Breaking News

ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಶೀಘ್ರದಲ್ಲಿ ನನಸಾಗಲಿದೆ : ಬಿವೈ ವಿಜಯೇಂದ್ರ

ಬೆಂಗಳೂರು : ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆಯು ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ.ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಹೇಳಿದ್ದಾರೆ.   ಸೋಮವಾರ ನಗರದಲ್ಲಿ ರಾಮೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರತಿಯೊಂದು …

Read More »

ಇಂದು PSI ಮರು ಪರೀಕ್ಷೆ : ಕೇಂದ್ರಗಳ ಸುತ್ತಲೂ ಬಿಗಿ ಬಂದೋ ಬಸ್ತ್

ಬೆಂಗಳೂರು : ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಮೇರೆಗೆ ಇಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್​ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ …

Read More »

ಐದಾರು ವರ್ಷದ ಹೆಣ್ಣು ಕಡವೆ ಸಾವು

ಶಿರಸಿ: ಐದಾರು ಪ್ರಾಯದ ಹೆಣ್ಣು‌ ಕಡವೆಯೊಂದನ್ನು‌ ಗಾಯಗೊಂಡು ಮೃತಪಟ್ಟ ಘಟನೆ ಶಿರಸಿ ವಲಯ ಅರಣ್ಯ ವ್ಯಾಪ್ತಿಯ ಹಳದೋಟದಲ್ಲಿ ನಡೆದಿದೆ. ಘಟನಾ ಸ್ಥಳಕೆ ಸಹಾಯಕ ಅರಣ್ಯ‌ ಸಂರಕ್ಷಣಾಧಿಕಾರಿ ಹರೀಶ ಸಿ.ಎನ್., ಶಿರಸಿ ವಲಯಾರಣ್ಯಾಧಿಕಾರಿ ಶಿವಾನಂದ ನಿಂಗಾಣಿ ಭೇಟಿ‌ ನೀಡಿ ಪರಿಶೀಲಿಸಿದರು.   ಗಂಡು ಕಡವೆ ಹೆಣ್ಣು ಕಡವೆಯನ್ನು ಕೊಂಬಿನಿಂದ ತಿವಿದು ಗಾಯಗೊಳಿಸಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More »

ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು, ಇಂದು ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನವಾಗಿದೆ ಎಂದು …

Read More »

ರಾಮರಾಜ್ಯದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗಿದೆ:

ರಾಮರಾಜ್ಯದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಬೆಂಗಳೂರು: ರಾಮರಾಜ್ಯದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಶತಮಾನಗಳ ಕನಸು ಇಂದು ನನಸಾಗುತ್ತಿದ್ದು, ಅಯೋಧ್ಯೆ ತುಂಬಾ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅಯೋಧ್ಯೆಯ ಎಲ್ಲ ಬೀದಿ-ಬೀದಿಗಳು ತಳಿರು ತೋರಣಗಳಿಂದ ಅಲಂಕೃತಗೊಂಡಿದ್ದು, ಅಯೋಧ್ಯೆ ಮಧುವಣಗಿತ್ತಿಯಂತೆ ಸಿದ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉಪ …

Read More »

ನರೇಗಾ ಯೋಜನೆಯಲ್ಲಿ ಅಕ್ರಮ‌ ಕೇಸ್​: ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತು

ರಾಯಚೂರು, ಜನವರಿ 20: ನರೇಗಾ ಯೋಜನೆಯಲ್ಲಿ 150 ಕೋಟಿಗೂ ಅಧಿಕ ಹಣ ಅಕ್ರಮ‌ ಕೇಸ್​ಗೆ ಸಂಬಂಧಿಸಿದಂತೆ ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತುಗೊಳಿಸಿ ರಾಯಚೂರು ಜಿ.ಪಂ.CEOಪಿ.ರಾಹುಲ್ ತುಕಾರಾಂ ಆದೇಶ ಹೊರಡಿಸಿದ್ದಾರೆ. ದೇವದುರ್ಗ ತಾಲೂಕಿನ ಒಟ್ಟು 33 ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ಪ್ರಕರಣ ನಡೆದಿದೆ. 2020ರಿಂದ 2023ರ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣ ನಡೆದಿತ್ತು. ಲೆಕ್ಕ ಪರಿಶೋಧನಾ ಸಮಿತಿಯ ತನಿಖೆಯಿಂದ ಅಕ್ರಮ ಬಹಿರಂಗವಾಗಿತ್ತು. ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ …

Read More »

ಬೆಳಗಾವಿ ನಂತರ ಮೈಸೂರಿನಲ್ಲಿ ಶ್ರೀರಾಮೋತ್ಸವಕ್ಕೆ ಬ್ರೇಕ್; ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು, ಜ.21:ಅಯೋಧ್ಯೆ ಶ್ರೀರಾಮ ಮಂದಿರ(Ayodhya Ram Mandir) ನಾಳೆ ಲೋಕಾರ್ಪಣೆಗೊಳ್ಳಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಐದು ದಶಕಗಳ ಕನಸು ಈಡೇರುತ್ತಿರುವ ಹಿನ್ನೆಲೆ ಕೋಟ್ಯಂತರ ಹಿಂದೂಗಳು ಶ್ರೀರಾಮೋತ್ಸವ ನಡೆಸಲು ಮುಂದಾಗಿದ್ದಾರೆ. ಕರ್ನಾಟಕದಲ್ಲೂ ಹಬ್ಬ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ, ಬೆಳಗಾವಿಯಲ್ಲಿ ಆಯೋಜಿಸಿದ್ದ ಶೋಭಾಯಾತ್ರೆಗೆ ಕೋರ್ಟ್ ಬ್ರೇಕ್ ಹಾಕಿದ ಬೆನ್ನಲ್ಲೇ ಮೈಸೂರಿನಲ್ಲೂ (Mysuru) ಮೆರವಣಿಗೆಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ನಾಳೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಇಂದು ಮೈಸೂರಿನಲ್ಲಿ ಶ್ರೀರಾಮೋತ್ಸವ ಆಯೋಜಿಸಲಾಗಿತ್ತು. ಗಣಪತಿ ಸಚ್ಚಿದಾನಂದ ಆಶ್ರಮದ …

Read More »

ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ. Raichur Student made a drawing of shri rama in different way

Read More »

ಹಳೆ ವೈಷಮ್ಯ ಹಿನ್ನೆಲೆ ವಿಜಯಪುರದಲ್ಲಿ ಗುಂಡಿನ ದಾಳಿ: ಓರ್ವನಿಗೆ ಗಾಯ

ವಿಜಯಪುರ, ಜನವರಿ 22: ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕೊಲ್ಹಾರ (Kolhar) ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಂಟ್ರೀ ಪಿಸ್ತೂಲ್​ನಿಂದ ಗುಂಡಿನ ದಾಳಿ (Shoot Out) ಮಾಡಲಾಗಿದೆ. ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ ಆರೋಪಿ. ಘಟನೆಯಲ್ಲಿ ಗಾಯಗೊಂಡ ರಾಜು ನ್ಯಾಮಗೊಂಡ ಅವರನ್ನುವಿಜಯಪುರ(Vijayapura) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಸಂಬಂಧಿಕರಾಗಿದ್ದು ವೈಷಮ್ಯ ಹೊಂದಿದ್ದರು ಎನ್ನಲಾಗಿದೆ. ಆರೋಪಿ ಶಿವು ಜಗದಾಳೆ ಸಂಬಂಧಿ ರಾಜು ನ್ಯಾಮಗೊಂಡ ಮೇಲೆ ಮೂರು …

Read More »

ಕರ್ನಾಟಕದ ಕೆಲವೆಡೆ ಗರಿಷ್ಠ ತಾಪಮಾನ ಹೆಚ್ಚಳ, ಉತ್ತರ ಒಳನಾಡಿನಲ್ಲಿ ಅಧಿಕ ಚಳಿ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, …

Read More »