Breaking News

ಮುಂದಿನ ಐಪಿಎಲ್‌ನಲ್ಲಿ ಆಡಲಿದ್ದಾರೆ ಧೋನಿ; ವಿಸಿಲ್ ಪೋಡೆಂದ ಸಿಎಸ್‌ಕೆ ಫ್ಯಾನ್ಸ್

ಚೆನ್ನೈ(ತಮಿಳುನಾಡು): ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಖುಷಿ ಸಂಗತಿ ಹೊರಬಿದ್ದಿದೆ. ಧೋನಿ 2024ರ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಖಚಿತಪಡಿಸಿದೆ. ಮುಂದಿನ ಸೀಸನ್‌ಗಾಗಿ ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಯಲಿದೆ. ನವೆಂಬರ್ 26ರೊಳಗೆ ತಂಡ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಎಲ್ಲಾ ತಂಡಗಳಿಗೆ ಈ ಹಿಂದೆ ಸೂಚಿಸಿತ್ತು. ಅದರಂತೆ, ಚೆನ್ನೈ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ನಿರೀಕ್ಷೆಯಂತೆ ಧೋನಿ ಹೆಸರೂ ಇದೆ. ಇದರೊಂದಿಗೆ ಮುಂದಿನ …

Read More »

ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಐವರು ಆತ್ಮಹತ್ಯೆ:

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಮುಖ್ಯವಾಗಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಅಂತಾ ಗೃಹ ಸಚಿವರು ತಿಳಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಮೃತದೇಹಗಳ ಅಂತಿಮ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತಪಟ್ಟಿರುವ ಕುಟುಂಬದ ಯಜಮಾನ ಗರೀಬ್ ಸಾಬ್ ಎಂಬವರು ಶಿರಾದಿಂದ ತುಮಕೂರು ನಗರಕ್ಕೆ ವಲಸೆ ಬಂದಿದ್ದರು. …

Read More »

ರಾಯಚೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ

ರಾಯಚೂರು: ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಭೀಕರವಾಗಿ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕ‌ ಉಪ್ಪೇರಿ ಗ್ರಾಮದಲ್ಲಿ ನಡೆದಿದೆ. ಸುನಿತಾ (28) ಪತಿಯ ಕೈಯಿಂದ ಹತ್ಯೆಯಾದ ಗೃಹಿಣಿಯಾಗಿದ್ದು, ಬಸವರಾಜ ಕಂಬಳಿ ಕೊಲೆ ಮಾಡಿರುವ ಪತಿ. ಬಸವರಾಜ ಹಾಗೂ ಸುನಿತಾ ಮನಸಾರೆ ಪರಸ್ಪರ ಪ್ರೀತಿಸಿ 2014ರಲ್ಲಿ ಸಬ್‌ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದರು. ಭಾನುವಾರದಂದು ಸಂಜೆ ಸುನಿತಾ ತಮ್ಮ ಹೊಲದಲ್ಲಿ ನೀರು ಕಟ್ಟುತ್ತಿದ್ದರು. ಆಗ ಪತಿ ಬಸವರಾಜ …

Read More »

ಅಪಾಯಕಾರಿ ಟ್ರಾನ್ಸ್‌ಫಾರ್ಮರ್​ ವೈರ್​ಗಳನ್ನು ಸರಿಪಡಿಸುವಂತೆ ಹೆಸ್ಕಾಂಗೆ ಒತ್ತಾಯ

ಬೆಳಗಾವಿ: ಬೆಳಗಾವಿಯ ಎಚ್.ಡಿ.ಕುಮಾರಸ್ವಾಮಿ ಲೇಔಟ್​ನಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್​ಗಳ ವೈರ್​ಗಳು ನೇತಾಡುತ್ತಿವೆ. ಈ ಪ್ರದೇಶದಲ್ಲಿ ಜನರು ಜೀವಭಯದಲ್ಲಿ ಸಂಚರಿಸುತ್ತಿದ್ದಾರೆ. ಅರೆಕ್ಷಣ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚು ಅನ್ನೋದು ಜನರ ಆತಂಕ. ಇಲ್ಲಿ 15 ವಿದ್ಯುತ್​ ಟ್ರಾನ್ಸ್‌ಫಾರ್ಮರ್​ಗಳನ್ನು ಅಳವಡಿಸಲಾಗಿದ್ದು, ಅವುಗಳು ನೆಲದಿಂದ ಕೇವಲ ಎರಡು ಅಡಿಯಷ್ಟು ಮಾತ್ರ ಎತ್ತರದಲ್ಲಿವೆ. ಟಿಸಿ ಬಾಕ್ಸ್​ನ ಬಾಗಿಲುಗಳು ತೆರೆದುಕೊಂಡಿದ್ದು, ವೈರ್​ಗಳು ನೇತಾಡುತ್ತಿವೆ. ಟಿಸಿ ಪಕ್ಕದ ಕಟ್ಟಡದಲ್ಲೇ ಅಂಗಡಿ, ಆಸ್ಪತ್ರೆಯೂ ಇದ್ದು, ನೂರಾರು ಜನ ನಿತ್ಯ ಈ …

Read More »

ಸಿದ್ದರಾಮಯ್ಯನವರ ಜನತಾ ದರ್ಶನ ಜನಸ್ಪಂದನಕ್ಕೆ ಹರಿದು ಬಂದ ಜನ

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯುತ್ತಿರುವ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಜನಸಮೂಹವೇ ಹರಿದುಬಂದಿದೆ. ಅಹವಾಲು ಸಲ್ಲಿಸಲು ಬೆಳಿಗ್ಗೆಯಿಂದಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದು, ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡು ಸರ್ಕಾರಿ ಕದ ತಟ್ಟುತ್ತಿರುವ ಸಾರ್ವಜನಿಕರು ನೇರವಾಗಿ ಸಿಎಂ ಬಳಿ ಪರಿಹಾರಕ್ಕೆ ಮೊರೆ ಇಡುತ್ತಿದ್ದಾರೆ. ಸಿಎಂ ಸಹನೆಯಿಂದ ಜನರ ಸಮಸ್ಯೆ ಆಲಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ವಿಶೇಷಚೇತನರು, ಹಿರಿಯ ನಾಗರಿಕರು, ಮಹಿಳೆಯರು …

Read More »

ಅಡಿಕೆ ದೋಚುತ್ತಿದ್ದ ವೇಳೆ ಆರೋಪಿಯನ್ನು ಹಿಡಿದ ಸ್ಥಳೀಯರು

ಕಡಬ (ದಕ್ಷಿಣ ಕನ್ನಡ) : ಅಡಿಕೆಯನ್ನು ಕದ್ದು ವಾಹನಕ್ಕೆ ತುಂಬಿಸುತ್ತಿರುವುದನ್ನು ಕಂಡು ಅದನ್ನು ತಡೆದ ವೇಳೆ ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೋರ್ವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಕದ್ದ ಅಡಿಕೆಯೊಂದಿಗೆ ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಕಳ್ಳನನ್ನು ಅಡಿಕೆ ಚೀಲಗಳ ಮಾಲೀಕ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಕಡಬ ನಿವಾಸಿ …

Read More »

ಅಕ್ರಮ ಮರಳು ದಂಧೆಕೋರರ ಅಟ್ಟಹಾಸ: ಕಂದಾಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

ಶಹದೋಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದಾರೆ. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಹೋದ ಕಂದಾಯ ಇಲಾಖೆಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲಾಗಿದೆ. ಪ್ರಸನ್ನ ಸಿಂಗ್​ (45) ಎಂಬುವವರೇ ಹತ್ಯೆಗೀಡಾದ ಅಧಿಕಾರಿ ಎಂದು ಎಂದು ಗುರುತಿಸಲಾಗಿದೆ. ಇಲ್ಲಿನ ಗೋಪಾಲ್‌ಪುರ ಪ್ರದೇಶದ ಸೋನ್ ನದಿಯ ಶನಿವಾರ ಮಧ್ಯರಾತ್ರಿ ನಡೆದ ಈ ಘಟನೆ ನಡೆದಿದೆ. ಕಂದಾಯ ಇಲಾಖೆಯಲ್ಲಿ ಪಟ್ವಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ …

Read More »

ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ತುಮಕೂರು: ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ನಗರದ ಸದಾಶಿವನಗರದ ಗರೀಬ್‌ಸಾಬ್‌ (32), ಸುಮಯಾ (30), ಹಜೀರಾ, ಮಹ್ಮದ್‌ ಶುಭಾನ್‌, ಮಹ್ಮದ್‌ ಮುನೀರ್‌ ಮೃತರು. ಮೃತರೆಲ್ಲರುವ ಶಿರಾ ತಾಲೂಕು ಚಿಕ್ಕನಹಳ್ಳಿಯ ನಿವಾಸಿಗಳು ಎನ್ನಲಾಗಿದ್ದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದರು.   ಜೀವನ ನಿರ್ವಹಣೆಗೆ ಕಬಾಬ್‌ ಅಂಗಡಿ ನಡೆಸುತ್ತಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ಬಂಧುಗಳಲ್ಲಿ ಆತಂಕಕ್ಕೆ ದೂಡಿದೆ. ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ …

Read More »

ಆತ್ಮಹತ್ಯೆ ತಡೆಗೆ HELP LINE _82779-46600ಗೆ ಕರೆ ಮಾಡಿ

ಬೆಂಗಳೂರು: ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಡೆಗಟ್ಟಲು ನಗರ ಪೊಲೀಸರು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಿದ್ದಾರೆ. ಆಗ್ನೇಯ ವಿಭಾಗದಲ್ಲಿ ವೀ ಕೇರ್ (ನಾವು ಕಾಳಜಿ ವಹಿಸುತ್ತೆವೆ) ಸಹಾಯವಾಣಿ 82779 46600 ಸ್ಥಾಪಿಸಲಾಗಿದೆ. ಆರು ಮಹಿಳಾ ಪೊಲೀಸರನ್ನು ನೇಮಕ ಮಾಡಲಾಗಿದೆ. ಪಾಳಿಯಲ್ಲಿ ದಿನ 24*7 ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ನಿಮ್ಹಾನ್ಸ್ ವೈದ್ಯರಿಂದ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚನೆ ಮಾಡುವವರು ಈ ಕೂಡಲೇ ವೀ ಕೇರ್ ಹೆಲ್ಪ್‌ಲೈನ್‌ಗೆ ಕರೆ ಮಾಡಬಹುದು, ವಾಟ್ಸ್‌ಆಯಪ್ ಸಂದೇಶ, …

Read More »

668 ಕೋಟಿ ನಿರ್ಭಯಾ ನಿಧಿಯಲ್ಲಿ ನಿರ್ಮಾಣ; ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ಥಾಪಿಸಲಾದ ‘ಸೇಫ್ ಸಿಟಿ ಕಮಾಂಡ್ ಸೆಂಟರ್’ (ಸುರಕ್ಷಾ ನಗರ ಕಮಾಂಡ್ ಕೇಂದ್ರ) ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಸೌಲಭ್ಯಗಳ ಪ್ರಯೋಜನಗಳು ಜನರಿಗೆ ತಲುಪಬೇಕು ಎಂದರು.   ಅಪರಾಧ ಹೆಚ್ಚಳ ಒಪ್ಪಿಕೊಂಡ ಸಿಎಂ: ಬೆಂಗಳೂರಿನಲ್ಲಿ ಸರಗಳ್ಳತನ, ಮಹಿಳೆಯರ ಮೇಲಿನ ಹಿಂಸಾತ್ಮಕ ಅಪರಾಧಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಒಪ್ಪಿಕೊಂಡ ಅವರು, ‘ನಿರ್ಭಯಾ ನಿಧಿ’ ಬಳಸಿ 668 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಕೇಂದ್ರವನ್ನು ಸರಿಯಾಗಿ …

Read More »