Breaking News

ಬೈಲಹೊಂಗಲ: ಮರಡಿ ಬಸವೇಶ್ವರ ದೇವಸ್ಥಾನ ಜಾತ್ರೆಗೆ ಸಜ್ಜು

ಬೈಲಹೊಂಗಲ: ರೈತ ಸಮುದಾಯದ ಆಧ್ಯಾತ್ಮಿಕ ಕೇಂದ್ರವಾಗಿರುವ ಇತಿಹಾಸ ಪ್ರಸಿದ್ಧ ಮರಡಿ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಡಿ.4ರಿಂದ 8ರವರೆಗೆ ಅದ್ಧೂರಿ ಜಾತ್ರಾ ಮಹೋತ್ಸವ ನೆರವೇರಲಿದೆ. ಡಿ. 4ರಂದು ಸಂಜೆ 4.30ಕ್ಕೆ ನೆರವೇರಲಿರುವ ನವಿಲಿನ ಕಳಶ ಹೊತ್ತ ಮಹಾತೇರು ಎಳೆಯಲು ಈ ಭಾಗದ ಸದ್ಭಕ್ತರು ಆತುರದಿಂದ ಕಾಯುತ್ತಿದ್ದಾರೆ.   ಲಕ್ಷಾಂತರ ಭಕ್ತರ ಆಗಮನ: ಸರ್ವಧರ್ಮೀಯರು ಶ್ರದ್ಧಾಭಕ್ತಿಯಿಂದ ಪೂಜಿಸುವ ಮರಡಿ ಬಸವೇಶ್ವರ ಜಾತ್ರೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಭಕ್ತರು ತುದಿಗಾಲ ಮೇಲೆ ನಿಂತಿದ್ದಾರೆ. …

Read More »

ರಕ್ಷಣಾ ಸವಾಲುಗಳನ್ನು ಎದುರಿಸಲು ಸಜ್ಜಾಗಿ: ಏರ್‌ ಮಾರ್ಷಲ್‌ ರಾಧಾಕೃಷ್ಣನ್‌

ಬೆಳಗಾವಿ: ತಾಲ್ಲೂಕಿನ ಸಾಂಬ್ರಾದ ಏರ್‌ಮೆನ್‌ ತರಬೇತಿ ಶಾಲೆ(ಎಟಿಎಸ್‌)ಯಲ್ಲಿ ಪುರುಷ ಅಗ್ನಿವೀರವಾಯುಗಳ ಎರಡನೇ ತಂಡದ ಮತ್ತು ಮಹಿಳಾ ಅಗ್ನಿವೀರವಾಯುಗಳ ಮೊದಲ ತಂಡದ ನಿರ್ಗಮನ ಪಥಸಂಚಲನ ಶನಿವಾರ ನಡೆಯಿತು. ಇಲ್ಲಿ 22 ವಾರ ತರಬೇತಿ ಪಡೆದ 2,127 ಪುರುಷರು, 153 ಮಹಿಳೆಯರು ಸೇರಿದಂತೆ 2,280 ಅಗ್ನಿವೀರವಾಯುಗಳು ಆಕರ್ಷಕ ಪಥಸಂಚಲನ ನಡೆಸಿದರು.   ಈ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದ ಏರ್‌ ಆಫೀಸರ್‌ ಕಮಾಂಡಿಂಗ್‌ ಇನ್‌ ಚೀಫ್‌ ಏರ್‌ ಮಾರ್ಷಲ್‌ ರಾಧಾಕೃಷ್ಣನ್‌ ರಾಧಿಶ್‌, ‘ಪ್ರಸ್ತುತ …

Read More »

ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿ

ಮೂಡಲಗಿ: ‘ಮನಸ್ಸಿದ್ದರೆ ಏನೆಲ್ಲ ಮಾಡಬಹುದು, ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಯುವ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿಯಾಗಿದ್ದಾರೆ. 2008ರಲ್ಲಿ ಬಿಎ ಪದವಿ ಮುಗಿಸಿ ನೌಕರಿ ದೊರೆಯದಿದ್ದಾಗ ಒಂದೇ ಆಕಳು ಸಾಕಿ ಹೈನುಗಾರಿಕೆ ಆರಂಭಿಸಿ ಹೊನ್ನಪ್ಪ ಅವರ ಹೊಲದಲ್ಲಿ ಇಂದು 20ಕ್ಕೂ ಅಧಿಕ ಎಚ್‌ಎಫ್‌ ತಳಿಯ ಹಸುಗಳು ಇವೆ. ಪ್ರತಿ ದಿನ ಬೆಳಿಗ್ಗೆ 100 ಲೀಟರ್‌, ಸಂಜೆ 100 ಲೀಟರ್‌ ಹೀಗೆ ನಿತ್ಯ 200 …

Read More »

ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು. ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ

ಶಿರಸಿ(ಉತ್ತರ ಕನ್ನಡ): ರಾಜ್ಯದಲ್ಲಿ ದಲಿತ ಸಿಎಂ ಆಗಲೂ ಇನ್ನೂ ಕಾಲ ಕೂಡಿ ಬಂದಿಲ್ಲ, ಕಾಲ ಕೂಡಿ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ಶನಿವಾರ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು, ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ದಲಿತ ಸಿಎಂ ವಿಚಾರ ಇಲ್ಲ ಎಂದರು. ಪಕ್ಷದ ಮುಖಂಡ ಬಿ ಕೆ ಹರಿಪ್ರಸಾದ್ ಅವರನ್ನು …

Read More »

ರಾಜ್ಯಕ್ಕೆ ಐಜಿಎಸ್​​ಟಿ ಕಡಿತ ಆಘಾತ: ಸ್ಪಷ್ಟನೆ ಕೋರಿ ಕೇಂದ್ರ ಸಚಿವರಿಗೆ ಸಿಎಂ ಪತ್ರ

ಬೆಂಗಳೂರು: ಬರ, ಗ್ಯಾರಂಟಿ ಯೋಜನೆಗಳಿಂದ ತೀವ್ರ ಆರ್ಥಿಕ ಹೊರೆ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇದೀಗ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ.‌ ಕೇಂದ್ರ ಸರ್ಕಾರ ಕರ್ನಾಟಕದ ಐಜಿಎಸ್​​ಟಿ ಸಂಗ್ರಹದಿಂದ 798 ಕೋಟಿ ರೂ.‌ ಕಡಿತಗೊಳಿಸಿದೆ.   IGST ಅಂದರೆ ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಆಗಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸರಕು ಮತ್ತು ಸೇವೆಗಳು ಚಲಿಸಿದಾಗ ಐಜಿಎಸ್​ಟಿ ವಿಧಿಸಲ್ಪಡುತ್ತದೆ. ಐಜಿಎಸ್​ಟಿ ಹಂತದಲ್ಲಿ ಬರುವ ಆದಾಯವನ್ನು ಕೇಂದ್ರ ಹಾಗೂ …

Read More »

ವಿಜಯಪುರದಲ್ಲಿ ಭೀಕರ ಬರ ವಿಜಯಪುರದಲ್ಲಿ ಭೀಕರ ಬರ

ವಿಜಯಪುರ: ಬರಪೀಡಿತ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಈ ಬಾರಿಯೂ ಜನರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಹೀಗಾಗಿ ಕೆಲವೆಡೆ ಇಡೀ ಗ್ರಾಮದ ಮನೆಗಳಿಗೆ ಬೀಗ ಜಡಿದು ಜನ್ರು ದುಡಿಯೋಕೆ ಹೋಗಿರುವ ದೃಶ್ಯಗಳು ಕಂಡುಬಂದಿವೆ. ಹೌದು, ವಿಜಯಪುರ ಜಿಲ್ಲೆಯ ಬಹುತೇಕ ಗ್ರಾಮಗಳ ಜನರು ಉದ್ಯೋಗ ಅರಸಿ ಅನ್ಯ ರಾಜ್ಯಗಳಿಗೆ ಗುಳೇ ಹೋಗುತ್ತಾರೆ. ಅವರಲ್ಲಿ ಹೆಚ್ಚಿನ‌ವರು ತಾಂಡಾಗಳ ಜನರೇ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಕುಟುಂಬ ಸಮೇತ ತೆರಳುತ್ತಿದ್ದಾರೆ. ಹೀಗೆ ಹೋಗುವ …

Read More »

ವಾಟರ್ ಪ್ರೂಫ್ ಟೆಂಟ್, ಮಳೆ ಬಂದರೂ ಯಾವುದೇ ಸಮಸ್ಯೆಯಾವುಗುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ನಿನ್ನೆ ಚಳಿಗೆ ಟೆಂಟ್​ ಒಳಗೆ ಪೊಲೀಸರು ತತ್ತರಿಸಿ ಹೋಗಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿ

ಬೆಳಗಾವಿ: ಡಿ.4ರಿಂದ 15ರ ವರೆಗೆ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದ ಬಂದೋಬಸ್ತ್​ಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ಉಳಿದುಕೊಳ್ಳಲು ಬೃಹದಾಕಾರದ ಜರ್ಮನ್ ಟೆಂಟ್​​ಗಳಿಂದ ಟೌನ್​ಶಿಪ್​ಗಳನ್ನು ನಿರ್ಮಿಸಲಾಗಿದೆ. ಪೊಲೀಸ್​ ಸಿಬ್ಬಂದಿಗೆ ನಿರ್ಮಿಸಲಾಗಿರುವ ಜರ್ಮನ್​ ಟೆಂಟ್​ ವ್ಯವಸ್ಥೆ ಹೇಗಿದೆ, ಪೊಲೀಸರು ಏನಂತಾರೆ. ಇಲ್ಲಿದೆ ಮಾಹಿತಿ. ಹೌದು, ಸುವರ್ಣ ವಿಧಾನಸೌಧ ಸಮೀಪದ ಅಲಾರವಾಡ ಗ್ರಾಮದ ಹೊರವಲಯದಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಟೌನ್​ಶಿಪ್ ನಿರ್ಮಾಣ ಮಾಡಲಾಗಿದೆ. ಇಲ್ಲಿ ನಾಲ್ಕು ದೊಡ್ಡ ದೊಡ್ಡ ಜರ್ಮನ್ …

Read More »

ಹೊಸ ‘BPL, APL ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಾಳೆ ‘ಅರ್ಜಿ ಸಲ್ಲಿಕೆ’ಗೆ ಅವಕಾಶ |

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ( Ration Card ) ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.3ರಂದು ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಆಹಾರ ಇಲಾಖೆಯು, ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದೆ.   ರೇಷನ್ …

Read More »

ಇಂದಿನಿಂದ ಮಲ್ಲೇಶ್ವರಂನ ‘ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯ’ದಲ್ಲಿ ‘ಕಡಲೆಕಾಯಿ ಪರಿಷೆ’

ಬೆಂಗಳೂರು: ಇಲ್ಲಿನ ಮಲ್ಲೇಶ್ವರಂನಲ್ಲಿರುವ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.2ರ ಇಂದಿನಿಂದ ಡಿ.4ರವರೆಗೂ 7ನೇ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಡಲೆಕಾಯಿ ಪರಿಷೆ ಹಾಗೂ ಹಸಿರು ಚೈತನ್ಯೋತ್ಸವ ಕಾರ್ಯಕ್ರಮದ ಆಡಿಯಲ್ಲಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.   ಇಂದಿನ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಚಾಲನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಬಿ.ಕೆ …

Read More »

ಕೊಪ್ಪಳದಲ್ಲಿ ‘ಜೈ ಶ್ರೀರಾಮ್’ ಹೇಳುವಂತೆ ಅಂಧ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ

ಕೊಪ್ಪಳ:ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ‘ಜೈ ಶ್ರೀರಾಮ’ ಎಂದು ಪಠಿಸುವಂತೆ ಒತ್ತಾಯಿಸಿ 62 ವರ್ಷದ ಅಂಧ ಮುಸ್ಲಿಂ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಗಾವತಿ ಪಟ್ಟಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಹುಸೇನ್ ಸಾಬ್ ಅವರು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ತನಗೆ ಬಲವಂತವಾಗಿ ಬೈಕ್ ಹತ್ತಿಸಿ, ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ನವೆಂಬರ್ 25 ರ ಮಧ್ಯರಾತ್ರಿ ತನ್ನ ಮೇಲೆ …

Read More »