೆಪ್ಟೆಂಬರ್‌ 24: ದೇಶ ವಿದೇಶಗಳ ಗಮನಸೆಳೆದಿರುವ ಐತಿಹಾಸಿಕ ಮೈಸೂರು ದಸರಾದಲ್ಲಿ ಏನಿದೆ ಏನಿಲ್ಲ ಎಂಬುದನ್ನು ಹೇಳುವುದೇ ಕಷ್ಟವಾಗುತ್ತದೆ. ಏಕೆಂದರೆ ಈ ಮಹೋತ್ಸವಕ್ಕೆ ನಾಲ್ಕು ಶತಮಾನಗಳ ಇತಿಹಾಸದ ಹಿರಿಮೆ, ಸಾಂಸ್ಕೃತಿಕ ರಂಗುರಂಗಿನ ಗರಿಮೆ. ಬೆಡಗು ಭಿನ್ನಾಣವಿದೆ. ಇದು ಒಂಭತ್ತು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಸುಗ್ಗಿಯೊಂದಿಗೆ ಹಳ್ಳಿಗಳಿಂದ ಆರಂಭವಾಗಿ ಜಾಗತಿಕ ಜಗುಲಿಯ ಎತ್ತರಕ್ಕೆ ದಸರಾ ಬೆಳೆದು ನಿಂತಿರುವ ಜನಮನದ ಜನತಾ ದಸರಾ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ದಸರಾ ಎಲ್ಲೆಡೆ ನಡೆದರೂ …

Read More »

ಬೆಂಗಳೂರು : ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ರೇಡ್ : ದಾಳಿಯ ವೇಳೆ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ!

ಬೆಂಗಳೂರು : ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ರೇಡ್ : ದಾಳಿಯ ವೇಳೆ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ!   ಬೆಂಗಳೂರು :ಬೆಂಗಳೂರಿನ ಅಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ‌.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ.   …

Read More »

ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಕೋರ್ಟ್

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 12 ದಿನ ಎಸ್‌ಐಟಿ ಕಸ್ಟಡಿಗೆ SIT Custody ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶ ನೀಡಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಇದರ ಬೆನ್ನಲ್ಲೆ ಹೆಚ್ಚಿನ ತನಿಖೆಗಾಗಿ ಇಂದು …

Read More »

ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿರುವ ಇ- ಆಸ್ತಿ ತಂತ್ರಾಂಶವನ್ನು ಇತರ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿರುತ್ತದೆ ಹಾಗೂ ಜಮೀನಿನ ಸರ್ವೆ ನಕ್ಷೆ (ಸ್ಕೆಚ್) – ನಮೂನೆ-11ಇ ಇರುವ ಮೋಜಿಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತ್ತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು …

Read More »