Breaking News

ಜನರಿಗೆ ಹೊರೆಯಾದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ

ಬೆಳಗಾವಿ: ರಾಜ್ಯ ಸರ್ಕಾರ ಅಕ್ಟೋಬರ್‌ 1ರಿಂದ ಸ್ಥಿರಾಸ್ತಿಗಳ ನೋಂದಣಿ ಶುಲ್ಕವನ್ನು ಶೇ.25 ರಿಂದ 30ರವರೆಗೂ ಹೆಚ್ಚಳ ಮಾಡಿದ್ದು, ಜಿಲ್ಲೆಯ ಮಧ್ಯಮ ವರ್ಗ ತೊಂದರೆ ಅನುಭವಿಸುವಂತೆ ಮಾಡಿದೆ. ಅಲ್ಲದೇ ಆಸ್ತಿ ಖರೀದಿಸಲು ಜನ ಪರದಾಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭೀಕರ ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಸರ್ಕಾರ ಈ ಶುಲ್ಕ ಹೆಚ್ಚಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಸ್ವಂತ ಮನೆ ಹೊಂದಬೇಕು ಎಂಬ ಮಧ್ಯಮ ವರ್ಗ, ಕೂಲಿಕಾರರ ಕನಸು ಕನಸಾಗಿಯೇ ಉಳಿಯುವಂತೆ ಮಾಡಿದೆ‌ …

Read More »

ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿ ಬಂಧನ

ಉಡುಪಿ: ಇಲ್ಲಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು, ಬೆಳಗಾವಿ ಪೊಲೀಸರ ‌ಸಹಕಾರದಿಂದ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್​​​​ ಅರುಣ್​​​ ಚೌಗಲೆ(35) ಬಂಧಿತ ಆರೋಪಿ. ಬೆಳಗಾವಿಯ ಕುಡುಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಪ್ರವೀಣ್, ಮಂಗಳೂರು ​​ಏರ್​ಪೋರ್ಟ್​ನಲ್ಲಿ​ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಸದ್ಯಕ್ಕೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದು ಬಂದಿದೆ. ಕುಡಚಿಯಲ್ಲಿರುವ …

Read More »

ಬೆಳಗಾವಿಯಲ್ಲಿ ದೀಪಾವಳಿ ಹಬ್ಬ ಗುಡಿ ಪಾಡವಾ ನಿಮಿತ್ತ ಎಮ್ಮೆಗಳ ಓಟ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಲ್ಲ ಹಬ್ಬ, ಉತ್ಸವಗಳನ್ನು ಅದ್ಧೂರಿ ಮತ್ತು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದ ಗುಡಿ ಪಾಡವಾ ನಿಮಿತ್ತ ನಗರದ ವಿವಿಧೆಡೆ ಆಯೋಜಿಸಿದ್ದ ಎಮ್ಮೆಗಳ ಓಟ ನೋಡುಗರನ್ನು ರೋಮಾಂಚನಗೊಳಿಸಿತು. ಎಮ್ಮೆಗಳ ವೈಯ್ಯಾರ, ಶೃಂಗಾರಕ್ಕೆ ಜನ ಮನಸೋತರು. ಎಮ್ಮೆ ಇಲ್ಲಿನ ಗೌಳಿಗರ ಪಾಲಿನ ನಿಜವಾದ ಲಕ್ಷ್ಮೀ ದೇವಿ. ವರ್ಷಪೂರ್ತಿ ಎಮ್ಮೆಗಳನ್ನು ಚೆನ್ನಾಗಿ ಮೇಯಿಸಿ, ಹಾಲು ಕರೆದು ಮಾರಾಟ ಮಾಡಿ ಬದುಕು ಕಟ್ಟಿಕೊಳ್ಳಲು ಶ್ರಮಿಸುವ ಇವರು, ದೀಪಾವಳಿ ಬಂತು ಎಂದರೆ ಸಾಕು …

Read More »

ವಿಶ್ವಕಪ್ ಕ್ರಿಕೆಟ್‌: ಭಾರತ-ನ್ಯೂಜಿಲೆಂಡ್‌ ಹೈವೋಲ್ಟೇಜ್​ ಸೆಮಿ ಫೈನಲ್‌​ ವೀಕ್ಷಿಸಲಿರುವ ರಜಿನಿಕಾಂತ್

ಮುಂಬೈ: ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿಂದು ಭಾರತ-ನ್ಯೂಜಿಲೆಂಡ್‌ ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯ ನಡೆಯಲಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ರೋಚಕ ಹಣಾಹಣಿಗೆ ಆತಿಥ್ಯ ವಹಿಸುತ್ತಿದೆ. ಜಗತ್ತಿನೆಲ್ಲೆಡೆಯ ಕ್ರಿಕೆಟ್‌ ಅಭಿಮಾನಿಗಳು ಈ ಪಂದ್ಯವನ್ನು ಎದುರು ನೋಡುತ್ತಿದ್ದು, ಭಾರತದ ಗೆಲುವಿಗಾಗಿ ಪೂಜೆ-ಪ್ರಾರ್ಥನೆಯಲ್ಲಿ ನಿರತರಾಗಿದ್ದಾರೆ. ಇನ್ನೊಂದೆಡೆ ಸಾವಿರಾರು ಪ್ರೇಕ್ಷಕರೊಂದಿಗೆ ಕ್ರೀಡಾಂಗಣದಲ್ಲೇ ಕುಳಿತು ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತಮಿಳಿನ ಖ್ಯಾತ ನಟ ರಜಿನಿಕಾಂತ್ ಕೂಡಾ ಉತ್ಸುಕರಾಗಿದ್ದಾರೆ. ರಜಿನಿಕಾಂತ್ ಮಾತ್ರವಲ್ಲ, ಪ್ರಸಿದ್ಧ ಮಾಜಿ ಫುಟ್‌ಬಾಲ್ …

Read More »

ನಿಕಟಪೂರ್ವ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರಿಂದ ಅಧಿಕಾರ ಸ್ವೀಕರಿಸಿ ಅಧಿಕೃತವಾಗಿ ಬಿ.ವೈ.ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದರು.

ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್​ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಸಮಾರಂಭದಲ್ಲಿ ಭಾಗವಹಿಸಿ ಬಿ.ಎಸ್‌.ಯಡಿಯೂರಪ್ಪ …

Read More »

ಎಂಎ ಪದವಿ ಪರೀಕ್ಷೆ ಬರೆಯುವ ಮೂಲಕ ಪ್ರೇರಣೆಯಾದ ತೃತೀಯ ಲಿಂಗಿ ದಿವ್ಯಾ

ಕಲಬುರಗಿ: ತೃತೀಯ ಲಿಂಗಿಯೊಬ್ಬರು ಎಂಎ ಪದವಿ ಪರೀಕ್ಷೆ ಬರೆಯುವ ಮೂಲಕ ತಮ್ಮ ಸಮುದಾಯಕ್ಕೆ ಪ್ರೇರಣೆಯಾಗಿದ್ದಾರೆ. ಹೌದು ಸುಪ್ರೀಂ ಕೋರ್ಟ್ ತೃತೀಯ ಲಿಂಗಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದ ಬಳಿಕ ದೇಶದಲ್ಲಿ ಮಂಗಳಮುಖಿ ಮಹಿಳೆಯರ ಶಿಕ್ಷಣದಲ್ಲಿ ಧನಾತ್ಮಕ ಅಭಿವೃದ್ಧಿಯಾಗಿದೆ.   ತನ್ನ ಪರೀಕ್ಷೆಯಲ್ಲಿ ನಿರತರಾಗಿರುವ ದಿವ್ಯಾಕಲಬುರಗಿಯ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ತೃತೀಯ ಲಿಂಗಿ ದಿವ್ಯಾ ಅವರು ಎಂಎ ರಾಜ್ಯಶಾಸ್ತ್ರದ ಅಂತಿಮ ಪರೀಕ್ಷೆ ಬರೆದು …

Read More »

ಕ್ಯಾಪ್ಸಿಕಂ ಬೆಳೆ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ.

ಚಿಕ್ಕೋಡಿ : ಭೀಕರ ಬರಗಾಲದ ನಡುವೆ ಬೆಳೆಗಳಿಗೆ ಟ್ಯಾಂಕರ್​ ಮುಖಾಂತರ ನೀರು ಹಾಯಿಸಿ ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿ ಇತರ ರೈತರಿಗೆ ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಮಾಣಿಕ ಅವಳೆಕರ ಎಂಬ ರೈತ ನೀರಿನ ಅಭಾವದ ನಡುವೆ ಕುಗ್ಗದೇ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಸಿ, ಐದು ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಬಳಸಿ, ಕ್ಯಾಪ್ಸಿಕಂ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ್ದಾರೆ. ಈ …

Read More »

ಪೋಷಕರ ಬುದ್ಧಿವಾದಕ್ಕೆ ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆ

ಬೆಳಗಾವಿ: ದೀಪಾವಳಿ ಹಬ್ಬದ ರಜೆ ಇದೆ ಎಂದು ಸುಮ್ಮನೆ ಹೊರಗಡೆ ತಿರುಗಾಡಬೇಡ, ಓದಿನ ಕಡೆಯೂ ಗಮನ ಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮಹಡಿಯ ಮೇಲಿನ ರೂಮಿನಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಬಾಲಕ ಮೂಡಲಗಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಇನ್ನು ಒಂದು ದಿನದಲ್ಲಿ ಶಾಲೆ …

Read More »

ಇಂದು ಕಿತ್ತೂರು ರಾಣಿ ಚೆನ್ನಮ್ಮನ ಜನ್ಮದಿನ; ಸರ್ಕಾರದಿಂದ ಜಯಂತಿ ಆಚರಿಸಲು ಆಗ್ರಹ

ಬೆಳಗಾವಿ : ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ‌ ರುಚಿ ತೋರಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿ‌ ಆಚರಣೆಗೆ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದು ಮತ್ತು ಚೆನ್ನಮ್ಮನ ಜ‌ನ್ಮದಿ‌ನಾಂಕ ಗೊಂದಲಕ್ಕೆ ಇತಿಶ್ರೀ ಹಾಡದಿರುವುದು ಈ ಭಾಗದ ಸಾಹಿತಿಗಳು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.  1778 ನವೆಂಬರ್​ 14 ಕನ್ನಡ ನಾಡಿನಲ್ಲಿ ಕೆಚ್ಚೆದೆಯ ಕಿತ್ತೂರು ರಾಣಿ ಚೆನ್ನಮ್ಮ ಜನಿಸಿದ ದಿನ. ಚೆನ್ನಮ್ಮನ ಜನ್ಮ ದಿನಾಂಕದ …

Read More »

ಯುವಕನ ಬರ್ಬರ ಕೊಲೆ ಪ್ರಕರಣ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ: ಭಾನುವಾರ ರಾತ್ರಿ ಗೋಕಾಕ್ ಪಟ್ಟಣದಲ್ಲಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಜನ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ.   ಗೋಕಾಕ್ ಪಟ್ಟಣದ ಆದಿಜಾಂಬವ ನಗರದ ಶಾನೂರ (ಸಂತೋಷ) ಪೂಜೇರಿ 26 ವರ್ಷ ಕೊಲೆಯಾದ ಯುವಕ. ಮೃತ ಶಾನೂರ ಸ್ಥಳೀಯ ಪೆಟ್ರೋಲ್ ಪಂಪ್​ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ಪೆಟ್ರೋಲ್ ಪಂಪ್​ನಲ್ಲಿ ಪೂಜೆ ಮುಗಿಸಿಕೊಂಡು ಮರಳಿ ಮನೆಗೆ ಹೋಗುವ …

Read More »