ಬಾಗಲಕೋಟೆ: ಗ್ರಾಮೀಣ ಕ್ರೀಡೆಯಾದ ಸೈಕಲ್ ಸವಾರಿ ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಬಾಗಲಕೋಟೆ ಸಹ ಸೈಕ್ಲಿಸ್ಟ್ಗಳ ತವರು ಜಿಲ್ಲೆಯಾಗಿ ಪರಿಣಮಿಸಿದೆ. ಇಲ್ಲಿನ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕಿದೆ ಎಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆನವನಗರದ ಯುನಿಟ್-2ರಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಸೈಕ್ಲಿಂಗ್ ಚಾಂಪಿಯನ್‍ಶಿಪ್ ಪಂದ್ಯಾವಳಿಯ ಎರಡನೇ ದಿನದ(ಶನಿವಾರ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಬಾಗಲಕೋಟೆ ಜಿಲ್ಲೆಯು ತನ್ನದೇ ಆದ ವಿವಿಧ …
Read More »ತಪ್ಪಿಸಿಕೊಳ್ಳಲು ಪ್ರಯತ್ನ ನಟೋರಿಯಸ್ ರೌಡಿಶೀಟರ್ಗೆ ಗುಂಡೇಟು
ಹುಬ್ಬಳ್ಳಿ: ಸ್ಥಳ ಮಹಜರು ಮಾಡಲು ಕರೆತಂದ ವೇಳೆ ಪಿಎಸ್‌ಐ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ನಟೋರಿಯಸ್ ರೌಡಿಶೀಟರ್ ಸತೀಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಗುಂಡೇಟು ತಿಂದ ರೌಡಿಶೀಟರ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ, ನಟೋರಿಯಸ್ ರೌಡಿಶೀಟರ್ ಸತೀಶನನ್ನು ಕರೆದುಕೊಂಡು ಸ್ಥಳ ಮಹಜರಿಗೆ ಹೋದಾಗ, ಆತ ಪಿಎಸ್‌ಐ …
Read More »ಮೈಸೂರು: ಮಹಿಳೆ ಬಲಿ ಪಡೆದ ಹುಲಿ ಸೆರೆಗೆ 3 ಸಾಕಾನೆ, 207 ಸಿಬ್ಬಂದಿಯಿಂದ ಕಾರ್ಯಾಚರಣೆ
ಮೈಸೂರು: ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದ ಬೆಳ್ಳೂರು ಹುಂಡಿ ಜಮೀನಿನಲ್ಲಿ ದನಗಾಹಿ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಒಳಗೊಂಡಂತೆ 207 ಸಿಬ್ಬಂದಿಯೊಂದಿಗೆ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಡ್ರೋನ್ ಮೂಲಕವೂ ಕಾರ್ಯಾಚರಣೆ: ಹುಲಿ ಚಲನವಲನಗಳ ಪತ್ತೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ವಲಯದಲ್ಲಿ ಕಾರ್ಯಾಚರಣೆ ಚುರುಕುಗೊಂಡಿದೆ. ಇದಕ್ಕಾಗಿ ಪಾರ್ಥ, ರೋಹಿತ್, ಹಿರಣ್ಯ ಎಂಬ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಹುಲಿ …
Read More »ಎಕ್ಸ್ ಅಂಡ್ ವೈ’ ಹಿಂದೆ ಬಿದ್ದ ರಾಮಾ ರಾಮಾ ರೇ ನಿರ್ದೇಶಕ ಸತ್ಯ ಪ್ರಕಾಶ್
ರಾಮಾ ರಾಮಾ ರೇ ನಿರ್ದೇಶಕ ಡಿ ಸತ್ಯ ಪ್ರಕಾಶ್ ಅವರು ‘ಎಕ್ಸ್ ಅಂಡ್ ವೈ’ ಎಂಬ ಚಿತ್ರದ ಮೂಲಕ ಮತ್ತೆ ಸಿನಿಮಾ ಅಖಾಡಕ್ಕೆ ಇಳಿದಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ. ಸತ್ಯ ಪ್ರಕಾಶ್ ಚಿತ್ರ ಸೆಟ್ಟೇರಿತು ಎಂದರೆ ಹಲವು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದೇ ರೀತಿ ಸತ್ಯ ಪ್ರಕಾಶ್ ಕೂಡ ಕಂಟೆಂಟ್ ಹಾಗೂ ಸಂದೇಶ ಇರುವ ಚಿತ್ರಗಳನ್ನು …
Read More »ಗುಜರಾತ್ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ?
ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, ಗುಜರಾತ್ ಟೈಟಾನ್ಸ್ ನಾಯಕತ್ವವನ್ನು ಬಿಟ್ಟುಕೊಡಲು ಅವರು ಸಿದ್ಧರಿದ್ದೀರಾ?, ಮೊದಲ ಸೀಸನಲ್ಲೇ ಟ್ರೋಫಿ ತಂದುಕೊಟ್ಟಿದ್ದ ನಾಯಕನನ್ನು ಕೈಬಿಡಲು ಗುಜರಾತ್ ಒಪ್ಪಿಕೊಂಡಿದೆಯೇ? ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಟ್ರೇಡಿಂಗ್ ವಿಂಡೋ ಮುಗಿಯಲು ಇನ್ನೊಂದು ದಿನ ಬಾಕಿ ಇರುವಂತೆಯೇ ಹಾರ್ದಿಕ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ಗೆ ಮರಳಲಿದ್ದಾರೆ ಎಂಬ ವರದಿಗಳಿವೆ. ಆದರೆ …
Read More »ಪಿಎಚ್‌ಡಿ ಪಡೆದ ಬುಡಕಟ್ಟು ಸಮುದಾಯದ ಮೊದಲ ಯುವತಿ ಈ ಎಸ್.ಆರ್. ದಿವ್ಯ
ಮೈಸೂರು: ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ವಾಸಿಸುತ್ತಿರುವ ಪಣಿಯನ್ ಬುಡಕಟ್ಟಿನ ಸಮುದಾಯದ ಯುವತಿಯೊಬ್ಬರು ಮೊದಲ ಬಾರಿಗೆ ಡಾಕ್ಟರೇಟ್ ಪದವಿ ಪಡೆದು ಹಿರಿಮೆಗೆ ಪಾತ್ರರಾಗಿದ್ದಾರೆ. ಎಚ್.ಡಿ. ಕೋಟೆ ತಾಲೂಕಿನ ಡಿ.ಬಿ. ಕುಪ್ಪೆ ಗ್ರಾಪಂ ವ್ಯಾಪ್ತಿಯ ಸೇಬಿನಕೊಲ್ಲಿ ಹಾಡಿ ಪ್ರದೇಶದಲ್ಲಿ ನೆಲೆಸಿರುವ ರಾಜು ಮತ್ತು ಲಕ್ಷ್ಮಿ ದಂಪತಿ ಪುತ್ರಿ ಎಸ್.ಆರ್. ದಿವ್ಯ ಅವರು ತಮ್ಮ ಸಮುದಾಯದಲ್ಲಿಯೇ ಪ್ರಥಮ ಬಾರಿಗೆ ಪಿಎಚ್‌ಡಿ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ. …
Read More »ಮಗಳಿಗೆ 50 ಕೋಟಿ ಮೌಲ್ಯದ ಬಂಗಲೆ ಉಡುಗೊರೆಯಾಗಿ ಕೊಟ್ಟ ಬಿಗ್ ಬಿ
ಜನಪ್ರಿಯ ನಟ ಅಮಿತಾಭ್ ಬಚ್ಚನ್ ತಮ್ಮ ಹೆಸರಿನಲ್ಲಿದ್ದ ಬಂಗಲೆಯನ್ನು ಮಗಳ ಹೆಸರಿಗೆ ಮಾಡಿಸಿದ್ದಾರೆ. ಭಾರತೀಯ ಚಿತ್ರರಂಗದ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ ಅಪಾರ ಬೆಲೆಬಾಳುವ ಆಸ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ತಮ್ಮ ಹೆಸರಿನಲ್ಲಿದ್ದ ಬಂಗಲೆಯನ್ನು ಮಗಳ ಹೆಸರಿಗೆ ಮಾಡಿಸಿದ್ದಾರೆ. ಈಗಾಗಲೇ ನೋಂದಣಿ ಕಾರ್ಯ ಕೂಡ ಮುಗಿದಿದೆ ಎಂಬ ಮಾತು ಕೇಳಿ ಬರುತ್ತಿವೆ. ಅಲ್ಲದೇ ಬಂಗಲೆಯ ಮೌಲ್ಯ ತಿಳಿದ ಅಭಿಮಾನಿಗಳು ಹುಬ್ಬೇರಿಸಿದ್ದಾರೆ ಪ್ರಸಿದ್ಧ ನಟ …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ಶುಶ್ರೂಷಕ: ಅಂಗಾಂಗ ದಾನ ಮಾಡಿ 6 ಜನರಿಗೆ ಜೀವ ತುಂಬಿದ ಶೇಖರ್!
ಎರ್ನಾಕುಲಂ (ಕೇರಳ): ಮೆದುಳು ನಿಷ್ಕ್ರಿಯಗೊಂಡು ಸಾವಿಗೀಡಾದ ತಮಿಳುನಾಡಿನ ಶುಶ್ರೂಷಕರೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಬಾಳಿಗೆ ಹೊಸ ಬೆಳಕು ನೀಡಲಿದ್ದಾರೆ. ಇದರಲ್ಲಿ ಕೊಚ್ಚಿಯ ವ್ಯಕ್ತಿಯೊಬ್ಬರಿಗೆ ಹೃದಯ ಕಸಿ ಮಾಡಲಾಗಿದೆ. ಇನ್ನೂ ಐವರಿಗೆ ವಿವಿಧ ಅಂಗಗಳನ್ನು ವೈದ್ಯರು ಜೋಡಿಸಲಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಶುಶ್ರೂಷಕ ಆಗಿದ್ದ ಸೆಲ್ವಿನ್ ಶೇಖರ್ (36) ಮೆದುಳು ನಿಷ್ಕ್ರಿಯದಿಂದ ಸಾವಿಗೀಡಾದವರು. ಪತ್ನಿಯೂ ನರ್ಸ್ ಆಗಿದ್ದು, ಪತಿಯ ಅಂಗಾಂಗ ದಾನ ಮಾಡಲು …
Read More »ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರಿಂದ ಮನವಿ: ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿ ಮಾಡಿ
ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಯ ಕಾಮಗಾರಿಯನ್ನು ಕೂಡಲೇ ಪ್ರಾರಂಭ ಮಾಡಬೇಕು. ಅಲ್ಲದೇ ರೈತರ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟಗಾರರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, “ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಭೂಪೇಂದ್ರ ಯಾದವ ಅವರ ಜೊತೆ ಮಾತನಾಡಿದ್ದೇನೆ. ಅರಣ್ಯ ಇಲಾಖೆ ಕ್ಲಿಯರನ್ಸ್ ಸೇರಿದಂತೆ ಮೂರು ವಿಷಯ ಇರುವುದರಿಂದ ಕೂಲಂಕಷವಾಗಿ …
Read More »ಕುಟುಂಬ ಪಿಂಚಣಿ ಪಡೆಯಲು ಎರಡನೇ ಪತ್ನಿ ಅರ್ಹರಲ್ಲ: ಹೈಕೋರ್ಟ್
ಬೆಂಗಳೂರು: ಕುಟುಂಬ ಪಿಂಚಣಿಯಂತ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಎರಡನೇ ಪತ್ನಿಯ ಸಂಬಂಧವನ್ನು ಗುರುತಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಹಾನಿಕಾರಕ. ಈ ಪ್ರಕ್ರಿಯೆ ಸರ್ಕಾರಿ ಉದ್ಯೋಗಿಗಳಿಗೆ ಎರಡನೇ ಮದುವೆಗೆ ಒಪ್ಪಿಗೆ ನೀಡಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಪಡೆಯುವ ಅಧಿಕಾರ ಹೊಂದಿದೆ ಎಂದು ತಿಳಿಸಿದೆ. ಪತಿಯ ಕುಟುಂಬ ಪಿಂಚಣಿ ನೀಡಲು ನಿರಾಕರಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು …
Read More »