Breaking News

ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.   ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …

Read More »

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟಗೊಂಡಿದ್ದು, ಆಟಗಾರರ ಪಟ್ಟಿ ಇಲ್ಲಿದೆ.

ಹೈದರಾಬಾದ್​: ದಕ್ಷಿಣ​ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಮಾದರಿಯ ಸರಣಿಗಾಗಿ ಭಾರತ ತಂಡ ಪ್ರಕಟವಾಗಿದೆ. ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಟೀಂ ಇಂಡಿಯಾವನ್ನು ಘೋಷಿಸಿದರು.   ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಮೂರು ಏಕದಿನ, ಮೂರು ಟಿ20, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್​ಗೆ ಟಿ20 ನಾಯಕತ್ವವ ಹಸ್ತಾಂತರಿಸಲಾಗಿದ್ದು, ಕೆಎಲ್ ರಾಹುಲ್​ಗೆ ಏಕದಿನ ಸರಣಿ ನಾಯಕತ್ವ, ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾಗೆ ನಾಯಕತ್ವ ವಹಿಸಲಾಗಿದೆ. ಟಿ20 ಮತ್ತು …

Read More »

ವುಮೆನ್​ ಸೇಫ್ಟಿ’ ಆಯಪ್; ಅಪಾಯದ ವೇಳೆ​ ಒಂದು ಬಟನ್​ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ

ವುಮೆನ್​ ಸೇಫ್ಟಿ’ ಆಯಪ್; ಅಪಾಯದ ವೇಳೆ​ ಒಂದು ಬಟನ್​ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ ಬೆಂಗಳೂರು: ನೀವೇನಾದರೂ ಅಪರಿಚಿತ ಸ್ಥಳಕ್ಕೆ ಹೋದಾಗ ಅಪಾಯವಿದೆ ಎಂದು ನಿಮಗೆ ಅನ್ನಿಸಿದೆಯಾ? ಪ್ರಯಾಣದ ವೇಳೆ ಸಹ ಪ್ರಯಾಣಿಕರು ಕಿರುಕುಳ ಕೊಡುತ್ತಿದ್ದಾರೆ ಅನ್ನೋದು ಮನವರಿಕೆಯಾದರೆ ಕೂಡಲೇ ಪ್ಯಾನಿಕ್ ಬಟನ್ ಒತ್ತಿದರೆ ಸಾಕು ನೀವು ಕಳುಹಿಸಬೇಕಾದ ವ್ಯಕ್ತಿಗಳಿಗೆ ಅಲರ್ಟ್ ಸಂದೇಶ ರವಾನೆಯಾಗುವಂತಹ ನೂತನ ಅಪ್ಲಿಕೇಶನ್​ವೊಂದನ್ನು ಕಾಲೇಜು ವಿದ್ಯಾರ್ಥಿನಿಯೊಬ್ಬರು ಅಭಿವೃದ್ಧಿ ಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಟೆಕ್​ ಸಮ್ಮಿಟ್​ನಲ್ಲಿ …

Read More »

2ಎ ಮೀಸಲಾತಿ ಫೈಟ್.. ಡಿ.5ರಂದು ಬೆಳಗಾವಿಯಲ್ಲಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ – ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ …

Read More »

ಚಳಿಗಾಲ ಅಧಿವೇಶನ ಮುಗಿಯುವವರೆಗೂ ಎಂಇಎಸ್​ ಮುಖಂಡರನ್ನು ಗಡಿಪಾರು ಮಾಡಬೇಕು:ಕರವೇ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಮಹಾಮೇಳಾವ್​ ನಡೆಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಇದು ಗಡಿ ನಾಡ ಕನ್ನಡಿಗರ ಕಣ್ಣು ಕೆಂಪಾಗಿಸಿದೆ ಯಾವುದೇ ಕಾರಣಕ್ಕೂ ಮಹಾಮೇಳಾವ್ ನಡೆಸಲು ಅನುಮತಿ ನೀಡಬಾರದು ಜೊತೆಗೆ ಎಂಇಎಸ್ ಸಂಘಟನೆ ಬ್ಯಾನ್ ಮಾಡಿ ಗಡಿಪಾರು ಮಾಡಬೇಕು ಎಂದು ಕರವೇ ಶಿವರಾಮೇಗೌಡ ಬಣ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಎಂಇಎಸ್ ಪದೇ ಪದೆ ಗಡಿಯಲ್ಲಿ ಖ್ಯಾತೆ ತೆಗೆಯುವ ಕೆಲಸ ಮಾಡುತ್ತಲೇ ಬರುತ್ತಿದೆ.‌ ಇತ್ತೀಚೆಗಷ್ಟೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ …

Read More »

2ಎ ಮೀಸಲಾತಿಗೆ ಆಗ್ರಹಿಸಿ ಡಿ.5ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರ ಸಭೆ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ – ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಆದ್ದರಿಂದ, ಅಧಿವೇಶನದಲ್ಲಿ ಭಾಗವಹಿಸುತ್ತೇನೆ:

ಬೆಂಗಳೂರು: ತನ್ನ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ತೀವ್ರ ಅಸಮಾಧಾನಗೊಂಡು ಸಿಎಂಗೆ ಪತ್ರ ಬರೆದಿದ್ದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನಕ್ಕೆ ಬುಧವಾರ ರಾತ್ರಿ ಪಾಟೀಲರನ್ನು ಕರೆಯಿಸಿಕೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತನಾಡಿ ಸಮಸ್ಯೆ ಪರಿಹರಿಸಿದರು. ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು. …

Read More »

ಪಂಚರಾಜ್ಯ ಚುನಾವಣೆಯಲ್ಲಿ ಕನಿಷ್ಠ ಮೂರು ಕಡೆ ಅಧಿಕಾರ ಹಿಡಿಯುತ್ತೇವೆ : M.B. ಪಾಟೀಲ್​

ವಿಜಯಪುರ : ಪಂಚರಾಜ್ಯ ಚುನಾವಣೆಯಲ್ಲಿ ಐದು ರಾಜ್ಯಗಳ ಪೈಕಿ ಕನಿಷ್ಠ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತೇವೆ. ನಾಲ್ಕನೇ ಕಡೆಯೂ ಅಧಿಕಾರ ಹಿಡಿಯೋ ಸಾಧ್ಯತೆ ಇದೆ. ಎಕ್ಸಿಟ್ ಪೋಲ್ ನೋಡಿ ಗೊತ್ತಾಗುತ್ತದೆ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದ್ದಾರೆ. ಪಂಚ ರಾಜ್ಯ ಚುನಾವಣೆ ವಿಚಾರದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗುತ್ತಾ? ಎಂಬ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದು ನೀವೇ …

Read More »

ಯಾವುದನ್ನೂ ಉಚಿತವಾಗಿ ನೀಡಬಾರದು: ನಾರಾಯಣ ಮೂರ್ತಿ

ಬೆಂಗಳೂರು: ”ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳನ್ನು ಪಡೆಯುವ ಜನರು ಸಮಾಜದ ಒಳಿತಿಗಾಗಿ ಮತ್ತೆ ಕೊಡುಗೆ ನೀಡಬೇಕು” ಎಂದು ಇನ್ಫೋಸಿಸ್ ಸಹಸಂಸ್ಥಾಪಕರಾದ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.   ಬೆಂಗಳೂರು ಟೆಕ್ ಸಮ್ಮಿಟ್ 2023ರ 26ನೇ ಆವೃತ್ತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇಕಡಾ 20ಕ್ಕೆ ತಲುಪಿದರೆ, ನಾವು ನಿಮಗೆ ಉಚಿತ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ನೀವು ಹೇಳಬೇಕು. ಇದರಿಂದ …

Read More »

ಭ್ರೂಣ ಹತ್ಯೆ ಮಾಡಿದವರು ಜೊತೆಗೆ ಭ್ರೂಣ ಹತ್ಯೆಗೆ ಮಾಡಿಸಿಕೊಂಡವರು ಕಠಿಣ ಶಿಕ್ಷೆ ಆಗಬೇಕು : ಸಚಿವ ವೆಂಕಟೇಶ್

ಚಾಮರಾಜನಗರ : ಭ್ರೂಣ ಹತ್ಯೆಯಂತಹ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು. ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು. ಇನ್ನು ಚೀನಾದಲ್ಲಿ ನ್ಯುಮೋನಿಯಾ ಸೋಂಕು ಹೆಚ್ಚಳವಾದ ಸಂಬಂಧ …

Read More »