Breaking News

ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ದನಗಾಹಿ ಮಹಿಳೆ ಕೊಂದು ತಿಂದ ವ್ಯಾಘ್ರ

ಮೈಸೂರು: ಹುಲಿ ದಾಳಿಗೆಮತ್ತೊಬ್ಬ ದನಗಾಹಿ ಮಹಿಳೆ ಬಲಿಯಾಗಿರುವ ಘಟನೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮದಲ್ಲಿ ಜರುಗಿದೆ. ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ರತ್ನಮ್ಮ (52) ಮೃತ ದನಗಾಹಿ ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ರತ್ನಮ್ಮ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ಮಾಡಿ ಹೊತ್ಯೊಯ್ದಿದೆ. ರತ್ನಮ್ಮನರ ಕಿರುಚಾಟ …

Read More »

ಬಿಆರ್​ಎಸ್​ಗೆ ಹರಿದು ಬಂದ ₹683 ಕೋಟಿ ದೇಣಿಗೆ: ಇತರ ಪ್ರಾದೇಶಿಕ ಪಕ್ಷಗಳ ದೇಣಿಗೆ ಎಷ್ಟು?

ಹೈದರಾಬಾದ್ (ತೆಲಂಗಾಣ): ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷಕ್ಕೆ ಭರ್ಜರಿ ದೇಣಿಗೆ ಬಂದಿದೆ. 2022-23ನೇ ಸಾಲಿನಲ್ಲಿ ಬಿಆರ್‌ಎಸ್​ಗೆ ಹಲವಾರು ಮೂಲಗಳಿಂದ ವಿವಿಧ ರೂಪಗಳಲ್ಲಿ 683 ಕೋಟಿ (683,06,70,500 ರೂ.) ರೂಪಾಯಿಗೂ ಅಧಿಕ ದೇಣಿಗೆ ಸಂದಾಯವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಮೂಲಕ ಕೆ. ಚಂದ್ರಶೇಖರ್​ ರಾವ್ ನೇತೃತ್ವದ ಬಿಆರ್‌ಎಸ್​ ದೇಶದ ಪ್ರಾದೇಶಿಕ ಪಕ್ಷಗಳ ಪೈಕಿ ಅತ್ಯಧಿಕ ದೇಣಿಗೆ ಸ್ವೀಕರಿಸಿದ ಪಕ್ಷವಾಗಿದೆ. ಬಿಆರ್‌ಎಸ್ …

Read More »

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಅಂಬರೀಶ್ ಹುಟ್ಟೂರಾದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಗೆ ಪತ್ನಿ, ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಕೊಟ್ಟು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಹಿರಿಯ ನಟ ದೊಡ್ಡಣ್ಣ, ರಾಕ್​ಲೈನ್ ವೆಂಕಟೇಶ್ ಸಹ ಭಾಗಿಯಾಗಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇಂದು ಅಂಬರೀಶ್ …

Read More »

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ನಿರ್ಣಯ ಕೈಗೊಳ್ಳಬೇಕು : ಕುರುಬೂರ ಶಾಂತಕುಮಾರ್

ಬೆಳಗಾವಿ: ಇಲ್ಲಿಯವರೆಗೆ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಗಳಲ್ಲಿ ಎಷ್ಟು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಇದರ ಕುರಿತಾಗಿ ಈಗಿನ ಚಳಿಗಾಲ ಅಧಿವೇಶನದ ಮುನ್ನ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ್ ಆಗ್ರಹಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಬರಗಾಲದ ಹಿನ್ನೆಲೆ ರೈತ ಸಮುದಾಯ ಸಂಕಷ್ಟದಲ್ಲಿದೆ. ಅಧಿವೇಶನದಲ್ಲಿ ರೈತರ ಸಂಪೂರ್ಣ ಸಾಲ …

Read More »

ಕರೆದಿದ್ದು ಬರಗಾಲದ ಸಭೆ. ಆದರೆ, ಇಲ್ಲಿ ನಡೆದಿದ್ದೆ ಬೇರೆ

ಧಾರವಾಡ: ಕರೆದಿದ್ದು ಬರಗಾಲದ ಸಭೆ. ಆದರೆ, ಇಲ್ಲಿ ನಡೆದಿದ್ದೆ ಬೇರೆ? ಎಂಬ ಗ್ರಾಪಂ ಅಧ್ಯಕ್ಷನ ಮಾತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಗರಂ ಆಗಬೇಕಾಯಿತು. ಕೃಷಿ ವಿವಿ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಜಿಲ್ಲೆಯ ಬರ ಸಮರ್ಪಕ ನಿರ್ವಹಣೆ ಬಗ್ಗೆ ಸಭೆ ಕರೆದಿದ್ದರು. ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ವೇಳೆ ಗ್ರಾಪಂವಾರು ಸಚಿವ ಲಾಡ್ ಮಾಹಿತಿ ಪಡೆಯುತ್ತಿದ್ದರು. ಈ ವೇಳೆ …

Read More »

ಬೆಂಗಳೂರು ಇನ್ನು ಸೇಫ್ ಸಿಟಿ: ಅತ್ಯಾಧುನಿಕ ಪೊಲೀಸ್ ಕಮಾಂಡ್ ಸೆಂಟರ್ ಲೋಕಾರ್ಪಣೆಗೊಳಿಸಿದ ಸಿಎಂ

ಬೆಂಗಳೂರು: ಸೇಫ್ ಸಿಟಿ ಯೋಜನೆಯಡಿ ನಗರದಲ್ಲಿ ತಲೆ ಎತ್ತಿರುವ ಅತ್ಯಾಧುನಿಕ ಕಮಾಂಡ್ ಸೆಂಟರ್​ನ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋರ್ಕಾಪಣೆಗೊಳಿಸಿದರು. ಕಮಾಂಡ್ ಸೆಂಟರ್​ನಲ್ಲಿ ಅಳವಡಿಸಿರುವ ಕೃತಕ ಬುದ್ಧಿಮತ್ತೆ (ಎಐ) ಕ್ಯಾಮರಾ ಅಳವಡಿಕೆ ಹಾಗೂ ಅದರಿಂದಾಗುವ ಅನುಕೂಲಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ನೂತನ ಕಮಾಂಡ್ ಸೆಂಟರ್​ನಲ್ಲಿ ಡಯಲ್ -112 ಕಾಲ್ ಸೆಂಟರ್, ಮಹಿಳಾ‌ ಸೇಫ್ಟಿ ಲ್ಯಾಂಡ್ ಕಮಾಂಡ್ ಸೆಂಟರ್​ನಲ್ಲಿ ಅಳವಡಿಸಲಾಗಿರುವ ವಿವಿಧ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದರು. …

Read More »

ಗೂಡ್ಸ್ ಆಟೋಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿದ ತರಕಾರಿ ವ್ಯಾಪಾರಸ್ಥ

ಮೈಸೂರು: ಸಾಮಾನ್ಯವಾಗಿ ಮನೆ, ದೊಡ್ಡ ದೊಡ್ಡ ಮಾಲ್​ಗಳು, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವುದನ್ನು ನೋಡಿದ್ದೇವೆ. ಆದರೆ, ಮೈಸೂರಿನ ತರಕಾರಿ ವ್ಯಾಪಾರಸ್ಥರೊಬ್ಬರು ತಮ್ಮ ಗೂಡ್ಸ್ ಆಟೋಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದಾರೆ. ಇಷ್ಟಕ್ಕೂ ಅವರು ಏಕೆ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಈ ವರದಿಯಲ್ಲಿದೆ. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಎದುರಿಗೆ ಇರುವ ರಸ್ತೆಯ ಪಕ್ಕದಲ್ಲಿ. ಗೂಡ್ಸ್ ಆಟೋದಲ್ಲಿ ಅವರೆಕಾಯಿ, ತೊಗರಿಕಾಯಿ, ಕಡ್ಲೆಕಾಯಿ ಸೇರಿದಂತೆ ಆಯಾ ಋತುಮಾನಗಳಲ್ಲಿ ಬೆಳೆಯುವ ತರಕಾರಿಗಳನ್ನು ಹುಣಸೂರಿನ …

Read More »

13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಒ

ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ ವ್ಯಕ್ತಿಯಲ್ಲಿ 13 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.   ಘಟನೆಯ ಹಿನ್ನೆಲೆ: ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದಲ್ಲಿ ಒಟ್ಟು 42 ಸೆಂಟ್ಸ್ ಜಮೀನು ಇದ್ದು, ಈ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ತನ್ನ ನೆರೆ ಮನೆಯವರಿಗೆ ಮಾರಾಟ ಮಾಡಲು ಈ ವ್ಯಕ್ತಿಯೊಬ್ಬರು ತೀರ್ಮಾನಿಸಿದ್ದರು. ಈ …

Read More »

ಬೆಂಗಳೂರು: ರಸ್ತೆಯಲ್ಲಿ ಯುವತಿಯ ಬಟ್ಟೆ ಎಳೆದು ಲೈಂಗಿಕ ದೌರ್ಜನ್ಯ, ಆರೋಪಿ ಸೆರೆ

ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಸಮೀಪದಲ್ಲಿಯೇ ಯುವತಿಯ ಬಟ್ಟೆ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. 500 ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ಬಳಿಕ ಬಿನ್ನಿಪೇಟೆ ನಿವಾಸಿ ಹರೀಶ್ (22) ಎಂಬಾತ ಸೆರೆ ಸಿಕ್ಕಿದ್ದಾನೆ. ನವೆಂಬರ್ 6ರಂದು ಘಟನೆ ನಡೆದಿತ್ತು. ಕೂಡ್ಲು ಗೇಟ್ ಸಮೀಪ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ರಾತ್ರಿ 10.40ರ ಸುಮಾರಿಗೆ ಕನಕಪುರ ಮುಖ್ಯ ರಸ್ತೆಯ ಕಡೆ ಇರುವ ಮನೆಗೆ ದ್ವಿಚಕ್ರ …

Read More »

ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್​​ ಪಡೆದಿದ್ದು ನ್ಯಾಯಾಲಯಕ್ಕೆ ಸವಾಲು ಹಾಕುವಂತಿದೆ: ನಾರಾಯಣಸ್ವಾಮಿ

ತುಮಕೂರು: ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್​ ಪಡೆದಿರುವ ಸಚಿವ ಸಂಪುಟ ನಿರ್ಧಾರದ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ಅನುಮತಿ ಕೇಳಿದ್ದರು. ಅದಕ್ಕೆ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ …

Read More »