Breaking News

ಬಾಲ್ಯ ವಿವಾಹ ಅಕ್ಷಮ್ಯ ಅಪರಾಧ-ಡಾ| ಮೈತ್ರೇಯಿಣಿ

ಬೆಟಗೇರಿ: ವಿದ್ಯಾರ್ಥಿ ಜೀವನ ಅಮೂಲ್ಯವಾದದು, ಶಾಲಾ ಮಕ್ಕಳು ಕಲಿಕಾ ಬದುಕು ಸದುಪಯೋಗ ಮಾಡಿಕೊಂಡು ಸಾಧನೆ ಮಾಡಬೇಕು. ಪಾಲಕರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೂಡಿಸಲು ಮೊದಲು ಆದ್ಯತೆ ನೀಡಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ ಎಂದು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಮತ್ತು ಸಾಹಿತಿ ಡಾ| ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.   ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ. 20ರಂದು ನಡೆದ ಮಾತೆಯರ ಸಮಾಗಮ ಹಾಗೂ ಬಾಲ್ಯ …

Read More »

ಮರಳು ತುಂಬಿದ ಟ್ರ್ಯಾಕ್ಟರ್ ತರಬೇಡಿ ಎಂದಿದ್ದಕ್ಕೆ ರೈತರ ಮೇಲೆ ಹಲ್ಲೆ ?

ಹಾವೇರಿ : ಜಮೀನಿನ ಪೈಪ್​ಲೈನ್ ಮೇಲೆ ಮರಳು ಟ್ರ್ಯಾಕ್ಟರ್​ ತರಬೇಡಿ ಎಂದಿದ್ದಕ್ಕೆ ರೈತನ ಮೇಲೆ ಹಲ್ಲೆ ಮಾಡಿರುವ ಆರೋಪ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದಲ್ಲಿ ಕೇಳಿಬಂದಿದೆ. ಹಲ್ಲೆಗೊಳಗಾದ ರೈತನನ್ನ 33 ವರ್ಷದ ಗೋಪಾಲಕೃಷ್ಣ ಐರಣಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಗೋಪಾಲಕೃಷ್ಣ ಅವರು ಆರೋಪಿಸಿದ್ದಾರೆ. ಜಮೀನಿನಲ್ಲಿನ ಪೈಪ್​ಲೈನ್ ಒಡೆಯುತ್ತವೆ. ಮರಳು ತುಂಬಿದ …

Read More »

ಹಳೆ ವಿದ್ಯಾರ್ಥಿಗಳಿಂದ ಶಾಲೆಯ ದುರಸ್ತಿ ಒಂದು ಕೋಟಿ 18 ಲಕ್ಷ ರೂಪಾಯಿ ಹಣ ನೀಡಿದ ಮಾಜಿ ವಿದ್ಯಾರ್ಥಿಗಳು

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಐತಿಹಾಸಿಕ ಹಿನ್ನೆಲೆ ಇರುವ ಗ್ರಾಮ. ಇಲ್ಲಿಯ ಕಾಂತೇಶ ದೇವಸ್ಥಾನ ವಿಶ್ವಪ್ರಸಿದ್ದಿಯಾಗಿದೆ. ಈ ಗ್ರಾಮದಲ್ಲಿ135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ. ಮಳೆಯಿಂದ ಶಾಲೆ ಹಾಳಾಗಲಾರಂಭಿಸಿದೆ. ಪರಿಣಾಮ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಮಳೆಯಿಂದ ಹಾಳಾದ ಶಾಲೆಯೊಳಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹೋಗಲು ಹೆದರಲಾರಂಭಿಸಿದ್ದಾರೆ. ಪರಿಣಾಮ ಶಾಲೆಯ ಅಕ್ಕಪಕ್ಕದಲ್ಲಿದ್ದ ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ …

Read More »

ಆಸ್ತಿ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರವಾಗಿ ಹತ್ಯೆ

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ. ಬಗಡಗೇರಿ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ದಾಸಪ್ಪನವರ ಹತ್ಯೆಯಾದವರು. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ: ಇತ್ತೀಚಿಗೆ, ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ …

Read More »

ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್​​ ನೋಟಿಸ್

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …

Read More »

ಶಾಲೆಯ ಮೊದಲ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ವಿಜಯಪುರ: ಶಾಲೆಯ ಒಂದನೇ ಮಹಡಿಯಿಂದ ಆಯತಪ್ಪಿ ನೀರಿನ ಟ್ಯಾಂಕ್ ಮೇಲೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಇಂಡಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಶಿವಾರಾಜ್ ರೋಡಗಿ ಮೃತಪಟ್ಟ ಬಾಲಕ.   ಮೆಟ್ಟಿಲಿನ ಮೇಲಿಂದ ಬಿದ್ದ ತಕ್ಷಣ ಬಾಲಕ ಶಿವಾರಾಜ್​ನನ್ನು ಇಂಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಆದರೆ, ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಆಸ್ಪತ್ರೆಗೆ ತಂದ ವಿಷಯ …

Read More »

ರಾಜಕೀಯ, ಜಾತಿ, ಭಾಷೆಗಳನ್ನ ಮೀರಿದ ಕಾರ್ಯಕ್ರಮ ಕಂಬಳ: ಗುರುಕಿರಣ್

ಬೆಂಗಳೂರು: ಬೆಂಗಳೂರು ಕಂಬಳ – ನಮ್ಮ ಕಂಬಳಕ್ಕೆ ದಕ್ಷಿಣ ಕನ್ನಡದ ನಂಟು ಇರುವ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ಕಮರ್ಷಿಯಲ್ ಅಗ್ರಿಮೆಂಟ್ ಅಲ್ಲ. ಆದರೆ ಕಾರ್ಯಕ್ರಮಕ್ಕೆ ಎಲ್ಲರ ಬೆಂಬಲವಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಕನ್ನಡ ಸಿನಿಮಾರಂಗದ ಎಲ್ಲರಿಗೂ ಆಮಂತ್ರಣ ನೀಡಲಾಗಿದ್ದು, ಎಲ್ಲರೂ ಬರುವ ನಿರೀಕ್ಷೆಯಿದೆ. ಶಿವಣ್ಣ ಹಾಗೂ ಅವರ ಪತ್ನಿ ಬರುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಯುವ ಬರುತ್ತಿದ್ದಾರೆ. …

Read More »

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : …

Read More »

ಎಲ್​ಎಂವಿ ಪರವಾನಗಿ ಹೊಂದಿರುವವರು ಲಘು ಸಾರಿಗೆ ವಾಹನ ಓಡಿಸಬಹುದೇ?; ಕೇಂದ್ರಕ್ಕೆ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್

ನವದೆಹಲಿ: ಲಘು ಮೋಟಾರು ವಾಹನ (ಎಲ್‌ಎಂವಿ) ಚಾಲನಾ ಪರವಾನಗಿ ಹೊಂದಿರುವವರು ಎಲ್‌ಎಂವಿ ವರ್ಗದ ಸಾರಿಗೆ ವಾಹನ ಓಡಿಸಲು ಪ್ರತ್ಯೇಕ ಅನುಮೋದನೆಯ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಮುಂದಿನ ವರ್ಷದ ಜನವರಿ 17ರೊಳಗೆ ಸ್ಪಷ್ಟ ಮಾರ್ಗಸೂಚಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರಕ್ಕೆ ಸೂಚಿಸಿದೆ.   ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್.ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು …

Read More »

ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ.: H.D.K.

ಮಂಡ್ಯ: ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ. ಪಾಪ ಕಾಂಗ್ರೆಸ್​ನವರು ಸತ್ಯಹರಿಶ್ಚಂದ್ರನ ವಂಶದವರು ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜಾತಿಗಣತಿಗೆ ಒಕ್ಕಲಿಗರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿಎಂ ಟ್ವೀಟ್ ಅನ್ನು ನಾನು ಗಮನಿಸಿದ್ದೇನೆ. ರಾಹುಲ್ ಗಾಂಧಿ ಭಾವನೆಗೆ ಸ್ಪಂದಿಸಿ ಜಾತಿಗಣತಿ ಪಡೆಯುವ ನಿರ್ಧಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ಕಾಂತರಾಜು ವರದಿ ಮೂಲ ಪ್ರತಿ ಕಳ್ಳತನವಾದ ಮಾಹಿತಿ ಇದೆ. ಒಂದು …

Read More »