Breaking News

ಸುರಂಗ ಮಾರ್ಗಕ್ಕಾಗಿ ಲಾಲ್​ಬಾಗ್​ನಲ್ಲಿ ಮರಗಳನ್ನು ಕಡಿಯುವುದಿಲ್ಲ: ಹೈಕೋರ್ಟ್​ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ನಗರದ ಹೆಬ್ಬಾಳದಿಂದ ಸಿಲ್ಕ್​ ಬೋರ್ಡ್​ವರೆಗಿನ ಉದ್ದೇಶಿತ ಜೋಡಿ ಸುರಂಗ ಮಾರ್ಗದ ಯೋಜನೆಗಾಗಿ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಮರಗಳನ್ನು ಕಡಿಯುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ. ಸುರಂಗ ಮಾರ್ಗದ ಟೆಂಡರ್ ರದ್ದು ಕೋರಿ ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರ ನೇತೃತ್ವದ ವಿಭಾಗೀಯ …

Read More »

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ”

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ” ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಬಿಎ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವಿಷಯ ಸ್ಪಷ್ಟಪಡಿಸಿದರು. “ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ …

Read More »

ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್

ಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ, ಸರ್ಕಾರನೂ ಇರಲ್ಲಾ ಎಂದು ಮಾಜಿ ಸಿಎಂ, ಬೆಳಗಾವಿ ಹಾಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಆಂತರಿಕ ಫೈಟ್ ಜೋರಿದೆ, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟೇ ಬಂದಿದ್ದಾರೆ. …

Read More »

ಸ್ಪೀಕರ್ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ

ಬೆಂಗಳೂರು: ವಿಧಾನಸಭೆಯ ಪ್ರಧಾನ ಬಾಗಿಲಿಗೆ ರೋಸ್ ವುಡ್ ಮರದ ಕೆತ್ತನೆ ಚೌಕಟ್ಟು, ಶಾಸಕರ ಭವನದ ಕೊಠಡಿಗಳಿಗೆ ಸ್ಮಾರ್ಟ್ ಡೋರ್ ಒಳಗೊಂಡಂತೆ ಇನ್ನಿತರ ಸೌಲಭ್ಯ ಕಲ್ಪಿಸಲು ಸ್ಪೀಕರ್ ಯು.ಟಿ.ಖಾದರ್ ಅನಗತ್ಯವಾಗಿ ಟೆಂಡರ್ ಕರೆದು ದುಂದುವೆಚ್ಚ ಮಾಡಿರುವ ಆರೋಪಗಳ ಕುರಿತು ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕೆಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ …

Read More »

ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ!

ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ! ಘಟಪ್ರಭಾ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕಾಗಿ ಮಾನ್ಯ ಗೋಕಾಕ ತಹಶೀಲ್ದಾರರಾದ ಮೋಹನ್ ಭಸ್ಮೆ ಅವರು ಮಂಗಳವಾರ ದಂದು ಭಾಗವಹಿಸಿದ್ದರು. ಪ್ರತಿ ಮನೆ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮೀಕ್ಷೆ ಕಾರ್ಯ ನಡೆಸಿದರು. ಪುರಸಭೆ ಘಟಪ್ರಭಾ ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಮ್.ಎಸ್.ಪಾಟೀಲ, ಸಿಬ್ಬಂದಿಗಳಾದ ರಮೇಶ ಗಂಡವ್ವಗೋಳ, ಲಕ್ಷ್ಮಣ ಹುಣಶ್ಯಾಳೆ, ಅಕ್ಷಯ ಮನಗಾಂವಿ …

Read More »

ಆರೋಪ ಪ್ರತ್ಯಾರೋಪ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇರುವ 54 ಎಕರೆ ಖಾಲಿ

ಚಿಕ್ಕೋಡಿ : ಆರೋಪ ಪ್ರತ್ಯಾರೋಪ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇರುವ 54 ಎಕರೆ ಖಾಲಿ ಜಾಗಕ್ಕೆ ಈಗ ಆರೋಪ ಪ್ರತ್ಯಾರೋಪ ಕೇಳಿ ಬರುತ್ತಿದೆ.. ಯಾರ ಪಾಲಾಗುತ್ತೆ ಈ ಜಮೀನು ಎಸ್ ಸಿ ಎಸ್ ಟಿ ಜನರು ಖರೀದಿಸಿದ ಜಮೀನಕ್ಕೆ ಈಗ ಆರೋಪಗಳು ಕೇಳಿ ಬರ್ತಾ ಇವೆ . ಕುಡಚಿ ಪಟ್ಟಣದಲ್ಲಿ ಎಸ್ ಸಿ ಎಸ್ ಟಿ ಜನರು ಜಮೀನು ಖರೀದಿಸಬಾರದ ಪಟಾಯತ್ ಕುಟುಂಬದಿಂದ ಎಸ್ ಸಿ ಎಸ್ ಟಿ …

Read More »

ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ ಇವರ ಅನುದಾನದಲ್ಲಿ ಆಧುನಿಕವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬರುವ ಕಲ್ಲೆಹೋಳ ಗ್ರಾಮದಲ್ಲಿ ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ ಇವರ ಅನುದಾನದಲ್ಲಿ ಆಧುನಿಕವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಈರಣ್ಣಾ ಕಡಾಡಿ ಇವರು ಮಾತನಾಡುತ್ತಾ ಹೇಳಿದರು ಚುನಾವಣೆಯ ನಂತರ ಯಾವುದೇ ಪಕ್ಷದವರಾಗಲಿ ಅಭಿವೃದ್ಧಿಗೆ ಒಟ್ಟುಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು. ಬೆಳಗಾವಿಯ ಬಿಜೆಪಿ ಗ್ರಾಮೀಣ ಮಂಡಲ ಮಾಜಿ ಅಧ್ಯಕ್ಷ ಶ್ರೀ ಧನಂಜಯ ಜಾದವ್ ಇವರು ಮಾತನಾಡುತ್ತಾ ಶ್ರೀ …

Read More »

ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ…

ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ… ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತಾ ಮಾದರಿಗಳ ಬಗ್ಗೆ ಆಳವಾದ ಅಧ್ಯಯನ ಬೆಳಗಾವಿಯನ್ನು ಸುಂದರ ನಗರವನ್ನಾಗಿ ಪರಿವರ್ತಿಸಲು ಮಹತ್ತರ ಹೆಜ್ಜೆ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗವು ಭಾರತದ ಅತಿ ಸ್ವಚ್ಛ ನಗರವಾದ ಇಂದೋರ್‌ಗೆ ಅಧ್ಯಯನ ಪ್ರವಾಸವನ್ನು ಕೈಗೊಂಡಿತು. ಮಹಾಪೌರ ಮಂಗೇಶ್ ಪವಾರ್, ಉಪ ಮಹಾಪೌರ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕರು ಹಣಮಂತ ಕೊಂಗಾಲಿ ಮತ್ತು ಎಲ್ಲ ನಗರ ಸೇವಕರು …

Read More »

50 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಜರಾಯಿ ದಾಖಲಿಸಲು ಆದೇಶ: ಮಾಜಿ ಸಚಿವ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ

50 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಜರಾಯಿ ದಾಖಲಿಸಲು ಆದೇಶ: ಮಾಜಿ ಸಚಿವ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ಖಾಸಗಿ ಟ್ರಸ್ಟ್‌ ಗೆ ಸಂಬಂಧಿಸಿದ ವಿಜಯಪುರದ ಐವತ್ತಕ್ಕೂ ಹೆಚ್ಚು ದೇವಾಲಯಗಳ ಆಸ್ತಿಯ ದಾಖಲೆಯಲ್ಲಿ ಮುಜರಾಯಿ ಎಂದು ನಮೂದಿಸಲು ಸರ್ಕಾರ ಮುಂದಾಗಿದ್ದು, ಕೂಡಲೇ ನಿರ್ಣಯವನ್ನು ವಾಪಾಸ್ಸು ಪಡೆಯುವಂತೆ ಒತ್ತಾಯಿಸಿ ಮಾಜಿ ಸಚಿವ ಅಪ್ಫಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಯಿತು. ಧರಣಿ ನೇತೃತ್ವ ವಹಿಸಿದ್ದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ …

Read More »

ಧ್ವನಿ ಪರಿಶೀಲನೆಗೆ ತೆರಳಿದ್ದ ಪೊಲೀಸರಿಗೆ ಚಕ್ಕರ್ ಕೊಟ್ಟ ರಮೇಶ್ ಕತ್ತಿ

ಧ್ವನಿ ಪರಿಶೀಲನೆಗೆ ತೆರಳಿದ್ದ ಪೊಲೀಸರಿಗೆ ಚಕ್ಕರ್ ಕೊಟ್ಟ ರಮೇಶ್ ಕತ್ತಿ ಬೆಳ್ಳಂ ಬೆಳಗೆ ರಮೇಶ್ ಕತ್ತಿ ಮನೆಗೆ ವಿಚಾರಣೆಗೆ ಆಗಮಿಸಿದ ಪೊಲೀಸರು ರಮೇಶ್ ಕತ್ತಿ ಸಿಗದ ಕಾರಣ ವಿಚಾರಣೆಗೆ ಹಾಜರಾಗುವಂತೆ ಹೇಳಿ ತೆರಳಿದ ಪೊಲೀಸರು. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶದ ದಿನದಂದು ಬೆಳಗಾವಿಯಲ್ಲಿ ವಾಲ್ಮೀಕಿ ಸಮಾಜದ ಕುರಿತು ಮಾಜಿ ಸಂಸದ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಕತ್ತಿ ಮನೆಗೆ ಬೆಳ್ಳಂ ಬೆಳಗೆ ಪೊಲೀಸರು …

Read More »